ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಸಮಾನತೆ ತೊಲಗಿಸುವ ಸಾಧನ ‘ಸಂವಿಧಾನ’

ಜಿಲ್ಲಾ ಉಸ್ತುವಾರಿ ಸಚಿವ ಉಮೇಶ ಕತ್ತಿ ಧ್ವಜಾರೋಹಣ
Last Updated 26 ಜನವರಿ 2022, 11:32 IST
ಅಕ್ಷರ ಗಾತ್ರ

ವಿಜಯಪುರ:ಸಂವಿಧಾನಾತ್ಮಕ ಮಾರ್ಗವೊಂದೇ ಸಾಮಾಜಿಕ ಅಸಮಾನತೆಯನ್ನು ತೊಲಗಿಸುವ ಸಾಧನವಾಗಿದೆಎಂದು ನೂತನ ಜಿಲ್ಲಾ ಉಸ್ತುವಾರಿ ಸಚಿವ ಉಮೇಶ ಕತ್ತಿ ಹೇಳಿದರು.

ಇಲ್ಲಿನ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯ ಕ್ರೀಡಾಂಗಣದಲ್ಲಿ ಜಿಲ್ಲಾಡಳಿತದ ವತಿಯಿಂದ ಬುಧವಾರ ಹಮ್ಮಿಕೊಳ್ಳಲಾಗಿದ್ದ ಗಣರಾಜೋತ್ಸವ ದಿನಾಚರಣೆಯಲ್ಲಿ ಧ್ವಜಾರೋಹಣ ನೆರವೇರಿಸಿ ಅವರು ಮಾತನಾಡಿದರು.

ಭಾರತೀಯರೆಲ್ಲರಿಗೂ ಸಾಮಾಜಿಕ ಸಮಾನತೆ, ಆರ್ಥಿಕ ಭದ್ರತೆ ಮತ್ತು ರಾಜಕೀಯ ಸ್ವಾತಂತ್ರ್ಯ ಒದಗಿಸಿಕೊಡಲು ಪ್ರಮುಖ ವಾಹಿನಿಯಾಗಿರುವ ಘನ ಸಂವಿಧಾನವನ್ನು ಜಾರಿಗೆ ತಂದ ಶುಭದಿನ ಜನವರಿ 26 ಆಗಿದೆ ಎಂದರು.

ಸ್ವಾತಂತ್ರ್ಯ, ಸಮಾನತೆ, ಭ್ರಾತೃತ್ವ ಮತ್ತು ಸರ್ವರ ವಿಕಾಸದ ಕನಸನ್ನು ಕಂಡ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರು ಮಾನವೀಯ ಅಂತಃಕರಣದಿಂದ ಒಡಮೂಡಿಬಂದ ನಮ್ಮ ದೇಶವು ಇಂದು ವಿಶ್ವದಲ್ಲಿಯೇ ಅತ್ಯಂತ ಬಲಿಷ್ಠ ಮತ್ತು ಪ್ರಭಾವಶಾಲಿ ಗಣತಂತ್ರ ರಾಷ್ಟ್ರವೆಂದು ಪರಿಗಣಿತವಾಗಿದೆ ಎಂದು ಹೇಳಿದರು.

ಪ್ರತ್ಯೇಕ ಶಾಸಕಾಂಗ, ಕಾರ್ಯಾಂಗ ಮತ್ತು ನ್ಯಾಯಾಂಗ ವ್ಯವಸ್ಥೆಯನ್ನು ಹೊಂದಿರುವ ಒಕ್ಕೂಟ ವ್ಯವಸ್ಥೆಯಲ್ಲಿ ನಮ್ಯತೆ ಮತ್ತು ನಿಷ್ಠೂರತೆಗಳ ಅನನ್ಯ ಮಿಶ್ರಣವನ್ನು ಸ್ಪಷ್ಟವಾಗಿ ಗುರುತಿಸಬಹುದಾಗಿರುತ್ತದೆ ಎಂದರು.

ವಿಶ್ವದ ಕೆಲವು ಪ್ರಮುಖ ರಾಷ್ಟ್ರಗಳ ಸಂವಿಧಾನಗಳಲ್ಲಿನ ಕೆಲವೊಂದು ಉತ್ತಮ ಅಂಶಗಳನ್ನು ನಮ್ಮ ದೇಶದ ವಾಸ್ತವಿಕತೆಗೆ ತಕ್ಕಂತೆ ವಿನ್ಯಾಸಗೊಳಿಸಿ ಅಳವಡಿಸಿಕೊಂಡಿರುವ ನಮ್ಮ ಸಂವಿಧಾನವು ವಿಶ್ವದಲ್ಲಿಯೇ ಸರ್ವಶ್ರೇಷ್ಠವಾಗಿರುತ್ತದೆ ಎಂದು ಹೇಳಿದರು.

ಸ್ವತಂತ್ರ ಭಾರತವು ಕಳೆದ 75 ವರ್ಷಗಳ ಅವಧಿಯಲ್ಲಿ ಸಾಮಾಜಿಕ, ಸಾಂಸ್ಕøತಿಕ, ಆರ್ಥಿಕ, ಶೈಕ್ಷಣಿಕ, ವೈಜ್ಞಾನಿಕ, ರಾಜಕೀಯ, ಧಾರ್ಮಿಕ ಮತ್ತು ಸಾಹಿತ್ಯಿಕ ರಂಗಗಳಲ್ಲಿ ಸಾಧಿಸಿರುವ ಅದ್ಭುತ ಮತ್ತು ಅದ್ವಿತೀಯ ಕೊಡುಗೆಗಳ ವೈಭವವನ್ನು ಸಾಕ್ಷೀಕರಿಸುವ ಮಹೋನ್ನತ ಉದ್ದೇಶದಿಂದ ಕೇಂದ್ರ ಸರ್ಕಾರವು ‘ಆಜಾದಿ ಕಾ ಅಮೃತ ಮಹೋತ್ಸವ’ ಎಂಬ ವಿಶೇಷ ಕಾರ್ಯಕ್ರಮವನ್ನು ಹಮ್ಮಿಕೊಂಡಿದೆ ಎಂದರು.

ಕೋವಿಡ್ ಮೂರನೇ ಅಲೆಯನ್ನು ಎದುರಿಸಲು ಜಿಲ್ಲಾಡಳಿತವು ಎಲ್ಲ ರೀತಿಯಿಂದಲೂ ಸರ್ವಸನ್ನದ್ಧವಾಗಿದೆ. ಪ್ರಥಮ ಡೋಸ್ ಲಸಿಕೆಯಲ್ಲಿ ಶೇ 104 ರಷ್ಟು, ಎರಡನೇ ಡೋಸ್ ಲಸಿಕೆಯಲ್ಲಿ ಶೇ 96 ರಷ್ಟು ಮತ್ತು 15 ರಿಂದ 18 ವರ್ಷ ಒಳಗಿನ ಮಕ್ಕಳಿಗೆ ಪ್ರಥಮ ಡೋಸ್ ಲಸಿಕೆಯನ್ನು ನೀಡಿ ಶೇ 81 ರಷ್ಟು ಪ್ರಗತಿಯನ್ನು ಸಾಧಿಸಿ ರಾಜ್ಯದಲ್ಲಿಯೇ ವಿಜಯಪುರ ಜಿಲ್ಲೆಯು ಮುಂಚೂಣಿ ಸ್ಥಾನದಲ್ಲಿದೆ ಎಂದು ತಿಳಿಸಿದರು.

6568 ಜನ ಆರೋಗ್ಯ ಮತ್ತು ಮುಂಚೂಣಿ ಕಾರ್ಯಕರ್ತರಿಗೆ ಬೂಸ್ಟರ್‌ ಡೊಸ್‌ ಲಸಿಕೆಯನ್ನು ನೀಡಲಾಗಿದೆ ಎಂದು ಅವರು ಹೇಳಿದರು.

ನಾವೆಲ್ಲರೂ ಗಣತಂತ್ರ ವ್ಯವಸ್ಥೆಯ ಚೌಕಟ್ಟಿನಲ್ಲಿ, ಜಾತ್ಯತೀತ ಮೌಲ್ಯಗಳ ಪರಿಧಿಯಲ್ಲಿ ಮತ್ತು ಭ್ರಾತೃತ್ವದ ಬೆಸುಗೆಯಲ್ಲಿ, ಸತ್ಯ-ನಿಷ್ಠೆ-ಪ್ರಾಮಾಣಿಕತೆಯಿಂದ ರಾಷ್ಟ್ರೀಯ ಭಾವೈಕ್ಯತೆಯನ್ನು ಸಾಕಾರಗೊಳಿಸಲು ಸಾಂಘಿಕವಾಗಿ ಶ್ರಮಿಸೋಣ, ತನ್ಮೂಲಕ ಪ್ರಜಾಸತ್ತಾತ್ಮಕ ವ್ಯವಸ್ಥೆಯ ಆದರ್ಶಗಳನ್ನು ಎತ್ತಿಹಿಡಿಯೋಣ ಎಂದು ಅವರು ಹೇಳಿದರು.

ಶಾಸಕ ಬಸನಗೌಡ ಪಾಟೀಲ ಯತ್ನಾಳ, ಎಂ.ಬಿ ಪಾಟೀಲ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಶ್ರೀಹರಿ ಗೊಳಸಂಗಿ, ಕರ್ನಾಟಕ ರಾಜ್ಯ ಬೀಜ ಮತ್ತು ಸಾವಯವ ಪ್ರಮಾಣನ ಸಂಸ್ಥೆ ಅಧ್ಯಕ್ಷ ವಿಜುಗೌಡ ಪಾಟೀಲ, ಜಿಲ್ಲಾಧಿಕಾರಿ ಪಿ.ಸುನೀಲ್‌ಕುಮಾರ, ಜಿ.ಪಂ ಸಿಇಒ ಗೋವಿಂದ ರೆಡ್ಡಿ, ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಎಚ್‌.ಡಿ ಆನಂದಕುಮಾರ್, ಕನ್ನಡ ಸಾಹಿತ್ಯ ಪರಿಷತ್‌ ಜಿಲ್ಲಾ ಘಟಕದ ಅಧ್ಯಕ್ಷ ಹಾಸಿಂಪೀರ ವಾಲಿಕಾರ, ತೊರವಿ ಗ್ರಾ.ಪಂ ಅಧ್ಯಕ್ಷೆ ಗಂಗವ್ವ ಬಾಗಾಯತ್‌ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT