ವಿಜಯಪುರ: ‘ಕನಕದಾಸರು ದಾಸರು ಕೀರ್ತನೆಗಳ ಮೂಲಕ ಸಮಾಜದಲ್ಲಿ ಉನ್ನತ ಚಿಂತನೆಗಳನ್ನು ಬಿತ್ತಿದ್ದಾರೆ. ಸಮಾಜದ ಅಂಕು-ಡೊಂಕುಗಳನ್ನು ತಿದ್ದಿದ್ದಾರೆ. ಅನಿಷ್ಠ ಪದ್ಧತಿಗಳು, ಮೂಢನಂಬಿಕೆಗಳನ್ನು ತೊಡೆದು ಹಾಕಲು ಶ್ರಮಿಸಿದ್ದಾರೆ’ ಎಂದು ಬೃಹತ್ ಹಾಗೂ ಮಧ್ಯಮ ಕೈಗಾರಿಕೆ ಖಾತೆ ಸಚಿವ ಎಂ.ಬಿ. ಪಾಟೀಲ ಹೇಳಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ನಗರದ ಕಂದಗಲ್ ಹನುಮಂತರಾಯ ರಂಗಮಂದಿರದಲ್ಲಿ ಶನಿವಾರ ಹಮ್ಮಿಕೊಂಡಿದ್ದ ಸಂತ ಕನಕದಾಸ ಜಯಂತಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

‘ಕನಕದಾಸರು ರಚಿಸಿದ ‘ಕುಲ ಕುಲವೆಂದು ಹೊಡೆದಾಡದಿರಿ...’ ಕೀರ್ತನೆಯ ಸಾಲುಗಳನ್ನು ಪ್ರಸ್ತಾಪಿಸಿದ ಸಚಿವರು, ಕನಕದಾಸರು ಜಾತಿಪದ್ಧತಿಯ ತಾರತಮ್ಯಗಳನ್ನು ಅಲ್ಲಗಳೆದರು. ಕೀರ್ತನೆಗಳು, ಸುಳಾದಿ, ಉಗಾಭೋಗಗಳ ಮೂಲಕ ಕನ್ನಡ ಸಾಹಿತ್ಯ ಶ್ರೀಮಂತಗೊಳಿಸಿದ್ದಲ್ಲದೇ, ಸಂಗೀತ ಪ್ರಪಂಚಕ್ಕೆ ತನ್ನದೇಯಾದ ಕೊಡುಗೆ ನೀಡಿದ್ದಾರೆ’ ಎಂದು ಅವರು ಹೇಳಿದರು.

ಜಿಲ್ಲಾಧಿಕಾರಿ ಡಾ. ಆನಂದ ಕೆ. ಮಾತನಾಡಿ, ‘ಭಕ್ತಿಪಂಥದ ದಾಸವರೇಣ್ಯರಲ್ಲಿ ಭಕ್ತ ಕನಕದಾಸರು ಹೆಸರು ಅಜರಾಮರ ಅವರಿಂದ ರಚಿತ ಸಾಹಿತ್ಯ ಜನ ಸರಳವಾಗಿ ಅಥೈಸಿಕೊಳ್ಳಬಹುದಾಗಿದೆ. ಅವರ ಚಿಂತನೆಗಳು ಸಂದೇಶಗಳು ಸುಂದರ ಬದುಕಿನ ಜೀವನಕ್ಕೆ ಮಾರ್ಗದರ್ಶನ ನೀಡುತ್ತವೆ. ದಾರ್ಶನಿಕರು ನೀಡಿರುವ ಸಂದೇಶ ಹಾಗೂ ಚಿಂತನೆಗಳ ಸಾರ ಅರಿತು ನಡೆಯೋಣ’ ಎಂದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಲಕ್ಷ್ಮಣ ನಿಂಬರಗಿ, ‘ಕನಕದಾಸರು ಕನ್ನಡ ಸಾಹಿತ್ಯ ಲೋಕಕ್ಕೆ ಗಣನೀಯ ಕೊಡುಗೆ ನೀಡಿದ್ದಾರೆ. ಸಂಗೀತಕ್ಕೂ ಕೊಡುಗೆ ನೀಡಿದ್ದಾರೆ. ಕೀರ್ತನಕಾರರಾಗಿ, ಸಂತರಾಗಿ, ದಾರ್ಶನಿಕರಾಗಿ ಕನ್ನಡಕ್ಕೆ ಅವರ ಕೊಡುಗೆ ಅಪಾರ. ರಾಮಧಾನ್ಯ ಚರಿತೆ ಸಮಾನತೆಯ ಸಂಕೇತವಾಗಿ ಧ್ವನಿಸುತ್ತವೆ’ ಎಂದು ಹೇಳಿದರು.

