ಇಂಡಿ: ನಗರದ ಬಸವೇಶ್ವರ ವೃತ್ತದಲ್ಲಿ ಜಮಾಯಿಸಿದ ಕಾಂಗ್ರೆಸ್ ಕಾರ್ಯಕರ್ತರು ಸೋಮವಾರ ಶಾಸಕ ಯಶವಂತರಾಯಗೌಡ ಪಾಟೀಲರಿಗೆ ಸಚಿವ ಸ್ಥಾನ ನೀಡಬೇಕೆಂದು ಆಗ್ರಹಿಸಿದರು.

ಈ ವೇಳೆ ಮಾತನಾಡಿದ ಜಿಲ್ಲಾ ಗ್ಯಾರಂಟಿ ಸಮಿತಿ ಅಧ್ಯಕ್ಷ ಇಲಿಯಾಸ ಬೋರಾಮಣಿ, ‘ಅನುಭವ, ಹಿರಿತನ, ಪಕ್ಷ ನಿಷ್ಠೆ ಹಾಗೂ ಜನಪರ ಕಾರ್ಯ ಮಾಡಿದ ಶಾಸಕ ಯಶವಂತರಾಯಗೌಡ ಪಾಟೀಲ ಅವರಿಗೆ ಸಚಿವ ಸ್ಥಾನ ನೀಡಬೇಕು’ ಎಂದು ಒತ್ತಾಯಿಸಿದರು.

ಕಾಂಗ್ರೆಸ್ ಮಹಿಳಾ ತಾಲ್ಲೂಕು ಘಟಕದ ಅಧ್ಯಕ್ಷೆ ನಿರ್ಮಲಾ ತಳಕೇರಿ ಮಾತನಾಡಿ, ‘ಶಾಸಕ ಯಶವಂತರಾಯಗೌಡ ಪಾಟೀಲರಿಗೆ ಅಪಾರ ಆಡಳಿತ ಅನುಭವ ಮತ್ತು ಜನಸೇವೆಯ ಪರಿಪಕ್ವತೆಯನ್ನು ಗಳಿಸಿದ್ದಾರೆ. ಜನಸಾಮಾನ್ಯರ ಸಮಸ್ಯೆಗಳಿಗೆ ಸ್ಪಂದಿಸುವ ನಾಯಕತ್ವ, ಪಕ್ಷ ಸಂಘಟನೆಗೆ ನೀಡಿದ ಕೊಡುಗೆ ಹಾಗೂ ಗಡಿನಾಡಿನ ಅಭಿವೃದ್ಧಿಯ ಕುರಿತು ಅವರ ಬದ್ಧತೆ ಸದಾ ಶ್ಲಾಘನೀಯ’ ಎಂದರು.

ಪುರಸಭೆ ಮಾಜಿ ಅಧ್ಯಕ್ಷ ಶ್ರೀಕಾಂತ ಕುಡಿಗನೂರ ಮಾತನಾಡಿ, ‘ಇಂಡಿ ಭಾಗವು ಸ್ವಾತಂತ್ರ್ಯಾನಂತರ ಇಂದಿನವರೆಗೂ ಸಚಿವ ಸ್ಥಾನದಿಂದ ವಂಚಿತವಾಗಿದೆ. ಈ ಹಿನ್ನೆಲೆಯಲ್ಲಿ ಪ್ರಾದೇಶಿಕ ನ್ಯಾಯದ ದೃಷ್ಟಿಯಿಂದ ಈ ಬಾರಿ ಸಚಿವ ಸಂಪುಟದಲ್ಲಿ ಇಂಡಿ ಮತಕ್ಷೇತ್ರಕ್ಕೆ ಪ್ರಾತಿನಿಧ್ಯ ನೀಡುವುದು ಅತ್ಯಂತ ಅಗತ್ಯವಾಗಿದೆ’ ಎಂದರು.

ಮುತ್ತಪ್ಪ ಪೋತೆ, ಬಿ.ಸಿ.ಸಾಹುಕಾರ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಶಿವಯೋಗಪ್ಪ ಚನಗೊಂಡ , ನೀಲಕಂಠಗೌಡ ಪಾಟೀಲ, ಇಂಡಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಅಜೀತ ಧನಶೆಟ್ಟಿ ಹುಚ್ಚಪ್ಪ ತಳವಾರ, ಸಣ್ಣಪ್ಪ ತಳವಾರ ಹುಸೇನ ಜಮಾದಾರ ಮಾತನಾಡಿದರು. ಪ್ರತಿಭಟನೆಯಲ್ಲಿ ಅವಿನಾಶ ಬಗಲಿ, ಜಾವೇದ ಮೋಮಿನ, ಭೀಮಣ್ಣ ಕವಲಗಿ, ಸತ್ತಾರ ಬಾಗವಾನ, ಪ್ರಶಾಂತ ಕಾಳೆ, ಭೀಮಾಶಂಕರ ಮೂರಮನ, ಮಿಲಿಂದ ಹೊಸಮನಿ, ಆಶಿಫ್ ಕಾರಬಾರಿ, ಪುರಸಭೆ ಮಾಜಿ ಅಧ್ಯಕ್ಷ ಯಮನಾಜಿ ಸಾಳುಂಕೆ, ಧರ್ಮರಾಜ ವಾಲಿಕಾರ, ರೈಸ ಅಷ್ಟೇಕರ, ಮುಕ್ತಾರ ಇಂಡಿಕರ, ಜಯನೋದ್ದೀನ ಬಾಗವಾನ, ಅಬು ತಲೀಬ ಹೊಸುರ, ಬಸೀರ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260602-26-672398072

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.