ಗುರುವಾರ , ಮಾರ್ಚ್ 30, 2023
32 °C

ರಾಜ್ಯಪಾಲ ಥಾವರಚಂದ್ ಗೆಹಲೋತ್ ವಿಜಯಪುರಕ್ಕೆ ಭೇಟಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ವಿಜಯಪುರ: ರಾಜ್ಯಪಾಲ ಥಾವರಚಂದ್ ಗೆಹಲೋತ್ ನವೆಂಬರ್ 8 ಮತ್ತು 9 ರಂದು ವಿಜಯಪುರ ನಗರ ಪ್ರವಾಸ ಕೈಗೊಂಡಿದ್ದಾರೆ.

ನ. 8 ರಂದು ಸಂಜೆ 4.45ಕ್ಕೆ ವಿಶ್ವ ವಿಖ್ಯಾತ ಗೋಳಗುಮ್ಮಟಕ್ಕೆ ಭೇಟಿ ನೀಡಿ, ವೀಕ್ಷಣೆ ಮಾಡುವರು. ಬಳಿಕ 4.55ಕ್ಕೆ ಬಾರಾಕಮಾನ್ ಗೆ ತೆರಳಿ, ವೀಕ್ಷಿಸಲಿದ್ದಾರೆ.

ಅಕ್ಕಮಹಾದೇವಿ ಮಹಿಳಾ ವಿವಿ ಅತಿಥಿ ಗೃಹದಲ್ಲಿ ವಾಸ್ತವ್ಯ ಮಾಡುವರು.

ನವೆಂಬರ್ 9ರಂದು ಬೆಳಗ್ಗೆ 10ಕ್ಕೆ ಅಕ್ಕಮಹಾದೇವಿ ಮಹಿಳಾ ವಿ.ವಿಯ ಆವರಣದಲ್ಲಿ ನಡೆಯುವ ಘಟಿಕೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸುವರು. ಮಧ್ಯಾಹ್ನ 3.25 ಕಲಬುರ್ಗಿ ವಿಮಾನ ನಿಲ್ದಾಣದ ಮೂಲಕ ಬೆಂಗಳೂರಿಗೆ ಪ್ರಯಾಣ ಬೆಳೆಸಲಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ‌.

ಪ್ರವೇಶ ನಿಷೇಧ: ರಾಜ್ಯಪಾಲರ ಭೇಟಿಯ ಹಿನ್ನೆಲೆಯಲ್ಲಿ ಗೋಳಗುಮ್ಮಟ ಬಾರಾಕಮಾನ್ ಗೆ ನ.8 ರಂದು ಬೆಳಿಗ್ಗೆ 10ರಿಂದ ಸಂಜೆ 6ರ ವರೆಗೆ ಸಾರ್ವಜನಿಕರಿಗೆ, ಪ್ರವಾಸಿಗರಿಗೆ ಪ್ರವೇಶ ನಿಷೇಧಿಸಲಾಗಿದೆ ಎಂದು ಭಾರತೀಯ ಸರ್ವೇಕ್ಷಣ ಇಲಾಖೆ(ಎಎಸ್ ಐ) ಪ್ರಕಟಣೆಯಲ್ಲಿ ತಿಳಿಸಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು