ವಿಜಯಪುರ: ‘ಬಾಲ ಕಾರ್ಮಿಕ ಪದ್ಧತಿ ಹಾಗೂ ಬಾಲ್ಯ ವಿವಾಹದಂತಹ ಪಿಡುಗುಗಳ ಸಂಪೂರ್ಣ ನಿರ್ಮೂಲನೆಗೆ ಸಾರ್ವಜನಿಕರು, ಪೋಷಕರು ಹಾಗೂ ಈ ಕ್ಷೇತ್ರದಲ್ಲಿ ಕಾರ್ಯ ನಿರ್ವಹಿಸುತ್ತಿರುವ ವಿವಿಧ ಸಂಘ–ಸಂಸ್ಥೆಗಳು ಕೈಜೋಡಿಸಬೇಕು’ ಎಂದು ಜಿಲ್ಲಾಧಿಕಾರಿ ಟಿ. ಭೂಬಾಲನ್ ಹೇಳಿದರು.

ನಗರದ ಕಂದಗಲ್ ಶ್ರೀ ಹನುಮಂತರಾಯ ರಂಗಮಂದಿರದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಕಾನೂನು ಸೇವೆಗಳ ಪ್ರಾಧಿಕಾರ, ಪೊಲೀಸ್ ಇಲಾಖೆ, ಕಾರ್ಮಿಕ ಇಲಾಖೆ, ಶಿಕ್ಷಣ ಇಲಾಖೆ ಮತ್ತು ಜಿಲ್ಲಾ ಬಾಲ ಕಾರ್ಮಿಕ ಯೋಜನಾ ಸಂಘದ ಆಶ್ರಯದಲ್ಲಿ ಗುರುವಾರ ಆಯೋಜಿಸಿದ್ದ ವಿಶ್ವ ಬಾಲಕಾರ್ಮಿಕ ಪದ್ದತಿ ವಿರೋಧಿ ದಿನಾಚರಣೆ ಉದ್ಘಾಟಿಸಿ ಅವರು ಮಾತನಾಡಿದರು.

‘ಬಾಲ ಕಾರ್ಮಿಕ ಹಾಗೂ ಬಾಲ್ಯ ವಿವಾಹ ಪದ್ಥತಿ ರಹಿತ ಜಿಲ್ಲೆಯನ್ನಾಗಿಸಲು ಹಾಗೂ ಈ ಪಿಡುಗುಗಳ ನಿರ್ಮೂಲನೆಗೆ ಕಟಿಬದ್ಧರಾಗಿ ಕಾರ್ಯನಿರ್ವಹಿಸಬೇಕು. ಗುಣಮಟ್ಟದ ಆರೋಗ್ಯ, ಶಿಕ್ಷಣ ಮಕ್ಕಳ ಮೂಲಭೂತ ಹಕ್ಕಾಗಿದ್ದು, ಇದನ್ನು ಖಾತರಿಪಡಿಸುವ ಮೂಲಕ ಸುಭದ್ರ ಸಮಾಜ ನಿರ್ಮಾಣಕ್ಕೆ ಶ್ರಮಿಸಬೇಕು’ ಎಂದರು.

‘ಎಲ್ಲ ಮಕ್ಕಳನ್ನು ಶಾಲೆಗೆ ದಾಖಲಾತಿ ಮಾಡಿಸಬೇಕು. ಶಾಲೆಬಿಟ್ಟ ಮಕ್ಕಳ ಸಮಗ್ರ ಮಾಹಿತಿ ಕ್ರೋಢೀಕರಿಸಬೇಕು. ಬಾಲ ಕಾರ್ಮಿಕರು ಕಂಡು ಬಂದಲ್ಲಿ ಸಂಬಂಧಿಸಿದ ಇಲಾಖೆಗಳಿಗೆ ಸಾರ್ವಜನಿಕರು ಮಾಹಿತಿ ನೀಡಬೇಕು’ ಎಂದು ತಿಳಿಸಿದರು.

