ಇಂಡಿ: ತಾಲ್ಲೂಕಿನ ಸುಕ್ಷೇತ್ರ ಲಚ್ಯಾಣದ ಲಿಂಗೈಕ್ಯ ಸಿದ್ಧಲಿಂಗ ಮಹಾರಾಜರ ಕಮರಿಮಠದಲ್ಲಿ ಸದ್ಗುರು ಶಂಕರಲಿಂಗೇಶ್ವರ ಮಹಾರಥೋತ್ಸವದ ಅಂಗವಾಗಿ ಏಪ್ರಿಲ್ 6 ರಿಂದ 11ರ ವರೆಗೆ ವಿವಿಧ ಧಾರ್ಮಿಕ, ಕ್ರೀಡೆ, ಸಾಂಸ್ಕೃತಿಕ ಕಾರ್ಯಕ್ರಮ ಆಯೋಜಿಸಲಾಗಿದೆ.

ಏಪ್ರಿಲ್ 6 ರಂದು ಜಾನುವಾರು ಜಾತ್ರೆಗೆ ಚಾಲನೆ ನೀಡಲಾಗುವುದು. 7 ರಂದು ಮಠದ ಆವರಣದಲ್ಲಿ ಜರುಗುವ ಷಟಸ್ಥಲ ಧ್ವಜಾರೋಹಣವನ್ನು ಜಕನೂರಿನ ಸಿದ್ಧಲಿಂಗ ದೇವರು ನೇರವೇರಿಸಲಿದ್ದಾರೆ. ಬಳಿಕ ಸರ್ವ ಧರ್ಮದ ಸರಳ ಸಾಮೂಹಿಕ ವಿವಾಹ ಕಾರ್ಯಕ್ರಮ ಆಯೋಜಿಸಲಾಗಿದೆ.

ಬಂಥನಾಳ ಹಾಗೂ ಲಚ್ಯಾಣ ಮಠದ ಪೀಠಾಧೀಶ ವೃಷಭಲಿಂಗೇಶ್ವರ ಮಹಾಶಿವಯೋಗಿಗಳು, ಯರನಾಳದ ವಿರಕ್ತಮಠದ ಗುರುಸಂಗನಬಸವ ಸ್ವಾಮೀಜಿ, ಹಳಿಂಗಳಿಯ ಕಮರಿಮಠದ ಶಿವಾನಂದ ಸ್ವಾಮೀಜಿ, ಮುಗಳಖೋಡದ ಮುರುಘರಾಜೇಂದ್ರ ಸ್ವಾಮೀಜಿ, ಜಕನೂರಿನ ಸಿದ್ಧಲಿಂಗ ದೇವರು, ಚಿಕ್ಕಪಡಸಲಗಿಯ ಮಾತೋಶ್ರೀ ಅಕ್ಕಮಹಾದೇವಿ ಅಮ್ಮನವರು, ಹೂವಿನ ಹಿಪ್ಪರಗಿಯ ಮಾತೋಶ್ರೀ ದ್ರಾಕ್ಷಾಯಣಿ ಅಮ್ಮನವರು ಹಾಗೂ ತುಂಗಳದ ಮಾತೋಶ್ರೀ ಅನಸೂಯಾದೇವಿ ಅಮ್ಮನವರು ಸಾನ್ನಿಧ್ಯ ವಹಿಸಲಿದ್ದಾರೆ.

8 ರಂದು ವೃಷಭಲಿಂಗೇಶ್ವರ ಮಹಾಶಿವಯೋಗಿಗಳ ಅಡ್ಡಪಲ್ಲಕ್ಕಿ ಉತ್ಸವ ಹಾಗೂ ಅಗ್ನಿ ಶಮನ ಕಾರ್ಯಕ್ರಮ ನಡೆಯಲಿದೆ. ಸಂಜೆ 5 ಗಂಟೆಗೆ ಬಂಥನಾಳದ ಶಂಕರಲಿಂಗೇಶ್ವರ ಶಿವಯೋಗಿಗಳ ಮಹಾರಥೋತ್ಸವ ನೆರವೇರಲಿದೆ. ಏ.9 ರಂದು ಬೆಳಿಗ್ಗೆ 9ಕ್ಕೆ ಪ್ರಸಿದ್ಧ ಜಂಗಿ ಕುಸ್ತಿ ಪಂದ್ಯ ನಡೆಯಲಿದೆ. ಬಳಿಕ ಕಲಾವಿದೆ ವಿದ್ಯಾಶ್ರೀ ಮಸಬಿನಾಳ ಹಾಗೂ ಲಕ್ಷ್ಮಣ ಖಣದಾಲ ಅವರಿಂದ ಗಿ ಗೀ ಪದಗಳು ಜರುಗಲಿವೆ. ಸಂಜೆ 4ಕ್ಕೆ ಸೋಲಾಪುರದ ಶ್ರೀಮಂತ ಬಾಬಾಸಾಹೇಬ ವಾರದ ಕುಟುಂಬದವರು ಕೊಡಮಾಡಿದ ಬೆಳ್ಳಿ ಗದೆಯ ಕುಸ್ತಿ ಪಂದ್ಯ ನಡೆಯಲಿದೆ. ಸ್ಥಳೀಯ ಕುಸ್ತಿಪಟು ಚಂದಪ್ಪ ಯಳಮೇಲಿ ಬೆಳ್ಳಿ ಗದೆಯ ಸೇವೆ ಸಲ್ಲಿಸಲಿದ್ದಾರೆ. ಏಪ್ರಿಲ್ 10 ರಂದು ಉತ್ತಮ ರಾಸುಗಳಿಗೆ ಪ್ರಶಸ್ತಿ ಪತ್ರ ವಿತರಿಸಲಾಗುವದು ಎಂದು ಶ್ರೀ ಮಠದ ಪ್ರಕಟಣೆ ತಿಳಿಸಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260330-26-556440171

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.