ವಿಜಯಪುರ: ಗುಮ್ಮಟ ನಗರಿ ವಿಜಯಪುರದಲ್ಲಿ ಶನಿವಾರ 11ನೇ ಅಂತರರಾಷ್ಟ್ರೀಯ ಯೋಗ ದಿನವನ್ನು ಆಚರಿಸಲಾಯಿತು.

ವಿಶ್ವ ಪ್ರಸಿದ್ಧ ಗೋಳಗುಮ್ಮಟದ ಆವರಣ, ಡಾ.ಬಿ.ಆರ್.ಅಂಬೇಡ್ಕರ್ ಕ್ರೀಡಾಂಗಣದಲ್ಲಿ ಬೆಳ್ಳಂಬೆಳಿಗ್ಗೆ ಸಾವಿರಾರು ಜನರು ಬಗೆಬಗೆಯ ಆಸನದಲ್ಲಿ ಯೋಗ ಪ್ರದರ್ಶಿಸಿದರು.

ವಿಜಯಪುರ ಜಿಲ್ಲಾಡಳಿತ, ಜಿಲ್ಲಾ ಪಂಚಾಯ್ತಿ, ಬಾಲ ವಿಕಾಸ ಅಕಾಡೆಮಿ ಹಾಗೂ ಜಿಲ್ಲಾ ಆಯುಷ್ ಇಲಾಖೆ ಸಹಯೋಗದೊಂದಿಗೆ ಡಾ.ಬಿ.ಆರ್.ಅಂಬೇಡ್ಕರ್ ಕ್ರೀಡಾಂಗಣದಲ್ಲಿ ಆಯೋಜಿಸಿದ್ದ ಯೋಗ ದಿನಕ್ಕೆ ಚಾಲನೆ ನೀಡಿ ಮಾತನಾಡಿದ ಬಾಲ ವಿಕಾಸ ಅಕಾಡೆಮಿ ಅಧ್ಯಕ್ಷ ಸಂಗಮೇಶ ಬಬಲೇಶ್ವರ, ದೈಹಿಕ ಹಾಗೂ ಮಾನಸಿಕ ಸದೃಢತೆ ಹಾಗೂ ಉತ್ತಮ ಆರೋಗ್ಯ ಕಾಪಾಡಿಕೊಳ್ಳಲು ದೈನಂದಿನ ಜೀವನದಲ್ಲಿ ಯೋಗವನ್ನು ನಮ್ಮ ದಿನಚರಿಯನ್ನಾಗಿ ಮಾಡಿಕೊಳ್ಳಬೇಕು ಎಂದು ಹೇಳಿದರು.

ಯೋಗವು ಈ ದೇಶದ ಕೊಡುಗೆಯಾಗಿದೆ. ಇದು ಸಾವಿರಾರು ವರ್ಷಗಳಿಂದ ಇದೆ. ಯೋಗವು ಅತ್ಯಂತ ಸೂಕ್ಷ್ಮವಾದ ವಿಜ್ಞಾನವನ್ನು ಆಧರಿಸಿದ ಆಧ್ಯಾತ್ಮಿಕ ಶಿಸ್ತು, ಇದು ಮನಸ್ಸು ಮತ್ತು ದೇಹದ ನಡುವಿನ ಸಮತೋಲನ ತರುತ್ತದೆ. ಯೋಗವು ಆರೋಗ್ಯಕರ ಜೀವನದ ಕಲೆ ಮತ್ತು ವಿಜ್ಞಾನವಾಗಿದೆ. ಮನಸ್ಸು ಮತ್ತು ದೇಹ, ಮನುಷ್ಯ ಮತ್ತು ಪ್ರಕೃತಿಯ ನಡುವಿನ ಪರಿಪೂರ್ಣ ಸಾಮರಸ್ಯವಾಗಿದೆ. ದೈಹಿಕ, ಮಾನಸಿಕ ಸದೃಢತೆಗೆ ಯೋಗ ಸಹಕಾರಿ. ಜೀವನದಲ್ಲಿ ಪ್ರತಿನಿತ್ಯ ಯೋಗ ರೂಡಿಸಿಕೊಳ್ಳಬೇಕು. ನಿಯಮಿತ ಯೋಗ ಮಾಡುವುದರ ಮೂಲಕ ಆರೋಗ್ಯ ದೃಢತೆ ಹಾಗೂ ಚೈತನ್ಯಯುಕ್ತ ಬದುಕು ನಡೆಸಬಹುದಾಗಿದೆ ಎಂದರು.

ಕರ್ನಾಟಕ ಬಾಲ ವಿಕಾಸ ಅಕಾಡೆಮಿಯು ನಾಡಿನ ಮಕ್ಕಳ ಸರ್ವಾಂಗೀಣ ವ್ಯಕ್ತಿತ್ವ ವಿಕಸನಕ್ಕೆ ಸದಾ ಬದ್ಧವಾಗಿದ್ದು, ನಾಡಿನ ಮಕ್ಕಳ ಆರೋಗ್ಯಪೂರ್ಣ ಜೀವನಕ್ಕಾಗಿ ಕಟಿಬದ್ಧವಾಗಿ ಕಾರ್ಯಮಾಡುತ್ತದೆ. ಇದಕ್ಕೆ ಪೂರಕವಾಗಿ ರಾಜ್ಯ ಮಟ್ಟದ ಯೋಗೋತ್ಸವವನ್ನು ಹಮ್ಮಿಕೊಳ್ಳಲಾಗಿದೆ. ಮಕ್ಕಳು ಇಂತಹ ಕಾರ್ಯಕ್ರಮದ ಸದುಪಯೋಗ ಪಡೆದುಕೊಂಡು ಆರೋಗ್ಯಯುತ ಜೀವನ ಮತ್ತು ಯೋಗಮಯ ಸಂತೃಪ್ತ ಜೀವನ ನಡೆಸುವಂತಾಗಬೇಕು ಎಂದರು.

ಜಿಲ್ಲಾಧಿಕಾರಿ ಟಿ.ಭೂಬಾಲನ್ ಮಾತನಾಡಿ, ಯೋಗವನ್ನು ಪಾಶ್ಚಿಮಾತ್ಯ ಜಗತ್ತಿಗೆ ಪರಿಚಯಿಸಿದ ಹೆಮ್ಮೆ ನಮ್ಮ ದೇಶಕ್ಕಿದೆ. ಈ ದಿನ ದೇಶ- ವಿದೇಶಗಳಲ್ಲೂ ಅಂತರರಾಷ್ಟ್ರೀಯ ಯೋಗ ದಿನ ಅಚರಿಸಲಾಗುತ್ತಿದ್ದು, ಯೋಗವು ಪ್ರಪಂಚದಾದ್ಯಂತ ಜನಪ್ರಿಯವಾಗಿದೆ. ದೈಹಿಕ ಮತ್ತು ಮಾನಸಿಕ ಆರೋಗ್ಯವನ್ನು ಕಾಪಾಡಿಕೊಳ್ಳಲು ಪರಿಣಾಮಕಾರಿ ಸಾಧನವಾಗಿದೆ ಎಂದರು.

ಯೋಗದಿಂದ ಅನೇಕ ಆರೋಗ್ಯ ಪ್ರಯೋಜನಗಳಿದ್ದು, ಯೋಗ ರೂಢಿಸಿಕೊಳ್ಳುವ ಮೂಲಕ ಉತ್ತಮ ಆರೋಗ್ಯ ಹೊಂದಬೇಕು ಎಂದು ಹೇಳಿದರು.

ಈ ಬಾರಿಯ ಘೋಷ ವಾಕ್ಯ 'ಒಂದು ಆರೋಗ್ಯ; ಒಂದು ಭೂಮಿ' ಎಂಬುದಾಗಿದೆ. ಈ ಭೂವಿ ನಮಗೆ ಎಲ್ಲವನ್ನೂ ನೀಡಿದೆ. ಪರಿಸರ ಮಾಲಿನ್ಯ ಮಾಡದೇ ಸಂರಕ್ಷಿಸುವ ಮೂಲಕ ನಮ್ಮ ಮುಂದಿನ ಪೀಳಿಗೆಗೆ ಉತ್ತಮವಾದ ಕೊಡುಗೆ ನೀಡುವುದು ನಮ್ಮ ಹೊಣೆಯಾಗಿದೆ. ಯೋಗವನ್ನು ನಮ್ಮ ಬದುಕಿನ ಅವಿಭಾಜ್ಯ ಅಂಗವಾಗಿಸಿಕೊಳ್ಳುವ ಮೂಲಕ ಉತ್ತಮ ಆರೋಗ್ಯ ಹೊಂದೋಣ ಎಂದರು.

ಸಾಮೂಹಿಕ ಯೋಗಾಭ್ಯಾಸ: 'ಒಂದು ಭೂಮಿ; ಒಂದು ಆರೋಗ್ಯಕ್ಕಾಗಿ ಯೋಗ' ಎಂಬ ಘೋಷ ವಾಕ್ಯದೊಂದಿಗೆ ನಡೆದ 11ನೇ ಅಂತರರಾಷ್ಟ್ರೀಯ ಯೋಗ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಯೋಗಾಸಕ್ತರಿಗೆ 45 ನಿಮಿಷಗಳ ಕಾಲ ಯೋಗ ಪ್ರಾತ್ಯಕ್ಷಿಕೆ ಮಾಡಿಸಲಾಯಿತು.

ಸುನೀತಾ ಬಿರಾದಾರ, ಜ್ಯೋತಿ, ಗೀತಾಂಜಲಿ ದಾಸರ, ಶುಭಂ ಅವರು ಯೋಗಾಸನ ಮತ್ತು ಪ್ರಾಣಾಯಾಮದ ಅಭ್ಯಾಸ ಮಾಡಿಸಿದರು.

ಜಿಲ್ಲಾ ಪಂಚಾಯ್ತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಿಷಿ ಆನಂದ, ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ, ಹೆಚ್ಚುವರಿ ಜಿಲ್ಲಾಧಿಕಾರಿ ಸೋಮಲಿಂಗ ಗೆಣ್ಣೂರ, ಜಿಲ್ಲಾ ಪಂಚಾಯ್ತಿ ಉಪ ಕಾರ್ಯದರ್ಶಿ ವಿಜಯಕುಮಾರ ಅಜೂರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕ ಕೆ.ಕೆ ಚವ್ಹಾಣ,ಜಿಲ್ಲಾ ಜಿಲ್ಲಾ ಆಯುಷ್ ಇಲಾಖೆಯ ಅಧಿಕಾರಿ ಡಾ,ವಿದ್ಯಾವತಿ ಅಥಣಿ, ಜಿಲ್ಲಾ ಶಸ್ತ್ರ ಚಿಕಿತ್ಸಕ ಡಾ.ಶಿವಾನಂದ ಮಾಸ್ತಿಹೊಳಿ, ಯುವಜನ ಸಬಲೀಕರಣ ಹಾಗೂ ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ರಾಜಶೇಖರ್ ಧೈವಾಡಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಸಂತೋಷ ಭೋವಿ, ಪ್ರಜಾಪಿತ ಬ್ರಹ್ಮಕುಮಾರಿ ವಿಶ್ವವಿದ್ಯಾನಿಲಯ, ಪತಂಜಲಿ ಯೋಗ ಸಂಸ್ಥೆ ಹಾಗೂ ಆಯುರ್ವೇದ, ಯುನಾನಿ, ಎನ್ ಸಿಸಿ ಹಾಗೂ ವಿವಿಧ ಶಾಲಾ-ಕಾಲೇಜಿನ ವಿದ್ಯಾರ್ಥಿಗಳು ಸೇರಿದಂತೆ ಸಾರ್ವಜನಿಕರು ಉಪಸ್ಥಿತರಿದ್ದರು.
.Yoga Day 2025: ಭಾರತ, ನ್ಯೂಯಾರ್ಕ್, ಲಂಡನ್ ಸೇರಿ ಜಗತ್ತಿನೆಲ್ಲೆಡೆ ಯೋಗ.International Yoga Day | ಬೆಂಗಳೂರು ಸೇರಿ ರಾಜ್ಯದೆಲ್ಲೆಡೆ ಯೋಗ ದಿನದ ಸಂಭ್ರಮ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.