ಭಾನುವಾರ, 14 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೌಶಲ ಅಭಿವೃದ್ಧಿ ನಿಗಮದ ಅಧ್ಯಕ್ಷೆಯಾದ ಕಾಂತಾ ನಾಯಕ

Published 29 ಫೆಬ್ರುವರಿ 2024, 15:35 IST
Last Updated 29 ಫೆಬ್ರುವರಿ 2024, 15:35 IST
ಅಕ್ಷರ ಗಾತ್ರ

ವಿಜಯಪುರ: ಕೌಶಲ ಅಭಿವೃದ್ಧಿ ನಿಗಮದ ಅಧ್ಯಕ್ಷರನ್ನಾಗಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಕಾಂತಾ ನಾಯಕ ಅವರನ್ನು ರಾಜ್ಯ ಸರ್ಕಾರ ನೇಮಕ ಮಾಡಿದೆ.

ಈ ಕುರಿತು ‘ಪ್ರಜಾವಾಣಿ’ ಪ್ರತಿಕ್ರಿಯಿಸಿದ ಅವರು, ‘ರಾಜಕೀಯವಾಗಿ ನನಗೆ ಅತ್ಯಂತ ಮಹತ್ವದ ಜವಾಬ್ದಾರಿ ಇದಾಗಿದೆ. ಸಾಮಾನ್ಯ ಕಾರ್ಯಕರ್ತರಿಗೂ ಉನ್ನತ ಸ್ಥಾನಮಾನವನ್ನು ಕಾಂಗ್ರೆಸ್‌ ನೀಡುತ್ತದೆ ಎಂಬುದಕ್ಕೆ ನಾನೇ ಸಾಕ್ಷಿ’ ಎಂದು ಹೇಳಿದರು.

‘ನಿಗಮದ ಬಗ್ಗೆ ಸಮಗ್ರವಾಗಿ ತಿಳಿದುಕೊಂಡು, ಯೋಜನೆಗಳನ್ನು ಜನರಿಗೆ ತಲುಪಿಸುವ ಕಾರ್ಯ ಮಾಡುತ್ತೇನೆ. ರಾಜ್ಯದಲ್ಲೇ ಮಾದರಿ ನಿಗಮವನ್ನಾಗಿ ಮಾಡಲು ಯತ್ನಿಸುತ್ತೇನೆ’ ಎಂದರು.

ಬಂಜಾರ ಸಮುದಾಯಕ್ಕೆ ಸೇರಿರುವ ಕಾಂತಾ ನಾಯಕ ಅವರು ಕಳೆದ ವರ್ಷ ನಡೆದ ವಿಧಾನಸಭೆ ಚುನಾವಣೆಯಲ್ಲಿ ನಾಗಠಾಣ ಮೀಸಲು ಕ್ಷೇತ್ರದ ಕಾಂಗ್ರೆಸ್‌ ಟಿಕೆಟ್‌ ಆಕಾಂಕ್ಷಿಯಾಗಿದ್ದರು. ಆದರೆ, ಟಿಕೆಟ್‌ ಅವರ ಕೈತಪ್ಪಿತ್ತು. ಇದೀಗ ಅವರು ವಿಜಯಪುರ ಮೀಸಲು ಲೋಕಸಭಾ ಕ್ಷೇತ್ರದ ಟಿಕೆಟ್‌ ಆಕಾಂಕ್ಷಿಯಾಗಿದ್ದರು. ಚುನಾವಣೆಗೆ ಅಗತ್ಯ ಸಿದ್ಧತೆಯಲ್ಲೂ ತೊಡಗಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT