ಸೋಲಾಪುರ: ಹೈದರಾಬಾದ್ ಗೆಜೆಟಿಯರ್ ಪ್ರಕಾರ ಕೈಕಾಡಿ ಸಮುದಾಯವನ್ನು ಎಸ್ಟಿ ಮೀಸಲಾತಿ ಪಟ್ಟಿಯಲ್ಲಿ ಸೇರಿಸಬೇಕೆಂಬ ಪ್ರಮುಖ ಬೇಡಿಕೆ ಈಡೇರಿಕೆಗಾಗಿ ನಗರದಲ್ಲಿ ಸಮುದಾಯದವರು ಮಂಗಳವಾರ ಪ್ರತಿಭಟನೆ ನಡೆಸಿದರು.

ಛತ್ರಪತಿ ಶಿವಾಜಿ ವೃತ್ತದಿಂದ ತೆರಳಿದ ಪ್ರತಿಭಟನಕಾರರು ಜಿಲ್ಲಾಧಿಕಾರಿ ಕಚೇರಿಗೆ ತಲುಪಿ ಮನವಿ ಸಲ್ಲಿಸಿದರು.

‘ರಾಜ್ಯ ಸರ್ಕಾರವು ಸೆ.2ರಂದು ರಾಜ್ಯದ ಮರಾಠಾ ಸಮುದಾಯಕ್ಕೆ ಹೈದರಾಬಾದ್ ಗೆಜೆಟ್ ಪ್ರಕಾರ ಮೀಸಲಾತಿ ನೀಡಿದೆ. ಅದೇ ರೀತಿ ಕೈಕಾಡಿ ಸಮುದಾಯಕ್ಕೆ ಎಸ್ಟಿ ಮೀಸಲಾತಿ ಅಡಿ ಸೌಲಭ್ಯ ನೀಡಬೇಕು’ ಎಂದು ಆಗ್ರಹಿಸಿದರು.

ಪ್ರತಿಭಟನೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಮಹಿಳೆಯರು, ಯುವಕರು ಪಾಲ್ಗೊಂಡಿದ್ದರು.