ಗುರುವಾರ , ಜುಲೈ 29, 2021
21 °C
ಮತ್ತೆ ಆರು ಜನರಿಗೆ ಕೋವಿಡ್‌ ದೃಢ; ಸೋಂಕಿತರ ಸಂಖ್ಯೆ 228ಕ್ಕೆ ಏರಿಕೆ

ಕಾನ್‌ಸ್ಟೆಬಲ್‌ಗೆ ಸೋಂಕು; ಜಲನಗರ ಠಾಣೆ ಸೀಲ್‌ಡೌನ್‌

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ವಿಜಯಪುರ: ನಗರದ ಕಂಟೈನ್ಮೆಂಟ್ ಝೋನ್‌ನಲ್ಲಿ ಕಾರ್ಯನಿರ್ವಹಿಸುತ್ತಿದ್ದ ಜಲನಗರ ಪೊಲೀಸ್ ಠಾಣೆಯ 46 ವರ್ಷ ವಯಸ್ಸಿನ ಸಿಬ್ಬಂದಿ (ಪಿ6586) ಸೇರಿದಂತೆ ಶನಿವಾರ ಆರು ಜನರಿಗೆ ಕೋವಿಡ್ ತಗುಲಿರುವುದು ದೃಢಪಟ್ಟಿದೆ.

ಸೋಂಕಿತ ಪೊಲೀಸ್ ಸಿಬ್ಬಂದಿಯ ಸಂಪರ್ಕದಲ್ಲಿದ್ದ 22 ಜನ ಪೊಲೀಸ್ ಸಿಬ್ಬಂದಿ ಮತ್ತು‌ ಅಧಿಕಾರಿಗಳ ಗಂಟಲದ್ರವವನ್ನು ಸಂಗ್ರಹಿಸಲಾಗಿದೆ. ಅಲ್ಲದೇ, ಜಲನಗರ ಪೊಲೀಸ್ ಠಾಣೆಯನ್ನು ಸೀಲ್‌ಡೌನ್ ಮಾಡಿ, ಸಮೀಪದ ಮಂಗಲ ಕಾರ್ಯಾಲಯಕ್ಕೆ ಸ್ಥಳಾಂತರಿಸಲಾಗಿದೆ ಎಂದು ಜಿಲ್ಲಾಧಿಕಾರಿ ವೈ.ಎಸ್.ಪಾಟೀಲ ತಿಳಿಸಿದರು.

ಪೊಲೀಸ್‌ ಠಾಣೆಯನ್ನು ಸಂಪೂರ್ಣ ಸ್ವಚ್ಛತೆ ಮಾಡುವ ಮೂಲಕ ಸೋಂಕು ಮುಕ್ತವಾಗಿಸಲು ಕ್ರಮಕೈಗೊಳ್ಳಲಾಗುವುದು ಎಂದು ಹೇಳಿದರು.

ಕಂಟೈನ್ಮೆಂಟ್‌ ಝೋನ್‌ ಸಂಪರ್ಕದಿಂದ 55 ಮತ್ತು 58 ವರ್ಷ ವಯಸ್ಸಿನ ಇಬ್ಬರು ಪುರುಷರು ಹಾಗೂ ಒಂಬತ್ತು ವರ್ಷ ಬಾಲಕನಿಗೆ ಹಾಗೂ ಮಹಾರಾಷ್ಟ್ರ ಸಂಪರ್ಕದಿಂದ 21 ವರ್ಷ ವಯಸ್ಸಿನ ಯುವಕ ಹಾಗೂ 50 ವರ್ಷ ವಯಸ್ಸಿನ ವ್ಯಕ್ತಿಯೊಬ್ಬರಿಗೆ ಕೋವಿಡ್‌ ತಗುಲಿದೆ. ಜಿಲ್ಲೆಯಲ್ಲಿ ಈವರೆಗೆ ಒಟ್ಟು 228 ಜನರಿಗೆ ಸೋಂಕು ತಗುಲಿದೆ ಎಂದರು.

ಕೆಮ್ಮಿ, ಜ್ಬರ, ಶೀತ ಕಂಡುಬಂದರೆ ತಕ್ಷಣ ಸಮೀಪದ ಖಾಸಗಿ, ಸರ್ಕಾರಿ ಆಸ್ಪತ್ರೆಗಳನ್ನು ಸಂಪರ್ಕಿಸುವಂತೆ ಜಿಲ್ಲಾಧಿಕಾರಿ ಮನವಿ ಮಾಡಿದ್ದರು.

ಖಾಸಗಿ ಆಸ್ಪತ್ರೆಗಳಿಗೆ ಕೋವಿಡ್ ಲಕ್ಷಣ ಇರುವ ರೋಗಿಗಳು ಬಂದರೆ ತಕ್ಷಣ ಜಿಲ್ಲಾಡಳಿತದ ಗಮನಕ್ಕೆ ತರುವಂತೆ ಕೋರಿದರು.

217 ಸಿಬ್ಬಂದಿ ಪರೀಕ್ಷೆ:

ಜಿಲ್ಲೆಯ ವಿವಿಧ ಕಂಟೈನ್ಮೆಂಟ್ ಝೋನ್‌, ಚೆಕ್‌ಪೋಸ್ಟ್‌, ನಿಗದಿತ ಆಸ್ಪತ್ರೆ ಹಾಗೂ ಇತರೆ ಸ್ಥಳಗಳಲ್ಲಿ ಕರ್ತವ್ಯ ನಿರ್ವಹಿಸಿದ ಅಧಿಕಾರಿ ಹಾಗೂ ಸಿಬ್ಬಂದಿಗಳ ಪೈಕಿ ಒಟ್ಟು 217 ಸಿಬ್ಬಂದಿಯ ಗಂಟಲುದ್ರವವನ್ನು ಸಂಗ್ರಹಿಸಿ ಪರೀಕ್ಷೆಗೆ ಕಳುಹಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅನುಪಮ್ ಅಗರವಾಲ್ ತಿಳಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.