ಬುಧವಾರ, 21 ಫೆಬ್ರುವರಿ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಕ್ಕಳ ಪ್ರತಿಭೆಗೆ ವೇದಿಕೆ ಪ್ರತಿಭಾ ಕಾರಂಜಿ: ಶಾಸಕ ಪಾಟೀಲ

Published 29 ನವೆಂಬರ್ 2023, 13:50 IST
Last Updated 29 ನವೆಂಬರ್ 2023, 13:50 IST
ಅಕ್ಷರ ಗಾತ್ರ

ಇಂಡಿ: ‘ಮಕ್ಕಳಲ್ಲಿ ಹುದುಗಿರುವ ಪ್ರತಿಭೆ ಅರಳಲು ಪ್ರತಿಭಾ ಕಾರಂಜಿ ಸೂಕ್ತ ವೇದಿಕೆಯಾಗಿದ್ದು, ಮಕ್ಕಳು ಉತ್ಸಾಹದಿಂದ ಪಾಲ್ಗೊಳ್ಳಬೇಕು’ ಎಂದು ಶಾಸಕ ಯಶವಂತರಾಯಗೌಡ ಪಾಟೀಲ ಹೇಳಿದರು.

ಅವರು ಪಟ್ಟಣದ ರಾಯಲ್ ಇಂಟರ್‌ನ್ಯಾಷನಲ್ ಇಂಗ್ಲಿಷ್ ಮಾಧ್ಯಮ ಶಾಲೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ ಹಾಗೂ ಕ್ಷೇತ್ರ ಸಮನ್ವಯಾಧಿಕಾರಿಗಳ ಕಾರ್ಯಾಲಯಗಳ ಆಶ್ರಯದಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ತಾಲ್ಲೂಕು ಮಟ್ಟದ ಪ್ರತಿಭಾ ಕಾರಂಜಿ ಮತ್ತು ಕಲೋತ್ಸವ ಕೂಟ ಉದ್ಘಾಟಿಸಿ ಮಾತನಾಡಿದರು.

‘ಪ್ರತಿ ಮಗುವಿನಲ್ಲೂ ಒಂದಲ್ಲ ಒಂದು ಸಾಂಸ್ಕೃತಿಕ ಪ್ರತಿಭೆ ಅಡಗಿರುತ್ತದೆ. ಅದನ್ನು ಗುರುತಿಸಿ ಅನಾವರಣ ಮಾಡುವ ಮೂಲಕ ಮಕ್ಕಳು ಸರ್ವಾಂಗೀಣ ಬೆಳವಣಿಗೆ ಸಾಧಿಸಲು ಅವಕಾಶ ಕಲ್ಪಿಸಬೇಕು. ಸೋಲು, ಗೆಲುವಿನ ಬಗ್ಗೆ ಯೋಚಿಸದೆ ಸ್ಪರ್ಧೆಗಳಲ್ಲಿ ಭಾಗವಹಿಸಬೇಕು’ ಎಂದರು.

ಕಂದಾಯ ಉಪ ವಿಭಾಗಾಧಿಕಾರಿ ಅಬೀದ್ ಗದ್ಯಾಳ್ ಮಾತನಾಡಿ, ‘ವಿದ್ಯಾರ್ಥಿಗಳು ಆಧುನಿಕ ಯುಗದಲ್ಲಿ ಸ್ಪರ್ಧೆ ಎದುರಿಸಿ ಬದುಕು ಕಟ್ಟಿಕೊಳ್ಳುವ ಜತೆಗೆ ಸಾಮಾಜಿಕ ಕಳಕಳಿ ಬೆಳೆಸಿಕೊಳ್ಳುವುದು ಅಗತ್ಯ’ ಎಂದರು.

ಕ್ಷೇತ್ರ ಶಿಕ್ಷಣಾಧಿಕಾರಿ ಟಿ.ಎಸ್. ಆಲಗೂರ ಮಾತನಾಡಿದರು. ಶಾಲೆಯ ಅಧ್ಯಕ್ಷ ಮಕ್ಬುಲಸಾಹೇಬ ಪಟೇಲ, ಕ್ಷೇತ್ರ ಸಮನ್ವಯಾಧಿಕಾರಿ ಎಸ್.ಆರ್. ನಡಗಡ್ಡಿ, ಅಕ್ಷರದಾಸೋಹ ಸಂಯೋಜಕ ಎಂ.ಎಚ್. ಯರಗುದ್ರಿ, ನೋಡಲ್ ಅಧಿಕಾರಿ ಎಸ್.ಡಿ. ಪಾಟೀಲ, ಭೀಮಣ್ಣ ಕೌಲಗಿ, ಜಾವೀದ್ ಮೋಮಿನ್, ಈಶ್ವರ ಅಳೂರ, ದೈಹಿಕ ಶಿಕ್ಷಣಾಧಿಕಾರಿ ಎ.ಎಸ್. ಲಾಳಸೇರಿ, ನಿಜಣ್ಣ ಕಾಳೆ, ಮಹಮ್ಮದ ಗುಲಬರ್ಗಾ, ಅಸ್ಲಂ ಕಡಣಿ, ಬಸವರಾಜ ಗೊರನಾಳ, ಎಸ್.ಆರ್. ನಡಗಡ್ಡಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT