ವಿಜಯಪುರ: ನಗರ ಸಮೀಪದ ಹಿಟ್ಟಿನಹಳ್ಳಿ ಗ್ರಾಮವು ವಿಜಯಪುರ ತಾಲ್ಲೂಕು ಎಂಟನೇ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಸಜ್ಜಾಗಿದೆ.

ಗ್ರಾಮದ ಶ್ರೀ ಶಿವಮೂರ್ತಿ ಸ್ವಾಮಿ ಚರಂತಿಮಠದ ಆವರಣದಲ್ಲಿ ಜ.20 ಮತ್ತು 21ರಂದು ನಡೆಯುವ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷತೆಯನ್ನು ಸಾಹಿತಿ, ಕೆಎಎಸ್ ಅಧಿಕಾರಿ ಸೋಮಲಿಂಗ ಗೆಣ್ಣೂರ ವಹಿಸಲಿದ್ದಾರೆ ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾ ಘಟಕದ ಅಧ್ಯಕ್ಷ ಹಾಸಿಂಪೀರ ವಾಲಿಕಾರ ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

ಸಮ್ಮೇಳನಾಧ್ಯಕ್ಷರ ಮೆರವಣಿಗೆ, ಉದ್ಘಾಟನಾ ಕಾರ್ಯಕ್ರಮ, ಪುಸ್ತಕ ಮಳಿಗೆ ಹಾಗೂ ಎರಡು ದಿನಗಳ ಕಾಲ ನಡೆಯುವ ವಿವಿಧ ಗೋಷ್ಠಿಗಳು ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಸಂಪೂರ್ಣ ತಯಾರಿ ಮಾಡಿಕೊಳ್ಳಲಾಗಿದೆ ಎಂದು ಹೇಳಿದರು.

ಜ.20 ರಂದು ಬೆಳಿಗ್ಗೆ 8.15ಕ್ಕೆ ಹೆಚ್ಚುವರಿ ಜಿಲ್ಲಾಧಿಕಾರಿ ಡಾ.ಔದ್ರಾಮ್ ರಾಷ್ಟ್ರ ಧ್ವಜಾರೋಹಣ ನೆರವೇರಿಸಲಿದ್ದಾರೆ. ಉಪ ವಿಭಾಗಾಧಿಕಾರಿ ಗುರುನಾಥ ದಡ್ಡೆ ನಾಡ ಧ್ವಜಾರೋಹಣ, ತಹಶೀಲ್ದಾರ್ ಪ್ರಶಾಂತ ಚನಗೊಂಡ ಪರಿಷತ್ ಧ್ವಜಾರೋಹಣ ನೆರವೇರಿಸಲಿದ್ದಾರೆ. ಜೊತೆಗೆ ಪುಸ್ತಕ ಮಳಿಗೆ ಹಾಗೂ ದಾಸೋಹ ಮನೆ ಉದ್ಘಾಟಿಸಲಿದ್ದಾರೆ ಎಂದರು.

ಬೆಳಿಗ್ಗೆ 9ಕ್ಕೆ ಸಮ್ಮೇಳನಾಧ್ಯಕ್ಷ ಸೋಮಲಿಂಗ ಗೆಣ್ಣೂರ ಅವರ ಮೆರವಣಿಗೆಯು ಮಾರುತೇಶ್ವರ ದೇವಸ್ಥಾನದಿಂದ ಸಮ್ಮೇಳನದ ಸ್ಥಳದವರೆಗೆ ಜರುಲಿದೆ ಎಂದು ಹೇಳಿದರು.

ಬೆಳಿಗ್ಗೆ 10.30ಕ್ಕೆ ಪಂಚಮ ಶಿವಲಿಂಗೇಶ್ವರ ಸ್ವಾಮಿಗಳ ಪ್ರಧಾನ ವೇದಿಕೆಯಲ್ಲಿ ಸಮ್ಮೇಳನಕ್ಕೆ ಚಾಲನೆ ಸಿಗಲಿದೆ. ಬಬಲೇಶ್ವರದ ಮಹಾದೇವ ಶಿವಾಚಾರ್ಯರು, ನಿಡಸೋಸಿಯ ದುರದುಂಡೇಶ್ವರ ಸ್ವಾಮೀಜಿ ಸಾನ್ನಿಧ್ಯದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ.ಪಾಟೀಲ ಸಮ್ಮೇಳನ ಉದ್ಘಾಟಿಸಲಿದ್ದಾರೆ. ನಾಡದೇವಿ ಭಾವಚಿತ್ರಕ್ಕೆ ಸಚಿವ ಶಿವಾನಂದ ಪಾಟೀಲ ಪುಷ್ಪಾರ್ಚನೆ ನೆರವೇರಿಸಲಿದ್ದಾರೆ. ಶಾಸಕ ವಿಠಲ ಕಟಕದೊಂಡ ಅಧ್ಯಕ್ಷತೆ ವಹಿಸಲಿದ್ದಾರೆ. ಸಮ್ಮೇಳನಾಧ್ಯಕ್ಷ ಸೋಮಲಿಂಗ ಗೆಣ್ಣೂರ ಭಾಷಣ ಮಾಡಲಿದ್ದಾರೆ ಎಂದು ವಿವರಿಸಿದರು.

