ಮಂಗಳವಾರ, ಜೂನ್ 22, 2021
27 °C
ಬಬಲೇಶ್ವರ ಶಾಸಕ ಎಂ.ಬಿ.ಪಾಟೀಲ ಹೇಳಿಕೆ

ಕಾರಜೋಳ, ತಿಕೋಟಾ: ಕೋವಿಡ್ ಕೇರ್ ಸೆಂಟರ್ ಆರಂಭ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ವಿಜಯಪುರ: ಬಬಲೇಶ್ವರ ವಿಧಾನಸಭಾ ಕ್ಷೇತ್ರ್ರದಲ್ಲಿ ಕಾರಜೋಳ ಹಾಗೂ ತಿಕೋಟಾಗಳಲ್ಲಿ ಮೊದಲ ಹಂತದಲ್ಲಿ ಕೋವಿಡ್ ಕೇರ್ ಸೆಂಟರ್ ಆರಂಭಿಸಲಾಗುತ್ತಿದೆ ಎಂದು ಬಬಲೇಶ್ವರ ಶಾಸಕ ಎಂ.ಬಿ.ಪಾಟೀಲ ಹೇಳಿದರು.

ಬಬಲೇಶ್ವರ ತಹಶೀಲ್ದಾರ್‌ ಮಲ್ಲಿಕಾರ್ಜುನ ಅರಕೇರಿ ಹಾಗೂ ತಿಕೋಟಾ ತಹಶೀಲ್ದಾರ್ ಸಂತೋಷ ಮ್ಯಾಗೇರಿ ಹಾಗೂ ಪ್ರಾಥಮಿಕ ತಾಲ್ಲೂಕು ಆರೋಗ್ಯಾಧಿಕಾರಿ ಡಾ.ಕವಿತಾ ದೊಡಮನಿ ಅವರೊಂದಿಗೆ ಈ ಕುರಿತು ಚರ್ಚೆ ನಡೆಸಿದರು.

ಕಾರಜೋಳ ಗ್ರಾಮದ ಕಿತ್ತೂರರಾಣಿ ಚನ್ನಮ್ಮ ವಸತಿ ಶಾಲೆಯಲ್ಲಿ 90 ಹಾಸಿಗೆಗಳ ಕೇಂದ್ರವನ್ನು ಆರಂಭಿಸಲಾಗುತ್ತಿದ್ದು, ಅಗತ್ಯವಿದ್ದರೆ ಬೇರೆ ಸ್ಥಳಗಳಲ್ಲಿಯೂ ವಿಸ್ತರಿಸಲಾಗುವುದು ಎಂದು ಹೇಳಿದರು.

ತಿಕೋಟಾದ ಬಿ.ಸಿ.ಎಂ ವಸತಿ ನಿಲಯದಲ್ಲಿ ಕೋವಿಡ್ ಕೇರ್ ಸೆಂಟರ್ ಸ್ಥಾಪಿಸಲು ತಾಲ್ಲೂಕು ಆಡಳಿತದಿಂದ ಅಗತ್ಯ ಕ್ರಮ ಜರುಗಿಸಲಾಗುತ್ತಿದೆ ಎಂದರು.

ಗ್ರಾಮೀಣ ಪ್ರದೇಶದಲ್ಲಿ ಕೊರೊನಾ ಹಬ್ಬಿದ ಕುರಿತು ಜಿಲ್ಲಾಧಿಕಾರಿಗಳೊಂದಿಗೆ ಚರ್ಚೆ ನಡೆಸಿದ ನಂತರ ಎಲ್ಲ ಕಡೆ ಮನೆ,ಮನೆ ಸರ್ವೇ ಮಾಡಿ, ರೋಗ ಲಕ್ಷಣಗಳನ್ನು ಗುರುತಿಸುವ ಕಾರ್ಯ ಆರಂಭ ಮಾಡಿರುವುದು ಸ್ವಾಗತಾರ್ಹ. ಅಂತವರಿಗೆ ಪ್ರಾಥಮಿಕ ಚಿಕಿತ್ಸೆಗೆ ಈ ಕೋವಿಡ್ ಕೇರ್ ಸೆಂಟರ್‌ಗಳನ್ನು ಬಳಸಬಹುದು ಎಂದು ಹೇಳಿದರು.

ಸಾರ್ವಜನಿಕರು ಕೋವಿಡ್ ಕೇರ್ ಸೆಂಟರ್ ಸ್ಥಾಪಿಸಲು ಅಗತ್ಯ ಮೂಲ ಸೌಕರ್ಯಗಳನ್ನು ಸ್ಥಳ, ಸಮುದಾಯ ಭವನಗಳು, ಶಾಲೆಗಳು, ಗೋಡೌನ್‌, ವಿಶಾಲ ಕಟ್ಟಡಗಳನ್ನು ಸ್ವಯಂ ಪ್ರೇರಿತವಾಗಿ ನೀಡಲು ಮುಂದೆ ಬರಬೇಕು ಹಾಗೂ ಕೋವಿಡ್ ಕೇರ್ ಸೆಂಟರ್‌ಗಳಲ್ಲಿ ದಾಖಲಾದವರಿಗೆ ಎಲ್ಲ ರೀತಿಯ ನೆರವು ನೀಡಲು ದಾನಿಗಳು ಮುಂದಾಗಬೇಕು ಎಂದು ಮನವಿ ಮಾಡಿದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು