ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಯೋಗದಿಂದ ಚೈತನ್ಯ ಹೆಚ್ಚಳ

Last Updated 9 ಮೇ 2022, 14:41 IST
ಅಕ್ಷರ ಗಾತ್ರ

ವಿಜಯಪುರ: ಮನುಷ್ಯರು ಆರೋಗ್ಯದಿಂದ ಇರಬೇಕಾದರೆ ಯೋಗ ಮುಖ್ಯ. ಪ್ರತಿನಿತ್ಯ ಯೋಗಾಭ್ಯಾಸವನ್ನು ಮಾಡಬೇಕು ಎಂದು ಬಸವಲಿಂಗ ಶಿವಾಚಾರ್ಯ ಸ್ವಾಮೀಜಿ ಹೇಳಿದರು.

ಬಬಲೇಶ್ವರ ತಾಲ್ಲೂಕಿನ ನಿಡೋಣಿ ಗ್ರಾಮದಲ್ಲಿ ವಿಶ್ವಗುರು ಬಸವಣ್ಣ, ಶ್ರೀ ಅಕ್ಕಮಹಾದೇವಿ ಜಯಂತಿ ಹಾಗೂ ಶ್ರೀ ಚನ್ನವೀರ ವಿರಕ್ತಮಠ ಶ್ರೀಮಠದ ವಾರ್ಷಿಕೋತ್ಸವದಲ್ಲಿ ಮಾತನಾಡಿದರು.

ಪ್ರತಿಯೊಬ್ಬರೂ ಯೋಗ ಕಲಿಯಬೇಕು. ಯೋಗಾಭ್ಯಾಸ ಮಾಡುವುದರ ಮೂಲಕ ಜೀವನದಲ್ಲಿ ಚೈತನ್ಯ, ಉತ್ಸಾಹ, ಲವಲಿಕೆ, ನೆಮ್ಮದಿಯಿಂದ ಬದುಕು ಸಾಗಬಲ್ಲದು, ಯೋಗವು ವಿಶ್ವದ ಬಹುತೇಕ ರಾಷ್ಟ್ರಗಳಲ್ಲಿ ರೂಢಿಯಲ್ಲಿದೆಎಂದರು.

ಮಸೂತಿ ಪ್ರಭುಕುಮಾರ ಶಿವಾಚಾರ್ಯ ಸ್ವಾಮೀಜಿ, ಭಕ್ತರಿಗೆ ಶಿವದೀಕ್ಷೆ, ಲಿಂಗಧಾರಣೆ, ರುದ್ರಾಕ್ಷಿ ಧಾರಣೆ ನೆರವೇರಿಸಿದರು. ಮಹಾಲಿಂಗ ಮಹಾಸ್ವಾಮಿ ಅವರುಬಸವೇಶ್ವರ ಪುತ್ಥಳಿಗೆ ಮಾಲಾರ್ಪಣೆ ಮಾಡಿದರು.

ಅಥಣಿ ಮೋಟಗಿ ಮಠದ ಪ್ರಭು ಚನ್ನಬಸವ ಮಹಾಸ್ವಾಮೀಜಿ ರಚಿಸಿದ ಮಹಾತ್ಮರ ಚರಿತಾಮೃತ ಗ್ರಂಥವನ್ನು ಲೋಕಾರ್ಪಣೆ ಮಾಡಲಾಯಿತು.

ಬಸವ ಜಯಂತಿ ನಿಮಿತ್ತ ಗ್ರಾಮದಲ್ಲಿ ಬಸವ, ಅಕ್ಕಮಹಾದೇವಿ ಹಾಗೂ ಚನ್ನವೀರೇಶ್ವರ ಭಾವಚಿತ್ರದೊಂದಿಗೆ ಭವ್ಯ ಮೆರವಣಿಗೆ ನಡೆಯಿತು.

ಶ್ರೀ ಮಠದ ಪೀಠಾದಿಪತಿ ಸಿದ್ದಲಿಂಗ ಮಹಾಸ್ವಾಮೀಜಿ ಸಾನ್ನಿಧ್ಯ ವಹಿಸಿದ್ದರು. ಕಾರ್ಯಕ್ರಮದಲ್ಲಿ ಸುತ್ತಮುತ್ತಲಿನ ಭಕ್ತರು ಭಾಗವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT