ಭಾನುವಾರ, ಜೂನ್ 13, 2021
23 °C
ಧ್ವಜಾರೋಹಣ ನೆರವೇರಿಸಲಿರುವ ಸಚಿವೆ ಶಶಿಕಲಾ ಜೊಲ್ಲೆ

ಸ್ವಾತಂತ್ರ್ಯ ದಿನಾಚರಣೆ ಪೂರ್ವಭಾವಿ ಸಿದ್ಧತೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ವಿಜಯಪುರ: ಇಲ್ಲಿನ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ ಕ್ರೀಡಾಂಗಣದಲ್ಲಿ ಆಗಸ್ಟ್ 15 ರಂದು ಆಯೋಜಿಸಲಾಗಿರುವ ಸ್ವಾತಂತ್ರ್ಯ ದಿನಾಚರಣೆ ಪೂರ್ವಭಾವಿ ಸಿದ್ಧತೆಗಳನ್ನು ಜಿಲ್ಲಾಧಿಕಾರಿ ಪಿ.ಸುನೀಲ್‌ ಕುಮಾರ್‌ ಗುರುವಾರ ವೀಕ್ಷಿಸಿದರು.

ಸ್ವಾತಂತ್ರ್ಯ ದಿನಾಚರಣೆ ಸಂದರ್ಭದಲ್ಲಿ ಧ್ವಜಾರೋಹಣ ಸ್ಥಳದಲ್ಲಿ, ಪರೇಡ್‌ನಲ್ಲಿ ಲೋಪಕ್ಕೆ ಅವಕಾಶ ನೀಡದೆ ಅಚ್ಚುಕಟ್ಟಾಗಿ ಕಾರ್ಯಕ್ರಮ ಆಯೋಜಿಸಬೇಕು. ಶಿಷ್ಟಾಚಾರದಂತೆ ಗಣ್ಯರನ್ನು ಆಹ್ವಾನಿಸಬೇಕು ಎಂದು ಸೂಚಿಸಿದರು.

ಧ್ವಜಾರೋಹಣ ಸಂದರ್ಭದಲ್ಲಿ ಮಳೆಯಿಂದ ಆಶ್ರಯ ಪಡೆಯಲು ಧ್ವಜಾರೋಹಣ ಮಾಡುವ ಸ್ಥಳದಲ್ಲಿ, ಆಸನದ ಸ್ಥಳದಲ್ಲಿ ಮಳೆ ನೀರು ಬಾರದಂತೆ ಶೆಡ್‍ಗಳನ್ನು ಹಾಕಬೇಕು. ಶೌಚಾಲಯ, ಮಾಸ್ಕ್, ಸ್ಯಾನಿಟೈಸರ್ ವ್ಯವಸ್ಥೆ ಹಾಗೂ ಆಸನಗಳನ್ನು ಪರಸ್ಪರ ಅಂತರ ಕಾಯ್ದುಕೊಳ್ಳುವಂತೆ ಹಾಕಬೇಕು ಎಂದರು.

ಕೋವಿಡ್ 19 ಸಾಂಕ್ರಾಮಿಕ ರೋಗ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಕ್ರೀಡಾಂಗಣದ ಪ್ರವೇಶದ್ವಾರದಲ್ಲಿ ಮಾಸ್ಕ್ ಹಾಗೂ ಸ್ಯಾನಿಟೈಸರ್ ವ್ಯವಸ್ಥೆಯನ್ನು ಮಾಡಿಕೊಳ್ಳಬೇಕು ಹಾಗೂ ಅಂತರ ಕಾಪಾಡಿಕೊಳ್ಳುವಂತೆ ನೋಡಿಕೊಳ್ಳಬೇಕು. ಕಾರ್ಯಕ್ರಮದ ಪೂರ್ವ ಸಿದ್ಧತೆಯಾಗಿ ಪರೇಡ್ ಮಾಡಲು ಹಾಗೂ ದ್ವಜಾರೋಹಣ ಮಾಡಲು ಎಲ್ಲ ಸಿದ್ಧತೆ ಮುಂಚಿತವಾಗಿಯೇ ವ್ಯವಸ್ಥಿತವಾಗಿ ಮಾಡಿಕೊಂಡಿರಬೇಕು ಎಂದರು.

ಜಿಲ್ಲಾ  ಪೊಲೀಸ್‌ ವರಿಷ್ಠಾಧಿಕಾರಿ ಅನುಪಮ್ ಅಗರವಾಲ್, ವಿಶ್ವವಿದ್ಯಾಲಯದ ಕುಲಪತಿ ಓಂಕಾರ ಕಾಕಡೆ, ಮಹಾನಗರ ಪಾಲಿಕೆ ಆಯುಕ್ತ ಶ್ರೀಹರ್ಷ ಶೆಟ್ಟಿ, ವಿಜಯಪುರ ಉಪ ವಿಭಾಗಾಧಿಕಾರಿ ಸೋಮಲಿಂಗ ಗೆಣ್ಣೂರ, ತಹಶೀಲ್ದಾರ್‌ ಮೋಹನ್ ಕುಮಾರಿ, ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕ ಎಸ್.ಬಿ. ಲೋಣಿ, ತೋಟಗಾರಿಕೆ ಇಲಾಖೆ ಉಪನಿರ್ದೇಶಕ ಸಂತೋಷ ಇನಾಂದಾರ ಇದ್ದರು.

ಸಚಿವೆ ಜೊಲ್ಲೆ ಧ್ವಜಾರೋಹಣ: ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ ಕ್ರೀಡಾಂಗಣದಲ್ಲಿ ಜಿಲ್ಲಾಡಳಿತ ಆಶ್ರಯದಲ್ಲಿ ಆಗಸ್ಟ್‌ 15ರಂದು ಬೆಳಿಗ್ಗೆ 9ಕ್ಕೆ ಸ್ವಾತಂತ್ಸೋತವ ಆಚರಿಸಲಾಗುತ್ತಿದ್ದು. ಜಿಲ್ಲಾ ಉಸ್ತುವಾರಿ ಸಚಿವೆ ಶಶಿಕಲಾ ಜೊಲ್ಲೆ ಧ್ವಜಾರೋಹಣ ನೆರವೇರಿಸುವರು.

ಶಾಸಕ ಬಸನಗೌಡ ಪಾಟೀಲ ಯತ್ನಾಳ ಅಧ್ಯಕ್ಷತೆ ವಹಿಸುವರು, ಜಿಲ್ಲಾ ಪಂಚಾಯ್ತಿ ಅಧ್ಯಕ್ಷ ಸುಜಾತಾ ಕಳ್ಳಿಮನಿ, ಜಿಲ್ಲೆಯ ಶಾಸಕರು, ಸಂಸದರು ಹಾಗೂ ವಿಧಾನ ಪರಿಷತ್ ಸದಸ್ಯರು  ಭಾಗವಹಿಸಲಿದ್ದಾರೆ.

ಕಾರ್ಯಕ್ರಮದಲ್ಲಿ ಧ್ವಜಾರೋಹಣ, ರಾಷ್ಟ್ರಗೀತೆ, ಪಥಸಂಚಲನ ಹಾಗೂ ಸಚಿವರಿಂದ ಸ್ವಾತಂತ್ರೋತ್ಸವದ ಸಂದೇಶ ಇರಲಿದೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.