ಇಂಡಿ: ‘ಎಸ್ಎಸ್ಎಲ್ಸಿ ಪರೀಕ್ಷೆ ಪ್ರಾರಂಭವಾಗಿದ್ದು, ಯಾವುದೇ ಶಾಲೆ ಹಾಗೂ ಹಾಸ್ಟೆಲ್ಗಳಲ್ಲಿ ನೀರಿನ ಸಮಸ್ಯೆ ಆಗದಂತೆ ಕ್ರಮ ಕೈಕೊಳ್ಳಬೇಕು’ ಎಂದು ಕಂದಾಯ ಉಪವಿಭಾಗಾಧಿಕಾರಿ ಚಿದಾನಂದ ಗುರುಸ್ವಾಮಿ ತಿಳಿಸಿದರು.

ತಾಲ್ಲೂಕು ಪಂಚಾಯಿತಿ ಸಭಾಭವನದಲ್ಲಿ ಮಂಗಳವಾರ ಕುಡಿಯುವ ನೀರಿನ ಸಮಸ್ಯೆ ಕುರಿತು ನಡೆದ ಟಾಸ್ಕ್ ಫೋರ್ಸ್ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

‘ಬೇಸಿಗೆಯಲ್ಲಿ ನೀರಿನ ಅಭಾವ ಆಗದಂತೆ ಸಮರ್ಪಕವಾಗಿ ಕುಡಿಯುವ ನೀರು ಪೂರೈಸಬೇಕು. ನೀರಿನ ಸಮಸ್ಯೆ ಉದ್ಭವಿಸಬಹುದಾದ ಸ್ಥಳಗಳ ಕುರಿತು ಮುಂಚಿತವಾಗಿ ಮಾಹಿತಿ ಸಲ್ಲಿಸಬೇಕು’ ಎಂದರು.

‘ನಗರ ನೀರು ಸರಬರಾಜಿಗೆ ಸಂಬಂಧಿಸಿದಂತೆ ಅಗತ್ಯ ಮುಂಜಾಗ್ರತೆ ಕ್ರಮ ವಹಿಸಬೇಕು. ಗ್ರಾಮ ಪಂಚಾಯಿತಿ ಹಂತದಲ್ಲಿಯೂ ನೀರಿನ ಸಮಸ್ಯೆ ಆಗದಂತೆ ನೋಡಿಕೊಳ್ಳಬೇಕು’ ಎಂದು ಎಇಇ ಬಂಡಿಯವರಿಗೆ ಸೂಚನೆ ನೀಡಿದರು.

ಇಒ ಭೀಮಾಶಂಕರ ಕನ್ನೂರ ಮಾತನಾಡಿ, ‘ಮಿರಗಿ, ಮಸಳಿ, ಗುಬ್ಬೇವಾಡ, ಕೊಳುರಗಿ, ಝಳಕಿ, ಬಸನಾಳ, ಬಬಲಾದ, ನಿಂಬಾಳ ಕೆಡಿ ಸಾಲೋಟಗಿ ಹಾಗೂ ತಡವಲಗಾ ಅಡವಿ ವಸ್ತಿಗಳ ಕುರಿತು ಗ್ರಾಮ ಪಂಚಾಯಿತಿಗಳಲ್ಲಿ ಚರ್ಚಿಸಬೇಕು. ಯಾವುದೇ ಸಮಸ್ಯೆ ಬರದಂತೆ ಖುದ್ದಾಗಿ ಪರಿಶೀಲನೆ ನಡೆಸಬೇಕು’ ಎಂದು ಸೂಚಿಸಿದರು.

ಸಹಾಯಕ ನಿರ್ದೇಶಕ ಪ್ರಕಾಶ ರಾಠೋಡ, ಯೋಜನಾಧಿಕಾರಿ ನಂದೀಪ ರಾಠೋಡ, ಹೆಸ್ಕಾಂ ಎಇಇ ಎಸ್.ಆರ್.ಮೆಡೆಗಾರ, ಪೌರಾಯುಕ್ತ ನಗರ ಸಭೆ ಶಿವಾನಂದ ಪೂಜಾರಿ, ಕಾರ್ಯಪಾಲಕ ಎಂಜಿನಿಯರ್ ಮನೋಜಕುಮಾರ ತಾಲ್ಲೂಕಿನ ಎಲ್ಲ ಗ್ರಾಮ ಪಂಚಾಯಿತಿ ಆಡಳಿತ ಅಧಿಕಾರಿಗಳು ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260325-26-237247010

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.