ಇಂಡಿ: ‘ಬೇಸಿಗೆಯ ತೀವ್ರ ಬಿಸಿಲಿನಿಂದಾಗಿ ನೀರಿಲ್ಲದೆ ಪರದಾಡುವ ಮೂಕ ಪ್ರಾಣಿ ಹಾಗೂ ಪಕ್ಷಿಗಳಿಗೆ ನೀರುಣಿಸುವಂತಹ ಮಾನವೀಯ ಕೆಲಸ ಮಾಡುವುದು ಶ್ಲಾಘನೀಯ’ ಎಂದು ಚಡಚಣ ತಹಶೀಲ್ದಾರ್ ಸಂಜಯ ಇಂಗಳೆ ಹೇಳಿದರು.

ತಾಲ್ಲೂಕಿನ ಝಳಕಿಯಲ್ಲಿ ಯಶವಂತರಾಯಗೌಡ ಪಾಟೀಲ ಫೌಂಡೇಷನ್ ಹಾಗೂ ಅರಣ್ಯ ಇಲಾಖೆ ಸಹಯೋಗದಲ್ಲಿ ಭಾನುವಾರ ಹಮ್ಮಿಕೊಂಡಿದ್ದ ಪಕ್ಷಿಗಳಿಗೆ ನೀರಿನ ತೊಟ್ಟಿ ಕಟ್ಟುವ ಕಾರ್ಯಕ್ಕೆ ಚಾಲನೆ ನೀಡಿ ಮಾತನಾಡಿದರು.

‘ಪ್ರಕೃತಿ ಸಮತೋಲನ ಕಾಯ್ದುಕೊಂಡಾಗ ಮಾತ್ರ ಪ್ರಾಣಿ, ಪಕ್ಷಿ, ಮನುಷ್ಯ ಬದುಕಲು ಸಾಧ್ಯ. ಹೀಗಾಗಿ, ಪ್ರತಿಯೊಬ್ಬರೂ ಪ್ರಕೃತಿಯನ್ನು ಪ್ರೀತಿಸಬೇಕು. ಪ್ರಾಣಿ, ಪಕ್ಷಿಗಳಿಗೆ ನೀರು, ಕಾಳು ಒದಗಿಸುವ ಕೆಲಸವನ್ನು ಪ್ರತಿಯೊಬ್ಬರೂ ಮಾಡಬೇಕು’ ಎಂದರು.

ಸಣ್ಣಪ್ಪ ತಳವಾರ ಮಾತನಾಡಿ, ‘ಬೇಸಿಗೆ ಕಾಲದಲ್ಲಿ ನೀರಿಲ್ಲದೆ ಪ್ರಾಣಿ, ಪಕ್ಷಿಗಳು ಸಾವನ್ನಪ್ಪುವ ಸಾಧ್ಯತೆ ಹೆಚ್ಚಿರುತ್ತದೆ. ಮಾನವೀಯತೆ ದೃಷ್ಟಿಯಿಂದ ನಾವೆಲ್ಲರೂ ಪಕ್ಷಿಗಳಿಗಾಗಿ ಮಣ್ಣಿನ ಪಾತ್ರೆಯಲ್ಲಿ ನೀರಿಡಬೇಕು. ಪ್ರಾಣಿ, ಪಕ್ಷಿಗಳಿಗೂ ನೀರು ಅವಶ್ಯವಾಗಿದ್ದು, ಮನೆ ಮೇಲೆ, ಮರಗಳಲ್ಲಿ ನೀರಿನ ತೊಟ್ಟಿ ಇಟ್ಟು ಪಕ್ಷಿಗಳಿಗೆ ದಾಹ ತಣಿಸಬೇಕು’ ಎಂದು ತಿಳಿಸಿದರು.

ಹಣಮಂತ ಖಡೆಖಡೆ, ಸಂತೋಷ ದಾಯಗೊಡೆ, ಸುರೇಶ ನಾಯಕ, ಚಂದ್ರಕಾಂತ ಕೋಳಿ, ಸಾಹೇಬಗೌಡ ಬಿರಾದಾರ, ಉಮೇಶ ಕಾರಕಲ್ಲ, ಅಮಸಿದ್ದ ಡಾಳೆ, ಅಕ್ಬರ ಖಾನಪೂರ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260413-26-1418575898

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.