ಮಧ್ಯಾಹ್ನ 1ಕ್ಕೆ ಮಹಿಳಾ ಗೋಷ್ಠಿ, 3.30ಕ್ಕೆ ಜಾನಪದ ಗೋಷ್ಠಿ ಹಾಗೂ ಸಂಜೆ 6ಕ್ಕೆ ಮನೋರಂಜನಾ ಕಾರ್ಯಕ್ರಮಗಳು ಜರುಗಲಿವೆ ಎಂದರು.

ಜ.21ರಂದು ಬೆಳಿಗ್ಗೆ 9ಕ್ಕೆ ನಿಜಶರಣ ಅಂಬಿಗರ ಚೌಡಯ್ಯ ಜಯಂತಿ ಉತ್ಸವ ಹಾಗೂ ಬುತ್ತಿ ಜಾತ್ರೆ ನಡೆಯಲಿದೆ. ಅಂದು ಗ್ರಾಮದ ಮಹಿಳೆಯರೇ ತರುವ ಬುತ್ತಿಯನ್ನೇ ಎಲ್ಲರೂ ಸವಿಯಲಿದ್ದಾರೆ. ಬೆಳಿಗ್ಗೆ 10.30ಕ್ಕೆ ಶರಣ ಸಾಹಿತ್ಯದ ಚಿಂತನಾ ಗೋಷ್ಠಿ, ಮಧ್ಯಾಹ್ನ 1ಗಂಟೆಗೆ ಕವಿಗೋಷ್ಠಿ, 3.30ಕ್ಕೆ ದಾಸ ಸಾಹಿತ್ಯ ಗೋಷ್ಠಿ ಹಾಗೂ ಸಂಜೆ ಬಹಿರಂಗಸಭೆ ಹಾಗೂ ಸಮಾರೋಪ ಸಮಾರಂಭ, ಬಳಿಕ ಸಾಂಸ್ಕೃತಿಕ ಕಾರ್ಯಕ್ರಮ ಜರುಗಲಿದೆ ಎಂದು ತಿಳಿಸಿದರು.

ಟೋಲ್ ಫ್ರೀ:

ಹಿಟ್ಟಿನಹಳ್ಳಿಯಲ್ಲಿ ನಡೆಯಲಿರುವ ಸಾಹಿತ್ಯ ಜಾತ್ರೆಗೆ ವಿಜಯಪುರದಿಂದ ಬರುವ ಸಾಹಿತ್ಯಾಭಿಮಾನಿಗಳಿಗೆ ಟೋಲ್ ನಾಕಾದಲ್ಲಿ ವಾಹನಗಳಿಗೆ ಉಚಿತ ಪ್ರವೇಶ ಇರಲಿದೆ ಎಂದು ಹಾಸಿಂಪೀರ ವಾಲೀಕಾರ ಹೇಳಿದರು.

ಸ್ವಚ್ಛತೆ: ಸಮ್ಮೇಳನ ನಡೆಯಲಿರುವ ಹಿಟ್ಟಿನಹಳ್ಳಿ ಗ್ರಾಮದಲ್ಲಿ ಸೋಮವಾರ ಸ್ವಚ್ಛತಾ ಆಂದೋಲನ ಮಾಡಲಾಯಿತು.

