ಗುರುವಾರ , ಜೂನ್ 17, 2021
29 °C

ಸ್ವಾತಂತ್ರ್ಯ ದಿನಾಚರಣೆ: ಸಿದ್ಧತೆ ಪರಿಶೀಲನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ವಿಜಯಪುರ: ನಗರದ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ ಕ್ರೀಡಾಂಗಣದಲ್ಲಿ ಜಿಲ್ಲಾಡಳಿತದಿಂದ ಪ್ರಥಮ ಬಾರಿಗೆ ಆಯೋಜಿಸಲಾಗಿರುವ ಸ್ವಾತಂತ್ರ್ಯ ದಿನೋತ್ಸವಕ್ಕೆ ಕೈಗೊಂಡಿರುವ ಸಿದ್ಧತೆಗಳನ್ನು  ಹೆಚ್ಚುವರಿ ಜಿಲ್ಲಾಧಿಕಾರಿ ಡಾ. ಔದ್ರಾಮ್ ಮಂಗಳವಾರ ವೀಕ್ಷಿಸಿದರು.

ಸ್ವಾತಂತ್ರ್ಯ ದಿನಾಚರಣೆಗೆ ಸಂಬಂಧಪಟ್ಟಂತೆ ಅಗತ್ಯ ಸಿದ್ಧತೆ ಮಾಡಿಕೊಳ್ಳಬೇಕು. ಯಾವುದೇ ಲೋಪಕ್ಕೆ ಅವಕಾಶ ನೀಡದೆ, ಅಚ್ಚುಕಟ್ಟಾಗಿ ಕಾರ್ಯಕ್ರಮ ಆಯೋಜಿಸಬೇಕು ಎಂದು ಸೂಚಿಸಿದರು.

ಕೋವಿಡ್ 19 ಸಾಂಕ್ರಾಮಿಕ ರೋಗ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಕ್ರೀಡಾಂಗಣದ ಪ್ರವೇಶದ್ವಾರದಲ್ಲಿ ಮಾಸ್ಕ್ ಹಾಗೂ ಸ್ಯಾನಿಟೈಸರ್ ವ್ಯವಸ್ಥೆ ಮಾಡಿಕೊಳ್ಳಬೇಕು ಹಾಗೂ ಅಂತರ ಕಾಪಾಡಿಕೊಳ್ಳುವಂತೆ ನೋಡಿಕೊಳ್ಳಬೇಕು ಎಂದರು.

ಕಾರ್ಯಕ್ರಮದಲ್ಲಿ ಭಾಗವಹಿಸಿದವರಿಗೆ ಕೂರಲು ಪರಸ್ಪರ ಅಂತರದಲ್ಲಿ ಆಸನದ ವ್ಯವಸ್ಥೆ ಹಾಗೂ ಕುಡಿಯುವ ನೀರಿನ ವ್ಯವಸ್ಥೆ ಮಾಡಬೇಕು ಎಂದು ಸೂಚಿಸಿದರು.

ವಿಜಯಪುರ ಉಪ ವಿಭಾಗಾಧಿಕಾರಿ ಸೋಮಲಿಂಗ ಗೆಣ್ಣೂರ, ತಹಶೀಲ್ದಾರ್‌ ಮೋಹನ್‍ಕುಮಾರಿ, ನಿಂಗಪ್ಪ ಗೋಠೆ, ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕ ಲೋಣಿ ಇದ್ದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.