ವಿಜಯಪುರ: ನಗರದ ವಿಶ್ವ ವಿಖ್ಯಾತ ಗೋಳಗುಮ್ಮಟ ಆವರಣದಲ್ಲಿ ಆಯುಷ್ ಇಲಾಖೆ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಸಹಯೋಗದೊಂದಿಗೆ ವಿಶ್ವ ಯೋಗ ದಿನ ಆಯೋಜಿಸಲಾಗಿದೆ.

ಕೇಂದ್ರ ಸಚಿವ ಭಗವಂತ ಖೂಬಾ, ಜಿಲ್ಲಾ ಸಚಿವ ಉಮೇಶ ಕತ್ತಿ, ಶಾಸಕರಾದ ಬಸನಗೌಡ ಪಾಟೀಲ ಯತ್ನಾಳ, ರಾಜ್ಯ ಬೀಜ ನಿಗಮದ ಅಧ್ಯಕ್ಷ ವಿಜುಗೌಡ ಪಾಟೀಲ, ಲಿಂಬೆ ಅಭಿವೃದ್ಧಿ ನಿಗಮದ ಅಧ್ಯಕ್ಷ ಅಶೋಕ ಅಲ್ಲಾಪುರ, ಜಿಲ್ಲಾಧಿಕಾರಿ ವಿಜಯ ಮಹಾಂತೇಶ ದಾನಮ್ಮನವರ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಚ್.ಡಿ. ಆನಂದಕುಮಾರ್, ಜಿಲ್ಲಾ ಪಂಚಾಯ್ತಿ ಸಿಇಒ ರಾಹುಲ್ ಶಿಂಧೆ ಮತ್ತಿತರರು ಪಾಲ್ಗೊಂಡಿದ್ದರು.

ಮೈಸೂರು ಅರಮನೆ ಆವರಣದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಭಾಗವಹಿಸಿರುವ ವಿಶ್ವ ಯೋಗ ದಿನದ ಕಾರ್ಯಕ್ರಮದ ನೇರ ವೀಕ್ಷಣೆಗೆ ಗೋಳಗುಮ್ಮಟದ ಆವರಣದಲ್ಲಿ ಅವಕಾಶ ಕಲ್ಪಿಸಲಾಗಿತ್ತು.

ನಗರದ ವಿವಿಧ ಶಾಲಾ, ಕಾಲೇಜುಗಳ ವಿದ್ಯಾರ್ಥಿಗಳು, ಸಂಘ ಸಂಸ್ಥೆಗಳ ಸದಸ್ಯರು, ಸಾರ್ವಜನಿಕರು ಸಹಸ್ರಾರು ಸಂಖ್ಯೆಯಲ್ಲಿ ಭಾಗವಹಿಸಿದ್ದರು.ಸಾಮೂಹಿಕ ಯೋಗ ಪ್ರದರ್ಶಿಸಲಾಯಿತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.