ಇಂಡಿ: ‘ಕನ್ನಡ ನಮ್ಮೆಲ್ಲರ ಉಸಿರಾಗಲಿ. ಕನ್ನಡ ಸಾಹಿತ್ಯ ಪರಿಷತ್ತು ಪ್ರಾತಿನಿಧಿಕ ಸಂಸ್ಥೆಯಾಗಿದ್ದು, ನಾಡು-ನುಡಿಗಾಗಿ ಹಗಲಿರಳು ಕನ್ನಡ ಭಾಷೆಯ ಅಭಿಮಾನ ಮೂಡಿಸುವಂತಹ ಕಾರ್ಯ ಶ್ಲಾಘನೀಯವಾಗಿದೆ ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾ ಘಟಕದ ಅಧ್ಯಕ್ಷ ಹಾಸಿಂಪೀರ ವಾಲಿಕಾರ ಹೇಳಿದರು.

ಅವರು ಶನಿವಾರ ಇಂಡಿ ಪಟ್ಟಣದ ಕನ್ನಡ ಸಾಹಿತ್ಯ ಪರಿಷತ್ತಿನ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ 112ನೇ ಕನ್ನಡ ಸಾಹಿತ್ಯ ಪರಿಷತ್ತಿನ ಸಂಸ್ಥಾಪನಾ ದಿನಾಚರಣೆಯಲ್ಲಿ ನಾಲ್ವಡಿ ಕೃಷ್ಣರಾಜ ಒಡೆಯರ ಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಮಾತನಾಡಿದರು.

‘ಎಂಟು ಜ್ಞಾನಪೀಠ ಪ್ರಶಸ್ತಿಗಳನ್ನು ಪಡೆದ ಹೆಮ್ಮೆಯ ರಾಜ್ಯ ನಮ್ಮದಾಗಿದೆ. ಕನ್ನಡ ಸಾಹಿತ್ಯ ಪರಿಷತ್ತಿಗೆ ಸದಸ್ಯರಾಗುವ ಮೂಲಕ ಕನ್ನಡ ಸಾಹಿತ್ಯ ಪರಿಷತ್ತನ್ನು ಬೆಳೆಸಬೇಕು’ ಎಂದು ಅವರು ಹೇಳಿದರು.

ಕವಿಯಿತ್ರಿ ಹಾಗೂ ಗೌರವ ಕಾರ್ಯದರ್ಶಿ ಪಾರ್ವತಿ ಸೊನ್ನದ ಮಾತನಾಡಿ, ‘ವಚನ ಸಾಹಿತ್ಯ ಹಾಗೂ ಜನಪದ ಸಾಹಿತ್ಯ ಕನ್ನಡ ಸಾಹಿತ್ಯ ಪರಿಷತ್ತಿಗೆ ಆಧಾರ. ಕನ್ನಡ ನೆಲ-ಜಲ ಕಾಪಾಡುವುದು ನಮ್ಮೆಲ್ಲರ ಹೊಣೆಯಾಗಿದೆ. ಕನ್ನಡಿಗರಾದ ನಾವುಗಳು ಕನ್ನಡ ಕಟ್ಟೋಣ ಮತ್ತು ಬೆಳೆಸೋಣ’ ಎಂದರು.

ಇಂಡಿ ಶಿಕ್ಷಕ ಸಂಘದ ಅಧ್ಯಕ್ಷ ವೈ.ಟಿ.ಪಾಟೀಲ ಮಾತನಾಡಿ, ‘ಜಿಲ್ಲೆಯಲ್ಲಿ ಕನ್ನಡ ಸಾಹಿತ್ಯ ಚಟುವಟಿಕೆಗಳು ನಿರಂತರ ನಡೆಯುತ್ತಿರುವುದರಿಂದ ಕನ್ನಡಸಾಹಿತ್ಯದ ವಾತಾವರಣ ನಿರ್ಮಾಣವಾಗಿದೆ. ಇಂಡಿಯಲ್ಲಿ ಸಾಹಿತ್ಯಾಸಕ್ತರು ಇರುವುದರಿಂದ ತಾಲ್ಲೂಕು ಕನ್ನಡ ಸಾಹಿತ್ಯ ಸಮ್ಮೇಳನ ಆಚರಿಸಬೇಕು’ ಎಂದರು.

ಕಾರ್ಯಕ್ರಮದಲ್ಲಿ ಕನ್ನಡ ಸಾಹಿತ್ಯ ಪರಿಸತ್ತಿನ ಪದಾಧಿಕಾರಿಗಳಾದ ಅಹಮ್ಮದ ವಾಲಿಕಾರ, ಆನಂದ ಕೆಂಭಾವಿ, ಜಯಶ್ರೀ ತೆಲಗಿ, ಎಸಿ ಎಟಿ ನೌಕರರ ಸಂಘ ಅಧ್ಯಕ್ಷ ಬಿ. ಎಂ. ವಠಾರ, ಬಿ. ಬಿ. ಸುತಾರ, ಖಲೀಲ ಅತ್ತಾರ, ಅರವಿಂದ ಮೇತ್ರಿ, ಕಲ್ಲನಗೌಡ ಬಿರಾದಾರ, ಗೀತಾ ಹೀರೇಮಾಳ, ಶಾಕೀರ ಪಠಾಣ, ಮಹಮ್ಮದರಪೀಕ ಬಗಲಿ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260512-26-1536730332

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.