ಇಂಡಿ: ತಾಲ್ಲೂಕಿನ ನಾದ (ಬಿಕೆ) ಗ್ರಾಮದ ರೈತ ರೇವಣಸಿದ್ದ ಸಂಗಪ್ಪ ಚಿವಟೆ (35) ಮಂಗಳವಾರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಸಾಲಭಾದೆಯಿಂದ ಆತ್ಮಹತ್ಮೆ ಮಾಡಿಕೊಂಡಿದ್ದಾರೆ ಎನ್ನಲಾಗಿದ್ದು, ಸ್ಥಳಕ್ಕೆ ಜೆಡಿಎಸ್ ತಾಲ್ಲೂಕು ಘಟಕದ ಅಧ್ಯಕ್ಷ ಬಿ.ಡಿ.ಪಾಟೀಲ ಭೇಟಿ ನೀಡಿ ಮೃತರ ಕುಟುಂಬಕ್ಕೆ ಸಾಂತ್ವನ ಹೇಳಿ, ಸರ್ಕಾರವು ಕುಟುಂಬಕ್ಕೆ ₹25 ಲಕ್ಷ ಪರಿಹಾರ ನೀಡಬೇಕೆಂದು ಆಗ್ರಹಿಸಿದ್ದಾರೆ.