‘ಎಂತಹುದೇ ಸಂದರ್ಭದಲ್ಲಿ ವಿದ್ಯಾರ್ಥಿಗಳು ಶಿಕ್ಷಣವನ್ನು ಮೊಟಕುಗೊಳಿಸಬಾರದು. ಉನ್ನತ ಶಿಕ್ಷಣ ಪಡೆದು ಬದುಕನ್ನು ಸುಂದರಗೊಳಿಸುವುದರ ಜೊತೆಗೆ, ಸಮಾಜಕ್ಕೆ ಹಾಗೂ ದೇಶಕ್ಕೆ ಕೊಡುಗೆ ನೀಡಬೇಕು’ ಎಂದು ಸಲಹೆ ನೀಡಿದರು.

ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಅರವಿಂದ ಹಾಗರಗಿ ಮಾತನಾಡಿ, ಬಾಲ ಕಾರ್ಮಿಕ ಪದ್ಧತಿ ಹೋಗಲಾಡಿಸಲು ಎಲ್ಲರ ಸಹಕಾರ ಅಗತ್ಯವಾಗಿದೆ ಎಂದು ಹೇಳಿದರು.

ಅನೌಪಚಾರಿಕ ಶಿಕ್ಷಣ ಸಂಸ್ಥೆಯ ಪಾದ್ರಿ ಕೆವಿನ್ ಸೆಕ್ವೆರಾ, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಉಪ ನಿರ್ದೇಶಕ ಕೆ.ಕೆ. ಚವ್ಹಾಣ, ಶಾಲಾ ಶಿಕ್ಷಣ ಇಲಾಖೆಯ ಉಪ ನಿರ್ದೇಶಕಿ ಟಿ.ಎಸ್. ಕೋಲಾರ, ಜಿಲ್ಲಾ ಶಸ್ತ್ರಚಿಕಿತ್ಸಕ ಶಿವಾನಂದ ಮಾಸ್ತಿಹೊಳಿ, ಮಕ್ಕಳ ರಕ್ಷಣಾ ಘಟಕದ ಅಧಿಕಾರಿ ದೀಪಾಕ್ಷಿ ಜಾನಕಿ, ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷೆ ಬಸಮ್ಮ ಹತ್ತರಕಿ ಇದ್ದರು.

ಬಾಲಕಾರ್ಮಿಕ ಪದ್ಧತಿ ಕಂಡುಬಂದರೆ ಮಕ್ಕಳ ಸಹಾಯವಾಣಿ 1098 ಕರೆ ಮಾಡಿ ಮಾಹಿತಿ ನೀಡಿದಲ್ಲಿ ಮಕ್ಕಳ ರಕ್ಷಣೆಯ ಕಾರ್ಯ ಮಾಡಲಾಗುವುದು.
- ಟಿ. ಭೂಬಾಲನ್, ಜಿಲ್ಲಾಧಿಕಾರಿ

‘ಶಿಕ್ಷಣದಿಂದ ವಂಚಿತರಾಗದಿರಲಿ’

‘ಸ್ಪರ್ಧಾತ್ಮಕ ಜಗತ್ತಿನಲ್ಲಿ ಪ್ರತಿಯೊಬ್ಬರಿಗೂ ಶಿಕ್ಷಣ ಅವಶ್ಯವಾಗಿದೆ. ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ಒದಗಿಸಬೇಕು. ಯಾವುದೇ ಮಗು ಶಿಕ್ಷಣದಿಂದ ವಂಚಿತರಾಗದಂತೆ ನೋಡಿಕೊಳ್ಳುವ ಬಹು ದೊಡ್ಡ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ’ ಎಂದು ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶಂಕರ ಮಾರಿಹಾಳ ಹೇಳಿದರು. ಜಿಲ್ಲಾ ಕಾರ್ಮಿಕ ಇಲಾಖೆಯ ಅಧಿಕಾರಿ ಉಮಾಶ್ರೀ ಎಸ್.ಕೋಳಿ ಪ್ರಾಸ್ತಾವಿಕವಾಗಿ ಮಾತನಾಡಿ ‘ಜಿಲ್ಲೆಯಲ್ಲಿ ಪ್ರಸಕ್ತ ಸಾಲಿನಲ್ಲಿ ಮಕ್ಕಳನ್ನು ದುಡಿಸಿಕೊಳ್ಳುತ್ತಿದ್ದ 26 ಪ್ರಕರಣ ದಾಖಲಾಗಿದೆ. ಮಾಲೀಕರಿಗೆ ಜಾಗೃತಿ ಸಹ ಮೂಡಿಸಲಾಗುತ್ತಿದೆ’ ಎಂದು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.