ವಿಶೇಷ ಉಪನ್ಯಾಸ ನೀಡಿದ ಸಿದ್ದಪ್ಪ ಧನಗೊಂಡ, ಕನಕದಾಸರು ತಮ್ಮ ಅಮೂಲ್ಯ ಕೀರ್ತನಗೆಳ ಮೂಲಕ ಸಮಾಜದಲ್ಲಿನ ಮೂಢನಂಬಿಕೆಗಳನ್ನು ಹೋಗಲಾಡಿಸಲು ಹಾಗೂ ಜನರಲ್ಲಿ ವೈಚಾರಿಕ ಮನೋಭಾವ ಬೆಳೆಸುವಲ್ಲಿ ಅನನ್ಯ ಕೊಡುಗೆ ನೀಡಿದ್ದಾರೆ ಎಂದು ಹೇಳಿದರು.

ಪಾಲಿಕೆ ಮೇಯರ್ ಎಂ.ಎಸ್ ಕರಡಿ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಕನ್ನಾನ್ ಮುಶ್ರೀಪ್, ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷರಾದ ಸುಜಾತ ಕಳ್ಳಿಮನಿ, ಹೆಚ್ಚುವರಿ ಜಿಲ್ಲಾಧಿಕಾರಿ ಸೋಮಲಿಂಗ ಗೆಣ್ಣೂರ, ಪಾಲಿಕೆ ಅಧೀಕ್ಷಕ ಎಂಜಿನಿಯರ್ ತಿಮ್ಮಪ್ಪ, ಜಿಲ್ಲಾ ಪಂಚಾಯತ್ ಮುಖ್ಯ ಲೆಕ್ಕಾಧಿಕಾರಿ ರಾಮಣ್ಣ ಅಥಣಿ, ಮಲ್ಲಣ್ಣ ಶಿರಸ್ಯಾಡ, ಕೆಕೆಆರ್ಟಿಸಿಯ ವಿಭಾಗೀಯ ನಿಂತ್ರಣಾಧಿಕಾರಿ ನಾರಾಯಣಪ್ಪ ಕುರುಬರ, ಪಾಲಿಕೆ ಉಪ ಆಯುಕ್ತ ಮಹಾವೀರ ಬೋರಣ್ಣವರ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಸಂತೋಷ ಭೋವಿ ಇದ್ದರು.

ಫ.ಗು.ಹಳಕಟ್ಟಿ ಸಂಶೋಧನಾ ಕೇಂದ್ರದ ಮೂಲಕ ದಾಸ ಸಾಹಿತ್ಯದ 65 ಸಂಪುಟ ಹೊರತರಲಾಗುತ್ತಿದ್ದು ಈಗಾಗಲೇ 45 ಸಂಪುಟಗಳ ಕಾರ್ಯ ಪೂರ್ಣಗೊಂಡಿದೆ. ಈ ಪೈಕಿ 4 ಸಂಪುಟಗಳು ಕನಕದಾಸರ ಕೀರ್ತನೆ ಒಳಗೊಂಡಿವೆ
ಎಂ.ಬಿ.ಪಾಟೀಲ ಬೃಹತ್ ಹಾಗೂ ಮಧ್ಯಮ ಕೈಗಾರಿಕೆ ಖಾತೆ ಸಚಿವ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.