‘ದೇವರಗೆಣ್ಣೂರಿನ ಸೋಮಲಿಂಗ’

ವಿಜಯಪುರ: ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾದ ಸೋಮಲಿಂಗ ಗೆಣ್ಣೂರ ಬಬಲೇಶ್ವರ ತಾಲ್ಲೂಕಿನ ದೇವರಗೆಣ್ಣೂರು ಗ್ರಾಮದವರು. ತಮ್ಮೂರಿನಲ್ಲೇ ಪ್ರಾಥಮಿಕ ಶಿಕ್ಷಣ ಕಂಬಾಗಿಯಲ್ಲಿ ಪ್ರೌಢ ಶಿಕ್ಷಣ ವಿಜಯಪುರದ ಪಿ.ಡಿ.ಜೆ ಕಾಲೇಜಿನಲ್ಲಿ ಪಿಯುಸಿ ಎಸ್.ಬಿ.ಆರ್ಟ್ಸ್ ಕಾಲೇಜಿನಲ್ಲಿ ಪದವಿ ವ್ಯಾಸಂಗ ಮಾಡಿದ್ದಾರೆ. ಜಮಖಂಡಿಯ ಸರ್ಕಾರಿ ಶಿಕ್ಷಣ ಕಾಲೇಜಿನಲ್ಲಿ ಬಿ.ಇಡಿ ಪದವಿಯನ್ನು ಮಾಡಿದ್ದಾರೆ. ಅಬಕಾರಿ ಇಲಾಖೆಯಲ್ಲಿ ಕೆಲವು ವರ್ಷ ಸೇವೆ ಸಲ್ಲಿಸಿ ನಂತರ ಕಲಬುರ್ಗಿ ಜೆಟಿಎಸ್ ಕಾಲೇಜಿನಲ್ಲಿ ಪೂರ್ಣಕಾಲಿಕ ಉಪನ್ಯಾಸಕರಾಗಿ ಸೇವೆ ಸಲ್ಲಿಸಿದ್ದಾರೆ. 1999ರಲ್ಲಿ ಕೆಎಎಸ್ ಪಾಸಾದ ಇವರು ಶಿರಹಟ್ಟಿ ಸವದತ್ತಿ ಮಾನ್ವಿ ಮುದ್ದೇಬಿಹಾಳ ತಹಶೀಲ್ದಾರ್ರಾಗಿ ಜನಾನುರಾಗಿಯಾಗಿದ್ದಾರೆ. 2013ರಲ್ಲಿ ಆಹಾರ ಇಲಾಖೆಯಲ್ಲಿ ಉಪ ನಿರ್ದೇಶಕರಾಗಿ 2014ರಲ್ಲಿ ವಿಶೇಷ ಭೂಸ್ವಾಧೀನಾಧಿಕಾರಿ ಆನಂತರ 2019ರಲ್ಲಿ ಚಿಕ್ಕೋಡಿ 2020ರಲ್ಲಿ ವಿಜಯಪುರ ಸಹಾಯಕ ಆಯುಕ್ತರಾಗಿ ಕಾರ್ಯನಿರ್ವಹಿಸಿದ್ದಾರೆ. 2021ರಲ್ಲಿ ಕೃಷ್ಣಾ ಮೇಲ್ದಂಡೆ ಯೋಜನೆಯ ವಿಶೇಷ ಜಿಲ್ಲಾಧಿಕಾರಿಯಾಗಿಯೂ ಸೇವೆ ಸಲ್ಲಿಸಿದ್ದಾರೆ. 2024ರಲ್ಲಿ ಬೆಳಗಾವಿ ಸ್ಮಾರ್ಟ್ ಸಿಟಿ ಎಂಡಿಯಾಗಿ ಗುಲ್ಬರ್ಗಾ ವಿವಿ ಕುಲಸಚಿವರಾಗಿ ವಿಜಯಪುರ ಹೆಚ್ಚುವರಿ ಜಿಲ್ಲಾಧಿಕಾರಿಯಾಗಿ ಕಾರ್ಯನಿರ್ವಹಿಸಿ ಸದ್ಯ ಬಾಗಲಕೋಟೆ ತೋಟಗಾರಿಕೆ ವಿವಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ. ‘ಸರ್ವಶ್ರೇಷ್ಠ ಭಾರತೀಯ’ ‘ಅಂಬೇಡ್ಕರ್ ಮಾರ್ಗ’ ‘ನಮ್ಮ ಸಂವಿಧಾನ ನಮ್ಮ ಹೆಮ್ಮೆ’ ಹಾಗೂ ‘ದೇವರ ಗೆಣ್ಣೂರ’ ಎಂಬ ಕೃತಿಗಳನ್ನು ರಚಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.