ಬೆಳಗಾವಿ: 'ಜಾತ್ಯತೀತ ಜನತಾದಳ (ಜೆಡಿಎಸ್) ವತಿಯಿಂದ ಫೆ.27ರಂದು ವಿಜಯಪುರದಲ್ಲಿ ಜನತಾ ಸಮಾವೇಶ ಆಯೋಜಿಸಿದ್ದೇವೆ' ಎಂದು ಪಕ್ಷದ ಜಿಲ್ಲಾ ಘಟಕದ ಅಧ್ಯಕ್ಷ ಶಂಕರ ಮಾಡಲಗಿ ಹೇಳಿದರು.

ಇಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, 'ಪಕ್ಷ ಸಂಘಟನೆ ದೃಷ್ಟಿಯಿಂದ ಆಯೋಜಿಸಿರುವ ಸಮಾವೇಶದಲ್ಲಿ ಬೆಳಗಾವಿ, ಬಾಗಲಕೋಟೆ, ವಿಜಯಪುರ, ಗದಗ, ಹಾವೇರಿ, ಉತ್ತರ ಕನ್ನಡ ಮತ್ತು ಧಾರವಾಡ ಜಿಲ್ಲೆಗಳಿಂದ 1.50 ಲಕ್ಷ ಜನ ಸೇರಲಿದ್ದಾರೆ. ಬೆಳಗಾವಿ ಜಿಲ್ಲೆಯಿಂದ 20 ಸಾವಿರ ಜನರನ್ನು ಕರೆದೊಯ್ಯುತ್ತೇವೆ' ಎಂದರು.

'ರಾಜ್ಯದಲ್ಲಿ ಐದು ಕಡೆ ಜನತಾ ಸಮಾವೇಶಕ್ಕೆ ಯೋಜಿಸಿದ್ದೇವೆ' ಎಂದು ತಿಳಿಸಿದರು.

'ಪಕ್ಷದ ವರಿಷ್ಠರಾದ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ, ನಿಖಿಲ್ ಕುಮಾರಸ್ವಾಮಿ ಅವರೂ ಈ ತಿಂಗಳ ಕೊನೇ ವಾರ ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳುವರು' ಎಂದು ತಿಳಿಸಿದರು.

'ರಾಜ್ಯ ಸರ್ಕಾರ ಆರ್ಥಿಕವಾಗಿ ದಿವಾಳಿಯಾಗಿದ್ದು, ಭ್ರಷ್ಟಾಚಾರದಲ್ಲಿ ಮುಳುಗಿದೆ. ವಿವಿಧ ಸಚಿವರು ಹಗರಣಗಳಲ್ಲಿ ಸಿಕ್ಕಿ ಬೀಳುತ್ತಲೇ ಇದ್ದಾರೆ' ಎಂದು ದೂರಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.