ವಿಜಯಪುರ: ಜಿಲ್ಲೆಯಲ್ಲಿ ಜೂನ್ 9 ರಿಂದ ಜೂನ್ 20ರ ವರೆಗೆ ನಡೆಯಲಿರುವ ದ್ವಿತೀಯ ಪಿಯುಸಿ ಪರೀಕ್ಷೆ-3 ಅನ್ನು ವ್ಯವಸ್ಥಿತವಾಗಿ ನಡೆಸಲು ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಸಿ.ಕೆ.ಹೊಸಮನಿ ಸೂಚಿಸಿದರು.

ನಗರದ ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ಶುಕ್ರವಾರ ನಡೆದ ದ್ವಿತೀಯ ಪಿಯುಸಿ ಪರೀಕ್ಷೆ-3ರ ಕುರಿತ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು.

ಜಿಲ್ಲೆಯ ವಿಜಯಪುರ ನಗರ, ಬಸವನ ಬಾಗೇವಾಡಿ, ಇಂಡಿ, ಮುದ್ದೇಬಿಹಾಳ, ತಾಳಿಕೋಟಿ, ಸಿಂದಗಿ ಸೇರಿದಂತೆ ಒಟ್ಟು 9 ಪರೀಕ್ಷಾ ಕೇಂದ್ರಗಳಲ್ಲಿ ಈ ಪರೀಕ್ಷೆ ನಡೆಯಲಿದ್ದು, ಒಟ್ಟು 13,953 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದಾರೆ. ಪರೀಕ್ಷೆಯಲ್ಲಿ ಯಾವುದೇ ಲೋಪವಾಗದಂತೆ ವ್ಯವಸ್ಥಿತ ಹಾಗೂ ಸುಸೂತ್ರವಾಗಿ ಪರೀಕ್ಷೆ ನಡೆಯುವಂತೆ ನೋಡಿಕೊಳ್ಳಲು ಪರೀಕ್ಷೆಗೆ ನಿಯೋಜಿತ ಅಧಿಕಾರಿಗಳಿಗೆ ಅವರು ಸೂಚಿಸಿದರು.

ಪರೀಕ್ಷೆ ನಿಯೋಜಿತ ಅಧಿಕಾರಿಗಳು ಹಾಗೂ ಸಿಬ್ಬಂದಿ ಕಡ್ಡಾಯವಾಗಿ ಗುರುತಿನ ಚೀಟಿ ಧರಿಸುವುದು. ಪರೀಕ್ಷಾ ಕೇಂದ್ರಗಳಲ್ಲಿ ಬೆಳಕು, ಶುದ್ಧ ಕುಡಿಯುವ ನೀರು, ಶೌಚಾಲಯ ವ್ಯವಸ್ಥೆ ಇರುವಂತೆ ನೋಡಿಕೊಳ್ಳುವುದು. ಪರೀಕ್ಷಾರ್ಥಿಗಳು ಇಲೆಕ್ಟ್ರಾನಿಕ್ ವಸ್ತುಗಳು, ಕ್ಯಾಲ್ಕುಲೇಟರ್, ಮೊಬೈಲ್ ಸೇರಿದಂತೆ ಇನ್ನಿತರ ಯಾವುದೇ ಇಲೆಕ್ಟ್ರಾನಿಕ್ ಸಲಕರಣೆ ಬಳಸದಂತೆ ಅಧಿಕಾರಿಗಳು ಕ್ರಮ ವಹಿಸಬೇಕು. ಪರೀಕ್ಷೆಗಳು ವೆಬ್ ಕಾಸ್ಟಿಂಗ್ ನಿಗಾದಲ್ಲಿ ಜರುಗಲಿವೆ. ಕೊಠಡಿ ಮೇಲ್ವಿಚಾರಕರು ಹಾಗೂ ಮುಖ್ಯ ಅಧೀಕ್ಷಕರು ಹೆಚ್ಚಿನ ಮುತುವರ್ಜಿ ವಹಿಸಿ ಪರೀಕ್ಷೆ ಸುಸೂತ್ರವಾಗಿ ನಡೆಯುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಹೇಳಿದರು.

ಖಜಾನೆ ಇಲಾಖೆಯ ಉಪನಿರ್ದೇಶಕ ಹನುಮಂತ ಕಾಲತಿಪ್ಪಿ ಮಾತನಾಡಿ, ಪರೀಕ್ಷಾ ಪ್ರಶ್ನೆ ಪತ್ರಿಕೆಗಳನ್ನು ಜಿಲ್ಲಾ ಖಜಾನೆಯಿಂದ ಪಡೆದುಕೊಂಡು ನಿಗದಿ ಪಡಿಸಿದ ಪರೀಕ್ಷಾ ಕೇಂದ್ರಗಳಿಗೆ ನಿಗದಿತ ಅವಧಿಯಲ್ಲಿ ತಲುಪಿಸಬೇಕು ಎಂದು ಹೇಳಿದರು.

ಸಭೆಯಲ್ಲಿ ತಹಶೀಲ್ದಾರರು, ಮುಖ್ಯ ಅಧೀಕ್ಷಕರು, ಮಾರ್ಗಾಧಿಕಾರಿಗಳು, ಮೇಲ್ವಿಚಾರಕರು ಸೇರಿದಂತೆ ಪರೀಕ್ಷೆಗೆ ನಿಯೋಜಿತ ಅಧಿಕಾರಿಗಳು ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.