ವಿಜಯಪುರ: ತಾಲ್ಲೂಕಿನ ಜುಮನಾಳ ಸರ್ಕಾರಿ ಪ್ರೌಢಶಾಲೆ ವಿದ್ಯಾರ್ಥಿ ಅಮಿತ್ ಮಾದರ ಎಸ್ಸೆಸ್ಸೆಲ್ಸಿಪರೀಕ್ಷೆಯಲ್ಲಿ 625 ಅಂಕ ಗಳಿಸುವ ಮೂಲಕ ರಾಜ್ಯದ ಟಾಪರ್ಗಳ ಸಾಲಿನಲ್ಲಿ ಸ್ಥಾನ ಪಡೆದಿದ್ದಾರೆ.
ಅಮಿತ್ ಅವರ ತಂದೆ ಆನಂದ ನಿಧನರಾಗಿದ್ದು, ಕೂಲಿಕಾರರಾದ ತಾಯಿ ಮಾದೇವಿ ಕಡು ಬಡತನದಲ್ಲೇ ಮಗನನ್ನು ಕಷ್ಟಪಟ್ಟು ಓದಿಸುತ್ತಿದ್ದಾರೆ.
ಯೋಗ, ವಾಲಿಬಾಲ್ ಕ್ರಿಡೆಯಲ್ಲಿ ಮುಂಚೂಣಿಯಲ್ಲಿರುವ ಅಮಿತ್ಗೆ ಭವಿಷ್ಯದ ವಿದ್ಯಾಭ್ಯಾಸಕ್ಕೆ ದಾನಿಗಳ ನೆರವು ಅಗತ್ಯವಿದೆ ಎಂದು ತಾಯಿ ಮಾದೇವಿ ತಿಳಿಸಿದರು.
ಮಾದೇವಿ ಅವರಿಗೆ ಮೂವರು ಗಂಡು ಮಕ್ಕಳು. ಮೊದಲನೇ ಪುತ್ರ ಅಮೋಘ ಸಿದ್ದ ಬಿ.ಇಡಿ, ಎರಡನೇ ಪುತ್ರ ಅಭಿಲಾಷ್ ಪದವಿ ವ್ಯಾಸಂಗ ಮಾಡುತ್ತಿದ್ದಾರೆ. ಮೂವರು ಮಕ್ಕಳನ್ನು ಮಾದೇವಿ ಕೂಲಿ ಮಾಡಿ ವಿದ್ಯಾಭ್ಯಾಸ ಮಾಡಿಸುತ್ತಿದ್ದಾರೆ.