ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿಜಯಪುರದಲ್ಲಿ ರಾಜ್ಯೋತ್ಸವ ಸಂಭ್ರಮ

Last Updated 1 ನವೆಂಬರ್ 2021, 5:31 IST
ಅಕ್ಷರ ಗಾತ್ರ

ವಿಜಯಪುರ: ಜಿಲ್ಲಾಡಳಿತದಿಂದ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ ಆವರಣದಲ್ಲಿ ಏರ್ಪಡಿಸಿದ್ದ ಕರ್ನಾಟಕ ರಾಜ್ಯೋತ್ಸವದಲ್ಲಿ ಜಿಲ್ಲಾ ಉಸ್ತುವಾರಿ ಸಚಿವೆ ಶಶಿಕಲಾ ಜೊಲ್ಲೆ ರಾಷ್ಟ್ರ ಧ್ವಜಾರೋಹಣ ನೆರವೇರಿಸಿದರು.

ರಾಜ್ಯ ಸರ್ಕಾರ ಈ ಬಾರಿ ರಾಜ್ಯೋತ್ಸವದ ಅಂಗವಾಗಿ ಅ.28ರಂದು ರಾಜ್ಯದಾದ್ಯಂತ 'ಬಾರಿಸು ಕನ್ನಡ ಡಿಂಡಿಮವ...', 'ಜೋಗದ ಸಿರಿ ಬೆಳಕಿನಲ್ಲಿ..' , 'ಹುಟ್ಟಿದರೆ ಕನ್ನಡ ನಾಡಿನಲ್ಲಿ ಹುಟ್ಟಬೇಕು...' ಗೀತೆ ಸೇರಿದಂತೆ ಈ ಮೂರು ಕನ್ನಡ ಗೀತೆಗಳನ್ನು ಗಾಯನ ಮಾಡಲು ಆದ್ಯತೆ ನೀಡುವ ಮೂಲಕ ಎಲ್ಲೆಲ್ಲೂ ಕನ್ನಡ ಅನುರಣಿಸುವಂತೆ ಮಾಡಿರುವುದು ವಿಶೇಷ ಎಂದು ಹೇಳಿದರು.

ಕನ್ನಡ ನಾಡು, ನುಡಿಗೆ ಶ್ರಮಿಸಿದ ಮಹನೀಯರು, ಕರ್ನಾಟಕ ಏಕೀಕರಣದ ರೂವಾರಿಗಳನ್ನು ಸಚಿವೆ ಶಶಿಕಲಾ ಜೊಲ್ಲೆ ಸ್ಮರಿಸಿದರು.

ಸುಮಧುರವಾಗಿ ಹಾಡಿದ ಸಚಿವೆ:

'ಹಚ್ಚೇವು ಕನ್ನಡದ ದೀಪ
ಕರುನಾಡ ದೀಪ, ಸಿರಿ ನುಡಿಯ ದೀಪ, ಒಲವೆತ್ತಿ ತೋರುವ ದೀಪ' ಹಾಡನ್ನು ಸಚಿವೆ ಜೊಲ್ಲೆ ಸುಮಧುರವಾಗಿ ಹಾಡುವ ಮೂಲಕ ಗಮನ ಸೆಳೆದರು.

ರಾಜ್ಯೋತ್ಸವ ಪ್ರಶಸ್ತಿ ಪ್ರದಾನ:

ಶಿಕ್ಷಣ, ಸಾಹಿತ್ಯ, ನೃತ್ಯ, ಕ್ರೀಡೆ, ಪತ್ರಿಕೋದ್ಯಮ, ಸಮಾಜಸೇವೆ, ಜಾನಪದ, ಆರೋಗ್ಯ ಸೇರಿದಂತೆ
ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದ 20 ಸಾಧಕರಿಗೆ ವಿಜಯಪುರ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ನೀಡಿ ಸನ್ಮಾನಿಸಿದರು.

ಶಾಸಕರಾದ ಬಸನಗೌಡ ಪಾಟೀಲ ಯತ್ನಾಳ, ವಿಧಾನ ಪರಿಷತ್ ಸದಸ್ಯ ಅರುಣ ಶಹಾಪುರ, ವಿಜಯಪುರ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಶ್ರೀಹರಿ ಗೊಳಸಂಗಿ, ಜಿಲ್ಲಾಧಿಕಾರಿ ಪಿ.ಸುನೀಲ್ ಕುಮಾರ್, ಜಿಲ್ಲಾ ಪಂಚಾಯಿತಿ ಸಿಇಓ ಗೋವಿಂದ ರೆಡ್ಡಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಚ್.ಡಿ.ಆನಂದ ಕುಮಾರ್ ಇದ್ದರು.

ಬಿಗಿ ಭದ್ರತೆ:
ಕಳೆದ ಆಗಸ್ಟ್‌ 15ರಂದು ಧ್ವಜಾರೋಹಣ ಕಾರ್ಯಕ್ರಮದ ವೇಳೆ ಜಿಲ್ಲಾ ಉಸ್ತುವಾರಿ ಸಚಿವೆ ಶಶಿಕಲಾ ಜೊಲ್ಲೆ ವಿರುದ್ಧ ವಿವಿಧ ಸಂಘಟನೆಗಳ ಮುಖಂಡರು, ಕಾಂಗ್ರೆಸ್ ಕಾರ್ಯಕರ್ತರು ಮುತ್ತಿಗೆ ಹಾಕಿ, ಘೋಷಣೆ ಕೂಗಿದ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ರಾಜ್ಯೋತ್ಸವ ಕಾರ್ಯಕ್ರಮ ಆಯೋಜಿಸಿದ್ದ ಅಕ್ಕಮಹಾದೇವಿ ವಿವಿ ಆವರಣ ಮತ್ತು ವೇದಿಕೆಗೆ ಬಿಗಿ ಭದ್ರತೆ ಏರ್ಪಡಿಸಲಾಗಿತ್ತು. ಕಾರ್ಯಕ್ರಮಕ್ಕೆ ಬಂದಿದ್ದ ಪ್ರತಿಯೊಬ್ಬರನ್ನೂ ತೀವ್ರ ತಪಾಸಣೆಗೆ ಒಳಪಡಿಸಲಾಯಿತು.

ಗಮನ ಸೆಳೆದ ಕವಾಯತು: ಸಚಿವೆ ಜೊಲ್ಲೆ ಅವರು ಪರೇಡ್ ವೀಕ್ಷಣೆ ವೇಳೆ ಪೊಲೀಸ್ ಬ್ಯಾಂಡ್ ಸಿಬ್ಬಂದಿ 'ನಮ್ಮೂರ ಮಂದಾರ ಹೂವೆ ಹಾಡಿಗೆ ವಾದ್ಯ ನುಡಿಸಿದರು‌. ಬಳಿಕ ನಿರ್ಗಮನದ ವೇಳೆ ಹುಟ್ಟಿದರೆ ಕನ್ನಡ ನಾಡಲ್ಲಿ ಹುಟ್ಟಬೇಕು ಹಾಡಿಗೆ ವಾದ್ಯ ನುಡಿಸಿದರು.‌ ಅಲ್ಲದೇ, ಪಥಸಂಚನ ಅನುಮತಿ, ನಿರ್ಗಮನದ ವೇಳೆ ಸಿಬ್ಬಂದಿಗೆ ಕನ್ನಡದಲ್ಲಿ ಸೂಚನೆ, ನಿರ್ದೇಶನ ನೀಡಿರುವುದು ಮೆಚ್ಚುಗೆಗೆ ಪಾತ್ರವಾಯಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT