ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಾಸ್ಕ್ ಕಡ್ಡಾಯವಾಗಿ ಧರಿಸಲು ಸೂಚನೆ

Last Updated 18 ಜೂನ್ 2020, 13:21 IST
ಅಕ್ಷರ ಗಾತ್ರ

ವಿಜಯಪುರ: ಕೋವಿಡ್-19 ಹರಡುವಿಕೆಯನ್ನು ನಿಯಂತ್ರಿಸಲು ಸಾರ್ವಜನಿಕರಲ್ಲಿ ಮುನ್ನೆಚ್ಚರಿಕಾ ಕ್ರಮಗಳ ಕುರಿತು ಮಾಹಿತಿ ನೀಡುವ ದಿಸೆಯಲ್ಲಿ ಗುರುವಾರ ಜಿಲ್ಲಾಡಳಿತ, ಮಹಾನಗರ ಪಾಲಿಕೆ ಸಹಯೋಗದಲ್ಲಿ ಮಾಸ್ಕ್ ದಿನಾಚರಣೆ ಆಚರಿಸಲಾಯಿತು.

ನಗರದ ಗಾಂಧಿ ವೃತ್ತದಲ್ಲಿ ಮಾಸ್ಕ್ ದಿನಾಚರಣೆ ಅಂಗವಾಗಿ ಜಾಗೃತಿ ಜಾಥಾ ಮತ್ತು ಕರಪತ್ರ ಹಂಚುವ ಕಾರ್ಯಕ್ಕೆ ಜಿಲ್ಲಾಧಿಕಾರಿ ವೈ.ಎಸ್ ಪಾಟೀಲ ಚಾಲನೆ ನೀಡಿದರು.

ಗಾಂಧಿ ವೃತ್ತದಿಂದ ಡಾ.ಬಿ.ಆರ್.ಅಂಬೇಡ್ಕರ್ ವೃತ್ತದ ವರೆಗೆ ಕಾಲ್ನಡಿಗೆ ಜಾಥಾ ನಡೆಯಿತು. ಕೋವಿಡ್‌ ಸಂದರ್ಭದಲ್ಲಿ ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು, ಸ್ಯಾನಿಟೈಸರ್ ಬಳಕೆ ಮಾಡಬೇಕು, ಪರಸ್ಪರ ಅಂತರ ಕಾಯ್ದುಕೊಳ್ಳಬೇಕು, ಸೋಪಿನಿಂದ ಕೈತೊಳೆಯಬೇಕು ಜಾಗೃತಿ ಮೂಡಿಸಲಾಯಿತು.

ಜಿಲ್ಲಾ ಪಂಚಾಯ್ತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಗೋವಿಂದ ರೆಡ್ಡಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅನುಪಮ್ ಅಗರವಾಲ್, ಮಹಾನಗರ ಪಾಲಿಕೆ ಆಯುಕ್ತ ಶ್ರೀಹರ್ಷಾ ಶೆಟ್ಟಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಮಹೇಂದ್ರ ಕಾಪಸೆ, ಜಿಲ್ಲಾಸ್ಪತ್ರೆ ಸರ್ಜನ್ ಶರಣಪ್ಪ ಕಟ್ಟಿ, ಜಿಲ್ಲಾ ಸರ್ವೇಕ್ಷಣಾಧಿಕಾರಿ ಎಂ.ಬಿ ಬಿರಾದಾರ, ಡಾ. ಧಾರವಾಡಕರ, ಡಾ. ಸಂಪತಕುಮಾರ ಗುಣಾರೆ ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT