ಸೋಮವಾರ, 22 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಾಂಗ್ರೆಸ್‌ನಿಂದ ಬಂಜಾರಾ ಸಮಾಜಕ್ಕೆ ಅನ್ಯಾಯ: ಬಿ.ಬಿ.ಲಮಾಣಿ

Published 11 ಮಾರ್ಚ್ 2024, 16:16 IST
Last Updated 11 ಮಾರ್ಚ್ 2024, 16:16 IST
ಅಕ್ಷರ ಗಾತ್ರ

ವಿಜಯಪುರ: ಲೋಕಸಭೆ ಚುನಾವಣೆಗೆ ಸಂಬಂಧಿಸಿದಂತೆ ಕಾಂಗ್ರೆಸ್‌ ಟಿಕೆಟ್‌ ಅನ್ನು ಬಂಜಾರ ಸಮಾಜಕ್ಕೆ ನೀಡದೇ ಅನ್ಯಾಯ ಮಾಡಲಾಗಿದೆ ಎಂದು ಸಮಾಜದ ಮುಖಂಡ ಬಿ.ಬಿ. ಲಮಾಣಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಸಮಾಜಕ್ಕೆ ಅನ್ಯಾಯ ಮಾಡಿರುವ ಕಾಂಗ್ರೆಸ್‌ ಪಕ್ಷಕ್ಕೆ ಲೋಕಸಭಾ ಚುನಾವಣೆಗಳಲ್ಲಿ ಸರಿಯಾದ ಪಾಠ ಕಲಿಸಲಾಗುವುದು ಎಂದು ಅವರು ಎಚ್ಚರಿಕೆ ನೀಡಿದ್ದಾರೆ.

ಜಿಲ್ಲೆಯ ಹಾಗೂ ರಾಜ್ಯದ ಕಾಂಗ್ರೆಸ್ ಮುಖಂಡರಿಗೆ ಸ್ವಲ್ಪವೂ ಕೂಡ ಬಂಜಾರ ಸಮಾಜದ ಮೇಲೆ ಕರುಣೆ ಇಲ್ಲ. ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಶಾಸಕರು ನಮ್ಮ ಸಮಾಜದಿಂದ ನೂರಕ್ಕೆ ನೂರರಷ್ಟು ಮತ ಪಡೆದು, ಈಗ   ಅಮಾಯಕ ಸಮಾಜವನ್ನು ಕಡೆಗಣಿಸಿದ್ದಾರೆ ಎಂದು ಆರೋಪಿಸಿದರು.

ಕಳೆದ 3 ದಶಕಗಳಿಂದ ಸತತವಾಗಿ 4 ಬಾರಿ ಬಂಜಾರಾ ಸಮಾಜದ ಲೋಕಸಭೆ ಅಭ್ಯರ್ಥಿಗಳನ್ನು ಕಾಂಗ್ರೆಸ್‌ ಶಾಸಕರು ಸೇರಿ ಸೋಲಿಸಿದ್ದಾರೆ. ಈ ಬಾರಿ ಟಿಕೆಟ್‌ ವಿಷಯದಲ್ಲೂ ಮೋಸ ಮಾಡಿದ್ದಾರೆ ಎಂದು ಅವರು ಪ್ರಕಟಣೆಯಲ್ಲಿ ದೂರಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT