ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅವಳಿ ಜಿಲ್ಲೆಗೆ ನ್ಯಾಯ ಒದಗಿಸಿವೆ: ಪೂಜಾರ

ವಿಧಾನ ಪರಿಷತ್‌ ಚುನಾವಣೆ: ಬಿಜೆಪಿ ಸಮಾವೇಶ
Last Updated 2 ಡಿಸೆಂಬರ್ 2021, 14:58 IST
ಅಕ್ಷರ ಗಾತ್ರ

ಚಡಚಣ:ಸುಮಾರು 40 ವರ್ಷಗಳ ರಾಜಕೀಯ ಜೀವನದಲ್ಲಿ ಎರಡು ಬಾರಿ ಶಾಸಕನಾಗಿ ಜನರ ಸೇವೆ ಮಾಡಿದ್ದೇನೆ. ಕೃಷ್ಠಾ ಮೇಲ್ದಂಡೆ ಯೋಜನೆ, ನಿರಾಶ್ರಿತರಿಗೆ ನ್ಯಾಯ ಒದಗಿಸಿ, ಪುನರ್‌ ವಸತಿ ಕಲ್ಪಿಸಿದ್ದೇನೆ ಎಂದು ವಿಧಾನ ಪರಿಷತ್‌ ಬಿಜೆಪಿ ಅಭ್ಯರ್ಥಿ ಪಿ.ಎಚ್.ಪೂಜಾರ ಹೇಳಿದರು.

ಪಟ್ಟಣದ ಸಂಗಮೇಶ್ವರ ಮಂಗಲ ಕಾರ್ಯಾಲಯದಲ್ಲಿ ವಿಧಾನ ಪರಿಷತ್‌ ಚುನಾವಣೆ ಹಿನ್ನೆಲೆಯಲ್ಲಿ ಗುರುವಾರ ನಡೆದ ಸ್ಥಳಿಯ ಸಂಸ್ಥೆಗಳ ಸದಸ್ಯರ ಸಭೆಯಲ್ಲಿ ಅವರು ಮಾತನಾಡಿದರು.

ಎರಡೂ ಜಿಲ್ಲೆಗಳ ಸಮಸ್ಯೆಗಳಿಗೆ ಬಿ.ಎಸ್‌.ಯಡಿಯೂರಪ್ಪ ಅವರೊಂದಿಗೆ ಹೋರಾಟ ಮಾಡಿದ ಅನುಭವ ಇದೆ. ನೆರೆ ಹಾವಳಿ ಸಂಭವಿಸಿದಾಗ ಎರಡೂ ಜಿಲ್ಲೆಗಳ ಭಾದಿತ ಗ್ರಾಮಗಳಿಗೆ ಖುದ್ದು ಭೇಟಿ ನೀಡಿ ಸಂತ್ರಸ್ತರಿಗೆ ನೆರವು ನೀಡಿದ್ದೇನೆ. ಒಂದು ಬಾರಿ ತಮ್ಮ ಸೇವೆಗೆ ಅವಕಾಶ ಕೊಡಿ ಎಂದು ಮನವಿ ಮಾಡಿದರು.

ಮಾಜಿ ಶಾಸಕ ಶ್ರೀಕಾಂತ ಕುಲಕರ್ಣಿ, ಕಾಂಗ್ರೆಸ್‌ ಪಕ್ಷ ಮುಳುಗಿದ ಹಡಗು. ವಿಶ್ವ ನಾಯಕ ಮೋದಿ ಅವರ ದೂರದೃಷ್ಠಿ ಹಾಗೂ ಜನಪರ ಯೋಜನೆಗಳ ಅನುಷ್ಠಾನದಿಂದ ದೇಶ ಸರ್ವತೋಮುಖವಾಗಿ ಅಭಿವೃದ್ಧಿ ಹೊಂದುತ್ತಿದೆ ಎಂದು ಹೇಳಿದರು.

ಸಿಂದಗಿ ಶಾಸಕ ಶಾಸಕ ರಮೇಶ ಭೂಸನೂರ ಮಾತನಾಡಿ, ಸ್ಥಳಿಯ ಸಂಸ್ಥೆಗಳಿಗೆ ಹೆಚ್ಚು ಒತ್ತು ನೀಡಿ ಗ್ರಾಮಗಳ ಅಭಿವೃದ್ಧಿಗೆ ಯೋಜನೆ ಅನುಷ್ಠಾನಗೊಳಿಸಿದ ಕೀರ್ತಿ ಬಿಜೆಪಿಗೆ ಸಲ್ಲುತ್ತದೆ ಎಂದರು.

ಶಾಸಕ ಸೋಮನಗೌಡ ಪಾಟೀಲ ಮಾತನಾಡಿ, ಕೃಷ್ಠಾ ಮೇಲ್ದಂಡೆ ಯೋಜನೆಗೆ ಹೋರಾಟ ನಡೆಸಿ ಸಂತ್ರಸ್ತರಿಗೆ ನ್ಯಾಯ ಒದಗಿಸಿದ ಕೀರ್ತಿ ಅಭ್ಯರ್ಥಿ ಪಿ.ಎಚ್.ಪೂಜಾರ ಅವರಿಗೆ ಸಲ್ಲುತ್ತದೆ ಎಂದರು.

ಮುದ್ದೇಬಿಹಾಳ ಶಾಸಕ ಎ.ಎಸ್‌.ಪಾಟೀಲ ನಡಹಳ್ಳಿ ಮಾತನಾಡಿ, ಅಧಿಕಾರ ವಿಕೇಂದ್ರೀಕರಣ ಪರಿಕಲ್ಪನೆಗೆ ಒತ್ತು ನೀಡಿದ ದಿ.ರಾಮಕೃಷ್ಣ ಹೆಗಡೆ ಅವರ ಪರಿಕಲ್ಪನೆಯಂತೆ ಗ್ರಾಮಗಳು ವಿಕಾಸಗೊಂಡರೆ ದೇಶ ವಿಕಾಸಗೊಳ್ಳುವುದು ಎಂದರು.

ಹಿಂದುಳಿದ ಮೋರ್ಚಾ ಜಿಲ್ಲಾ ಕಾರ್ಯದರ್ಶಿ ವಿವೇಕ ಡಬ್ಬಿ, ವಿಧಾನ ಪರಿಷತ್‌ ಸದಸ್ಯ ಹಣಮಂತ ನಿರಾಣಿ ಮಾತನಾಡಿದರು.

ಚಡಚಣ ಬಿಜೆಪಿ ಮಂಡಳ ಅಧ್ಯಕ್ಷ ರಾಮ ಅವಟಿ, ಮುಖಂಡ ಅಪ್ಪುಗೌಡ ಪಾಟೀಲ, ಅಪ್ಪುಗೌಡ ಬಿರಾದಾರ, ಶ್ರೀಮಂತ ಉಮರಾಣಿ,ತಾ.ಪಂ. ಮಾಜಿ ಸದಸ್ಯ ರಾಜು ಝಳಕಿ, ಗ್ರಾ.ಪಂ ಅಧ್ಯಕ್ಷ ಲಾಲಸಾಬ ಬಡಿಗೇರ ಸೇರಿದಂತೆ ತಾಲ್ಲೂಕಿನ 13 ಗ್ರಾಮ ಪಂಚಾಯ್ತಿ ಸದಸ್ಯರು, ಪಟ್ಟಣ ಪಂಚಾಯ್ತಿ ಸದಸ್ಯರು ಬಿಜೆಪಿ ಕಾರ್ಯಕರ್ತರು ಸಭೆಯಲ್ಲಿ ಇದ್ದರು.

***

ಕೇಂದ್ರ, ರಾಜ್ಯ ಬಿಜೆಪಿ ಸರ್ಕಾರಗಳ ಜನಪರ ಯೋಜನೆಗಳು ನನ್ನ ಗೆಲುವಿಗೆ ಸಹಾಯವಾಗಲಿವೆ. ಐದು ಸಾವಿರ ಮತಗಳಿಂದ ಜಯಗಳಿಸುವ ವಿಶ್ವಾಸ ಇದೆ
–ಪಿ.ಎಚ್‌.ಪೂಜಾರ, ಬಿಜೆಪಿ ಅಭ್ಯರ್ಥಿ, ವಿಧಾನ ಪರಿಷತ್‌

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT