ಬುಧವಾರ, ಮಾರ್ಚ್ 29, 2023
23 °C

ವಿಜಯಪುರದಲ್ಲಿ ಪತ್ರಕರ್ತರ ರಾಜ್ಯ ಸಮ್ಮೇಳನ: ಮೆರವಣಿಗೆಗೆ ಚಾಲನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ವಿಜಯಪುರ:  ಐತಿಹಾಸಿಕ ಗುಮ್ಮಟ ನಗರಿಯಲ್ಲಿ  ಪತ್ರಕರ್ತರ 37 ನೇ ರಾಜ್ಯ ಸಮ್ಮೇಳನದ ಅಂಗವಾಗಿ ಮೆರವಣಿಗೆ ಆರಂಭವಾಯಿತು.

ನಗರದ ಸಿದ್ದೇಶ್ವರ ದೇವಸ್ಥಾನದಿಂದ  ಪ್ರಾರಂಭವಾದ ಮೆರವಣಿಗೆಗೆ ಕರ್ನಾಟಕ ಕಾರ್ಯನಿರತ ಪತ್ರಕರ್ತ ಸಂಘದ ಅಧ್ಯಕ್ಷ ಶಿವಾನಂದ ತಗಡೂರು ಡೊಳ್ಳು ಬಾರಿಸುವ ಮೂಲಕ ಚಾಲನೆ ನೀಡಿದರು.

ವಿವಿಧ ವೇಷ ಭೂಷಣ ತೊಟ್ಟ ಜಾನಪದ ಕಲಾ ತಂಡಗಳು, ಸ್ಕೌಟ್ ಮತ್ತು ಗೈಡ್ಸ್ ವಿದ್ಯಾರ್ಥಿಗಳು ಮೆರವಣಿಗೆಯಲ್ಲಿ ಹೆಜ್ಜೆ ಹಾಕಿದರು.
ಮೆರವಣಿಗೆಯೂ ನಗರದ ಸಿದ್ದೇಶ್ವರ ದೇವಸ್ಥಾನದಿಂದ ಪ್ರಾರಂಭವಾಗಿ ಗಾಂಧಿಚೌಕಿ, ಬಸವೇಶ್ವರ ವೃತ್ತ, ಅಂಬೇಡ್ಕರ್ ವೃತ್ತದ ಮೂಲಕ ಸಮ್ಮೇಳನ ನಡೆಯಲಿರುವ ಕಂದಗಲ್ ಹಣಮಂತರಾಯ ರಂಗಮಂದಿರ ತಲುಪಿತು.

ಮೆರವಣಿಗೆಯಲ್ಲಿ ಕಾರ್ಯನಿರತ ಪತ್ರಕರ್ತ ಸಂಘದ ಪ್ರಧಾನ ಕಾರ್ಯದರ್ಶಿ ಜಿ.ಸಿ.ಲೋಕೇಶ,  ರಾಜ್ಯ ಕಾರ್ಯದರ್ಶಿ ಸೋಮಶೇಖರ್ ಕೆರಗೋಡು,  ಮತ್ತೀಕೆರೆ ಜಯರಾಮ, ನಿಂಗಪ್ಪ ಚಾವಡಿ, ಉಪಾಧ್ಯಕ್ಷರಾದ ಪುಂಡಲೀಕ ಬಾಳೋಜಿ, ಅಜ್ಜಮಾಡ ರಮೇಶ ಕುಟ್ಟಪ್ಪ, ಭವಾನಿಸಿಂಗ್ ಠಾಕೂರ್, ಖಚಾಂಚಿ ವಾಸುದೇವ ಹೊಳ್ಳ, ವಿಜಯಪುರ  ಜಿಲ್ಲಾ ಘಟಕದ ಅಧ್ಯಕ್ಷ ಸಂಗಮೇಶ ಚೂರಿ, ಪ್ರಧಾನ ಕಾರ್ಯದರ್ಶಿ ಮೋಹನ್‌ ಕುಲಕರ್ಣಿ, ಇಂದು ಶೇಖರ ಮಣೂರ, ಫಯಾಜ್ ಕಲಾದಗಿ, ಶರಣು ಸಬರದ, ಡಿ.ಬಿ.ವಡವಡಗಿ ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು