ಇಂಡಿ: ‘ಶಾಸಕ ಯಶವಂತರಾಯಗೌಡ ಪಾಟೀಲ ಅವರಿಂದ ದಲಿತ ಸಮುದಾಯಕ್ಕೆ ಅನ್ಯಾಯ, ಅವಮಾನ ಆಗಿದಿಲ್ಲ. ಶಾಸಕರ ಬಗ್ಗೆ ಇಲ್ಲಸಲ್ಲದ ಆರೋಪ ಮಾಡುವುದು ಸರಿಯಲ್ಲ’ ಎಂದು ದಲಿತ ಮುಖಂಡ ಮುತ್ತಪ್ಪ ಪೋತೆ ಹೇಳಿದರು.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು,‘ದಲಿತ ಸಮುದಾಯದ ವ್ಯಕ್ತಿಯನ್ನು ಪುರಸಭೆ ಅಧ್ಯಕ್ಷರನ್ನಾಗಿ, ಗ್ಯಾರಂಟಿ ಅನುಷ್ಠಾನ ಸಮಿತಿ ತಾಲ್ಲೂಕು ಅಧ್ಯಕ್ಷರನ್ನಾಗಿ ಮಾಡಿದ್ದಾರೆ. ಇದು ಸಮುದಾಯಕ್ಕೆ ಹೆಮ್ಮೆ ತರುವ ವಿಷಯ.ಶಾಸಕರು ಎಲ್ಲ ಸಮುದಾಯದ ಬಗ್ಗೆ ಗೌರವ, ಕಾಳಜಿ ಹೊಂದಿದ್ದಾರೆ’ ಎಂದು ತಿಳಿಸಿದರು.

ಛಲವಾದಿ ಸಮಾಜದ ಮುಖಂಡ ಭೀಮಾಶಂಕರ ಮಾತನಾಡಿ, ‘ಜಿತೇಂದ್ರ ಕಾಂಬಳೆ ಅವರು ಮಗುವಿನ ವಿಷಯ ಮುಂದಿಟ್ಟುಕೊಂಡು ಸಮಾಜದ ಹೆಸರು ಬಳಸಿಕೊಂಡು ಶಾಸಕರ ತೇಜೋವಧೆ ಮಾಡುತ್ತಿದ್ದು, ಇದನ್ನು ಬಿಡಬೇಕು. ಇಲ್ಲದಿದ್ದರೆ ಅವರ ವಿರುದ್ಧ ಸಮುದಾಯ ಕಠಿಣ ನಿಲುವು ಕೈಗೊಳ್ಳಲಿದೆ’ ಎಂದು ಎಚ್ಚರಿಕೆ ನೀಡಿದರು.

ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ತಾಲ್ಲೂಕು ಅಧ್ಯಕ್ಷ ಪ್ರಶಾಂತ ಕಾಳೆ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260527-26-1214133088

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.