ಇಂಡಿ: ಇಲ್ಲಿನ ಸಾರ್ವಜನಿಕ ಆಸ್ಪತ್ರೆ ಉತ್ತಮ ಕೆಲಸ ಮಾಡುತ್ತಿದೆ. ತಿಂಗಳಲ್ಲಿ 90 ರಿಂದ 95 ರ ವರೆಗೆ ಸಾಧಾರಣ ಹೆರಿಗೆ ಹಾಗೂ 28 ರಿಂದ 30 ಸಿಜೇರಿಯನ್ ಹೆರಿಗೆ ಮಾಡಿಸುತ್ತಿದೆ. ಆಸ್ಪತ್ರೆಯ ಶಸ್ತ್ರ ಚಿಕಿತ್ಸಾ ವಿಭಾಗ, ಹೆರಿಗೆ ವಿಭಾಗ ಮತ್ತು ನೇತ್ರ ತಪಾಸಣಾ ವಿಭಾಗಗಳು ಉತ್ತಮೆ ಕೆಲಸ ಮಾಡುತ್ತಿವೆ ಎಂದು ವಿಜಯಪುರ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಉಜ್ವಲ್ ಕಮಾರ ಘೋಷ್ ಅಭಿಪ್ರಾಯ ವ್ಯಕ್ತಪಡಿಸಿದರು.

ಅವರು ಮಂಗಳವಾರ ಆಸ್ಪತ್ರೆಗೆ ಭೇಟಿ ನೀಡಿ ಆಸ್ಪತ್ರೆಯ ಎಲ್ಲಾ ವಿಭಾಗಗಳನ್ನು ಪರಿಶೀಲಿಸಿ, ವೈದ್ಯಾಧಿಕಾರಿಗಳ ಜೊತೆಗೆ ಸಭೆ ನಡೆಸಿ ಮಾತನಾಡಿದರು.

ಇದೇ ಸಂದರ್ಭದಲ್ಲಿ ರಾಷ್ಟ್ರೀಯ ವೈದ್ಯರ ದಿನಾಚರಣೆಯ ಅಂಗವಾಗಿ ಆಸ್ಪತ್ರೆಯ ಮುಂಭಾಗ ಸಸಿಗಳನ್ನು ನೆಟ್ಟರು.

ಈ ಸಂದರ್ಭದಲ್ಲಿ ಉಪ ವಿಭಾಗಾಧಿಕಾರಿ ಅನುರಾಧಾ ವಸ್ತ್ರದ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಸಂಪತಕುಮಾರ ಗುಣಾರಿ, ಇಂಡಿ ತಹಶೀಲ್ದಾರ್ ಬಿ.ಎಸ್.ಕಡಕಬಾವಿ, ಇಂಡಿ ತಾಲ್ಲೂಕು ಆಡಳಿತ ವೈದ್ಯಾಧಿಕಾರಿ ಡಾ. ಆರ್.ಎಸ್.ಇಂಗಳೆ, ಇಂಡಿ ತಾಲ್ಲೂಕು ಆರೋಗ್ಯಾಧಿಕಾರಿ ಡಾ. ಕೃಷ್ಣಕುಮಾರ ಜಾಧವ ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.