ಇಂಡಿ: ನಗರದ ರೈಲು ನಿಲ್ದಾಣದ ಪಕ್ಕದಲ್ಲಿ ಭಾನುವಾರ ಮಧ್ಯಾಹ್ನ 2 ಗಂಟೆಗೆ ಸಂಭವಿಸಿದ ವಿದ್ಯುತ್ ಅವಘಡದಿಂದ ಎರಡು ಅಂಗಡಿಗಳು ಸಂಪೂರ್ಣ ಸುಟ್ಟು ಕರಕಲಾಗಿವೆ.

ನಜೀರ ಕುಮಸಗಿ ಅವರಿಗೆ ಸೇರಿದ ಮೊಬೈಲ್ ಅಂಗಡಿ ಹಾಗೂ ಕಟ್ಟಿಮನಿ ಅವರಿಗೆ ಸೇರಿದ ಚಪ್ಪಲಿ ಅಂಗಡಿ ಬೆಂಕಿಗೆ ಅಹುತಿಯಾಗಿವೆ.

ಮೊಬೈಲ್ ಅಂಗಡಿಯಲ್ಲಿ ಸುಮಾರು ₹1 ಲಕ್ಷ ಮೌಲ್ಯದ ಮೊಬೈಲ್ ಶೆಟ್ಗಳು ಹಾಗೂ ಇತರೆ ಸಾಮಗ್ರಿಗಳು ಸುಟ್ಟು ಹೋಗಿವೆ. ಚಪ್ಪಲಿ ಅಂಗಡಿಯಲ್ಲಿ ಸುಮಾರು ₹2 ಲಕ್ಷ ಮೌಲ್ಯದ ಚಪ್ಪಲಿಗಳು ಹಾಗೂ ಇತರೆ ವಸ್ತುಗಳು ಬೆಂಕಿಗೆ ಆಹುತಿಯಾಗಿವೆ.

ಘಟನಾ ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿ ತಕ್ಷಣ ಆಗಮಿಸಿ ಬೆಂಕಿ ನಂದಿಸುವ ಕಾರ್ಯಾಚರಣೆ ನಡೆಸಿದರು. ಇಂಡಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260505-26-55899667

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.