ವಿಜಯಪುರ: ಕಸಾಪ ನೂತನ ಪದಾಧಿಕಾರಿಗಳ ನೇಮಕ

ವಿಜಯಪುರ: ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್‌ಗೆ ನೂತನ ಪದಾಧಿಕಾರಿಗಳ ನೇಮಕ ಮಾಡಲಾಗಿದೆ ಎಂದು ಪರಿಷತ್ ಅಧ್ಯಕ್ಷ ಹಾಸಿಂಪೀರ ವಾಲಿಕಾರ ತಿಳಿಸಿದ್ದಾರೆ.
ಗೌರವ ಕಾರ್ಯದರ್ಶಿಯಾಗಿ ಪ್ರೊ.ಮಹಾದೇವ ರೆಬಿನಾಳ ಹಾಗೂ ಕೆ. ಸುನಂದಾ, ಗೌರವ ಕೋಶಾಧ್ಯಕ್ಷರಾದ ಸಂಗಮೇಶ ಮೇತ್ರಿ, ಮಹಿಳಾ ಸಾಹಿತಿಗಳಾಗಿ ವಿದ್ಯಾವತಿ ಅಂಕಲಗಿ ಹಾಗೂ ಇಂದುಮತಿ ಲಮಾಣಿ, ಪರಿಶಿಷ್ಟ ಜಾತಿ ಪ್ರತಿನಿಧಿಯಾಗಿ ಅಭಿಷೇಕ ಚಕ್ರವರ್ತಿ ಹಾಗೂ ಡಾ. ಸುಜಾತಾ ಚಲವಾದಿ, ಪರಿಶಿಷ್ಟ ಪಂಗಡದ ಪ್ರತಿನಿಧಿಯಾಗಿ ಡಿ.ಬಿ. ನಾಯಕ, ಸಂಘ-ಸಂಸ್ಥೆ ಪ್ರತಿನಿಧಿಯಾಗಿ ಸೈಯ್ಯದ್ (ದಿಲಾವರ) ಖಾಜಿ, ಜಿಲ್ಲಾ ವಾರ್ತಾ ಇಲಾಖೆ ಅಧಿಕಾರಿ ಸುಲೇಮಾನ್ ನದಾಫ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ನಾಗರಾಜ, ನಿಕಟಪೂರ್ವ ಕಸಾಪ ಅಧ್ಯಕ್ಷ ಮಲ್ಲಿಕಾರ್ಜುನ ಯಂಡಿಗೇರಿ ಅವರನ್ನು ನೇಮಕ ಮಾಡಲಾಗಿದೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.