ತಾಳಿಕೋಟೆ ಪಟ್ಟಣಕ್ಕೆ ಸಂಪರ್ಕಿಸುವ ಮನಗೂಳಿ ಬಿಜ್ಜಳ ರಾಜ್ಯ ಹೆದ್ದಾರಿ 61ರ ಸರಪಳಿ 58.00 ಮತ್ತು 58.10 ಕಿ.ಮೀನಲ್ಲಿ ಸೇತುವೆ ಪುನರ್ ನಿರ್ಮಾಣಕ್ಕೆ ₹28 ಕೋಟಿ ಅಂದಾಜು ಮೊತ್ತದಲ್ಲಿ ಕರ್ನಾಟಕ ರಸ್ತೆ ಅಭಿವೃದ್ಧಿ ನಿಗಮ ವತಿಯಿಂದ ಕೈಗೆತ್ತಿಕೊಳ್ಳಲು ಆಡಳಿತಾತ್ಮಕ ಅನುಮೋದನೆ ನೀಡಲು ಸಚಿವ ಸಂಪುಟದಲ್ಲಿ ನಿರ್ಣಯ ಮಂಡನೆಯಾಗಿದ್ದು, ಶೀಘ್ರದಲ್ಲಿ ಕಾಮಗಾರಿ ಪ್ರಾರಂಭವಾಗಲಿದೆ ಎಂದು ಮುದ್ದೇಬಿಹಾಳ ಮತಕ್ಷೇತ್ರದ ಶಾಸಕ ಸಿ.ಎಸ್.ನಾಡಗೌಡ ಅಪ್ಪಾಜಿ ‘ಪ್ರಜಾವಾಣಿ’ಗೆ ತಿಳಿಸಿದರು.