ಇಂಡಿ: ಶಾಸಕ ಯಶವಂತರಾಯಗೌಡ ಪಾಟೀಲ ಅವರಿಗೆ ನೂತನ ಮುಖ್ಯಮಂತ್ರಿ ಡಿ.ಕೆ.ಶಿವುಕುಮಾರ ಅವರ ಮಂತ್ರಿ ಮಂಡಲದಲ್ಲಿ ಸಚಿವ ಸ್ಥಾನ ನೀಡಬೇಕೆಂದು ತಡವಲಗಾ ಗ್ರಾಮದ ರಾಚೋಟೇಶ್ವರ ಸ್ವಾಮೀಜಿ ಮನವಿ ಮಾಡಿದ್ದಾರೆ.

ಮಠದ ಆವರಣದಲ್ಲಿ ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಹಿಂದುಳಿದ ಇಂಡಿ ವಿಧಾನ ಸಭಾ ಮತಕ್ಷೇತ್ರಕ್ಕೆ ಸ್ವಾತಂತ್ರ್ಯಾನಂತರ ಇಲ್ಲಿಯವರೆಗೆ ಸಚಿವ ಸ್ಥಾನ ಸಿಕ್ಕಿಲ್ಲ. ಶಾಸಕ ಯಶವಂತರಾಯಗೌಡ ಪಾಟೀಲ ಸಾತ್ವಿಕ ರಾಜಕಾರಣಿ. ಬಡವರ, ದೀನದುರ್ಬಲರ ಬಗ್ಗೆ ಅನುಕಂಪ ಹೊಂದಿರುವ ವ್ಯಕ್ತಿ. 3 ಬಾರಿ ಜಯಸಾಧಿಸಿದ ಜನನಾಯಕ ಎಂದರು.

ಇಂಡಿ ಹಿಂದುಳಿದ ತಾಲ್ಲೂಕು. ನೀರಾವರಿ, ಶಿಕ್ಷಣ , ಉದ್ಯೋಗ ಕ್ಷೇತ್ರದ ಸಮಸ್ಯಗಳಿಗೆ ಪರಿಹಾರೆವಂದರೆ ಈ ಭಾಗದ ಶಾಸಕರು ಸಚಿವರಾಗಬೇಕು ಎಂದರು.

ಶಾಸಕರಾದ ನಂತರ ಯಶವಂತರಾಯಗೌಡರು ಅನೇಕ ಅಭಿವೃದ್ದಿ ಕೆಲಸಗಳು ಮಾಡಿದ್ದಾರೆ. ಇಂಡಿ ತಾಲ್ಲೂಕಿನಲ್ಲಿ ಕೆರೆ ತುಂಬುವ ಯೋಜನೆ, ರೇವಣ ಸಿದ್ದೇಶ್ವರ ಏತ ನೀರಾವರಿ, ಭೀಮಾಶಂಕರ ಸಹಕಾರಿ ಸಕ್ಕರೆ ಕಾರ್ಖಾನೆ, ಲಿಂಬೆ ಅಭಿವೃದ್ದಿ ಮಂಡಳಿ , ಕೃಷಿ ವಿಜ್ಞಾನ ಕೇಂದ್ರ ಮುಂತಾದ ಕೆಲಸಗಳನ್ನು ಮಾಡಿದ್ದಾರೆ ಎಂದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260603-26-277189406

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.