ವಿಜಯಪುರ: ‘ಪಂಚರಾಜ್ಯ ಚುನಾವಣೆ ನಂತರ ರಾಜ್ಯ ಸಚಿವ ಸಂಪುಟ ವಿಸ್ತರಣೆ ಆಗುವ ನಿರೀಕ್ಷೆ ಇದೆ’ ಎಂದು ವಿಧಾನ ಪರಿಷತ್ ಸರ್ಕಾರಿ ಮುಖ್ಯ ಸಚೇತಕ ಸಲೀಂ ಅಹಮದ್ ಹೇಳಿದರು.

‘ಸಚಿವ ಸಂಪುಟ ವಿಸ್ತರಣೆ ವೇಳೆ ಈಗಿರುವ ಶೇ 50ರಷ್ಟು ಸಚಿವರನ್ನು ಕೈಬಿಟ್ಟು, ಅವರಿಗೆ ಪಕ್ಷ ಸಂಘಟನೆ ಜವಾಬ್ದಾರಿ ವಹಿಸಲು ಹಾಗೂ ಶೇ 50ರಷ್ಟು ಹೊಸಬರನ್ನು ಸಚಿವ ಸಂಪುಟಕ್ಕೆ ಸೇರ್ಪಡೆ ಮಾಡಿಕೊಳ್ಳುವ ವಿಚಾರವನ್ನು ಪಕ್ಷದ ವರಿಷ್ಠರ ಗಮನಕ್ಕೆ ತರಲಾಗಿದೆ. ಹೈಕಮಾಂಡ್ ಕೂಡ ಈ ಬಗ್ಗೆ ಒಲವು ವ್ಯಕ್ತಪಡಿಸಿದೆ’ ಎಂದು ಭಾನುವಾರ ಸುದ್ದಿಗಾರರಿಗೆ ತಿಳಿಸಿದರು.

‘ಮುಖ್ಯಮಂತ್ರಿ ಬದಲಾವಣೆ ವಿಷಯದಲ್ಲಿ ನಾವ್ಯಾರೂ ಮಾತನಾಡದಂತೆ ಹೈಕಮಾಂಡ್ ಲಕ್ಷ್ಮಣ ರೇಖೆ ಹಾಕಿದೆ’ ಎಂದು ಹೇಳಿದರು.

‘2023ರಲ್ಲಿ ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರುವಲ್ಲಿ ಕಾರ್ಯಾಧ್ಯಕ್ಷನಾಗಿ ನನ್ನ ಪಾಲು ಇದೆ. ಅಂದು ನನ್ನ ಜೊತೆ ಕಾರ್ಯಾಧ್ಯಕ್ಷರಾಗಿದ್ದ ಈಶ್ವರ ಖಂಡ್ರೆ, ಸತೀಶ ಜಾರಕಿಹೊಳಿ ಅವರಿಗೆ ಈಗಾಗಲೇ ಸಚಿವರಾಗುವ ಅವಕಾಶ ಸಿಕ್ಕಿದೆ. ಮುಂದಿನ ಸಚಿವ ಸಂಪುಟ ವಿಸ್ತರಣೆಯಲ್ಲಿ ನನಗೂ ಅವಕಾಶ ಲಭಿಸುವ ವಿಶ್ವಾಸ ಇದೆ’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.