ಇಂಡಿ: ಬೇಸಿಗೆಯಲ್ಲಿ ಬಿಸಿಲಿನ ತಾಪ ಹೆಚ್ಚಾಗಿದೆ. ಇಂಡಿ ನಗರ ಸೇರಿದಂತೆ ತಾಲ್ಲೂಕಿನ ಯಾವುದೇ ಗ್ರಾಮದಲ್ಲಿ ಕುಡಿಯುವ ನೀರಿನ ಸಮಸ್ಯೆಯಾಗದಂತೆ ಕಟ್ಟೆಚ್ಚರ ವಹಿಸಬೇಕು. ಎಲ್ಲ ಕೆರೆಗಳಲ್ಲಿ ಶೇಕಡಾ 50 ರಷ್ಟು ನೀರು ಕಾಯ್ದುಕೊಳ್ಳಬೇಕೆಂದು ತಾಲ್ಲೂಕು ಆಡಳಿತಕ್ಕೆ ಶಾಸಕ ಯಶವಂತರಾಯಗೌಡ ಪಾಟೀಲ ಸೂಚನೆ ನೀಡಿದರು.

ಅವರು ಬುಧವಾರ ಇಂಡಿ ನಗರದ ತಾಲ್ಲೂಕು ಪಂಚಾಯಿತಿ ಸಭಾ ಭವನದಲ್ಲಿ ಆಯೋಜಿಸಿದ್ದ ತಾಲ್ಲೂಕು ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ತಾಲ್ಲೂಕಿನ ಮೈಲಾರ, ಕೊಳೂರಗಿ ಹಾಗೂ ಕೆಲವು ಅಡವಿ ವಸ್ತಿಗಳಲ್ಲಿ ಮಾತ್ರ ಕುಡಿಯುವ ನೀರಿನ ಸಮಸ್ಯಯಾಗಿದೆ. ಅವುಗಳನ್ನು ತಕ್ಷಣವೇ ಬಗೆಹರಿಸಬೇಕು. ತಾಲ್ಲೂಕಿನ 19 ಸೇರಿ ಜಿಲ್ಲೆಯ ಒಟ್ಟು 199 ಕೆರೆಗಳನ್ನು ಆಗಾಗ ತುಂಬಿಸುವ ಕೆಲಸ ಮಾಡಬೇಕು. ಅವುಗಳಲ್ಲಿ ಸಾಕಷ್ಟು ನೀರು ಇದೆಯೋ ಇಲ್ಲವೋ ಎನ್ನುವುದನ್ನು ಆಗಾಗ ಚೆಕ್ ಮಾಡಬೇಕು. ನೀರು ಕಡಿಮೆಯಾದರೆ ತಕ್ಷಣವೇ ಕೃಷ್ಣಾ ಮೇಲ್ದಂಡೆ ಯೋಜನೆಯ ಕಾಲುವೆಯ ಮೂಲಕ ನೀರು ಹರಿಸಿ ಕೆರೆಗಳನ್ನು ತುಂಬಿಸುವ ವ್ಯವಸ್ಥೆ ಮಾಡಬೇಕೆಂದು ಕೃಷ್ಣಾ ಮೇಲ್ದಂಡೆ ಯೋಜನೆಯ ಎಂಜಿನಿಯರ್ ಮನೋಜಕುಮಾರ ಗಡಬಳ್ಳಿ ಹಾಗೂ ಜಿಲ್ಲಾಧಿಕಾರಿ ಕೆ.ಆನಂದ ಅವರಿಗೆ ಸೂಚನೆ ನೀಡಿದರು.

ಚಡಚಣ ವಿಭಾಗದವರೆಗೆ ಕಾಲುವೆಯ ನೀರು ಹರಿಯತ್ತಿಲ್ಲ ಎನ್ನುವ ಆರೋಪವಿದೆ. ಚಡಚಣ ತಾಲ್ಲೂಕಿನ ನಿವರಗಿ, ತದ್ದೇವಾಡಿ, ಲೋಣಿ ಮುಂತಾದ ಗ್ರಾಮಗಳವರೆಗೆ ನೀರು ಹರಿಸುವ ವ್ಯವಸ್ಥೆ ಮಾಡಬೇಕು. ಈ ವ್ಯವಸ್ಥೆ ಜೂನ್ 15ರ ವರೆಗೆ ನಡೆಯಬೇಕು. ಭೀಮಾ ನದಿಯಲ್ಲಿಯೂ ಕೂಡಾ ನೀರಿನ ಕೊರತೆಯಾಗಿದೆ. ಮಹಾರಾಷ್ಟ್ರ ಸರ್ಕಾರದೊಂದಿಗೆ ಮಾತನಾಡಿ ಉಜನಿ ಜಲಾಶಯದಿಂದ ಭೀಮಾ ನದಿಗೆ ನೀರು ಹರಿಸುವ ವ್ಯವಸ್ಥೆ ಮಾಡುತ್ತೇನೆ ಎಂದು ಅವರು ಭರವಸೆ ನೀಡಿದರು.

ಶುದ್ಧ ಕುಡಿಯುವ ನೀರಿನ ಘಟಕಗಳ ರಿಪೇರಿ ಮಾಡಿಸಬೇಕೆಂದು ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಭೀಮಾಶಂಕರ ಕನ್ನೂರ ಅವರಿಗೆ ಸೂಚನೆ ನೀಡಿದರು. ಜಿಲ್ಲಾಧಿಕಾರಿ ಕೆ.ಆನಂದ ಮಾತನಾಡಿದರು.

ಉಪ ವಿಭಾಗಾಧಿಕಾರಿ ಚಿದಾನಂದ ಗುರುಸ್ವಾಮಿ, ನಿಂಬೆ ಅಭಿವೃದ್ಧಿ ಮಂಡಳಿಯ ಅಧ್ಯಕ್ಷ ಭೀಮಣ್ಣ ಕವಲಗಿ, ತಹಶೀಲ್ದಾರ್ ಬಿ.ಎಸ್.ಕಡಕಬಾವಿ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260423-26-1071646039

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.