ಸೋಮವಾರ, 20 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿಜಯಪುರದಲ್ಲಿ ಕರ್ನಾಟಕ ರಾಜ್ಯೋತ್ಸವ ಸಂಭ್ರಮ

Published 1 ನವೆಂಬರ್ 2023, 5:33 IST
Last Updated 1 ನವೆಂಬರ್ 2023, 5:33 IST
ಅಕ್ಷರ ಗಾತ್ರ

ವಿಜಯಪುರ: ಕರ್ನಾಟಕ ರಾಜ್ಯೋತ್ಸವ ಅಂಗವಾಗಿ ಜಿಲ್ಲಾಡಳಿತದಿಂದ ನಗರದ ಡಾ.ಬಿ.ಆರ್.ಅಂಬೇಡ್ಕರ್ ಕ್ರೀಡಾಂಗಣದಲ್ಲಿ ಬುಧವಾರ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲ ಸೌಲಭ್ಯ ಅಭಿವೃದ್ಧಿ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ.ಪಾಟೀಲ ಧ್ವಜಾರೋಹಣ ನೆರವೇರಿಸಿದರು.

ರಾಜ್ಯೋತ್ಸವ ಸಂದೇಶ ನೀಡಿದ ಸಚಿವರು, ರಾಜ್ಯಕ್ಕೆ ಕರ್ನಾಟಕ ಎಂದು ನಾಮಕರಣವಾದ ಶುಭ ಸಂದರ್ಭಕ್ಕೆ ಇದೀಗ ಸುವರ್ಣ ಮಹೋತ್ಸವ ವರ್ಷವಾಗಿದೆ. ಈ ಬಾರಿಯ ರಾಜ್ಯೋತ್ಸವ ಏಳು ಕೋಟಿ ಕನ್ನಡಿಗರ ಪಾಲಿಗೆ ಸಂಭ್ರಮದ ಪರ್ವವಾಗಿದೆ ಎಂದರು.

'ಹೆಸರಾಯಿತು ಕರ್ನಾಟಕ, ಉಸಿರಾಗಲಿ ಕನ್ನಡ' ಎಂಬ ಅಭಿಯಾನವನ್ನು ವರ್ಷಪೂರ್ತಿ ಆಚರಿಸಲು ಸರ್ಕಾರ ನಿರ್ಧರಿಸಿದೆ. ಯುವ ಜನತೆಯಲ್ಲಿ ಕನ್ನಡ ಕನ್ನಡಿಗ ಕರ್ನಾಟಕದ ಅರಿವು ಮೂಡಿಸುವ ಯೋಜನೆಗಳನ್ನು ಹಮ್ಮಿಕೊಳ್ಳಲಾಗಿದೆ ಎಂದರು.

ಗೌರವ, ಸನ್ಮಾನ:

ಜಿಲ್ಲೆಯ 20 ಜನ ಸಾಧಕರಿಗೆ ಜಿಲ್ಲಾ ಮಟ್ಟದ ರಾಜ್ಯೋತ್ಸವ ಗೌರವ ನೀಡಿ, ಸನ್ಮಾನಿಸಿದರು.

ಶಾಲಾ, ಕಾಲೇಜು ವಿದ್ಯಾರ್ಥಿಗಳು ನಾಡುನುಡಿ ಗೀತೆಗಳಿಗೆ ಆಕರ್ಷಕ ನೃತ್ಯ ಪ್ರದರ್ಶಿಸಿದರು.

ಪೊಲೀಸ್, ಅಗ್ನಿಶಾಮಕ ದಳ, ಎನ್ ಸಿಸಿ, ಎನ್ ಎಸ್ ಎಸ್ ಸ್ವಯಂ ಸೇವಕರು, ಸ್ಕೌಟ್ ಅಂಡ್ ಗೈಡ್ಸ್ , ಶಾಲಾ, ಕಾಲೇಜು ವಿದ್ಯಾರ್ಥಿಗಳು ಪಥಸಂಚಲನದಲ್ಲಿ ಪಾಲ್ಗೊಂಡಿದ್ದರು.

ಶಾಸಕ ಬಸನಗೌಡ ಪಾಟೀಲ ಯತ್ನಾಳ,ಜಿಲ್ಲಾಧಿಕಾರಿ ಟಿ.ಭೂಬಾಲನ್, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಾಹುಲ್ ಶಿಂಧೆ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಋಷಿಕೇಶ ಸೋನಾವಣೆ, ಹೆಚ್ಚುವರಿ ಜಿಲ್ಲಾಧಿಕಾರಿ ಮಹಾದೇವ ಮುರಗಿ, ಜಿಲ್ಲಾ ಮಟ್ಟದ ಅಧಿಕಾರಿಗಳು ಸೇರಿದಂತೆ ಸಾರ್ವಜನಿಕರು ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT