ವಿಜಯಪುರ: ಕೆಪಿಎಸ್ ಮ್ಯಾಗ್ನೆಟ್ ಯೋಜನೆಯ ಹೆಸರಿನಲ್ಲಿ ಜಿಲ್ಲೆಯ ಒಂದು ಸಾವಿರಕ್ಕೂ ಹೆಚ್ಚು ಸರ್ಕಾರಿ ಶಾಲೆಗಳನ್ನು ಮುಚ್ಚುವುದನ್ನು ವಿರೋಧಿಸಿ ಎಐಡಿಎಸ್ಒ ನೇತೃತ್ವದಲ್ಲಿ ನಗರದ ಡಾ.ಬಿ.ಆರ್. ಅಂಬೇಡ್ಕರ್ ಭವನದಲ್ಲಿ ಸೋಮವಾರ ಜಿಲ್ಲಾ ಮಟ್ಟದ ಪ್ರತಿಭಟನಾ ಸಮಾವೇಶ ನಡೆಯಿತು.

ಎಐಡಿಎಸ್ಒ ರಾಜ್ಯ ಕಚೇರಿ ಕಾರ್ಯದರ್ಶಿ ಮಹಾಂತೇಶ ಬೀಳೂರ ಮಾತನಾಡಿ, ರಾಜ್ಯ ಸರ್ಕಾರ ಕೆಪಿಎಸ್ ಮ್ಯಾಗ್ನೆಟ್ ಯೋಜನೆಯಡಿ ₹3,900 ಕೋಟಿ ಅನುದಾನದಲ್ಲಿ 800 ಶಾಲೆಗಳನ್ನು ಕರ್ನಾಟಕ ಪಬ್ಲಿಕ್ ಶಾಲೆಗಳನ್ನಾಗಿ ಮೇಲ್ದರ್ಜೆಗೇರಿಸುವ ಯೋಜನೆ ರೂಪಿಸಿದ್ದು, ಈ ಯೋಜನೆಯಿಂದ ಸುಮಾರು 40 ಸಾವಿರಕ್ಕೂ ಹೆಚ್ಚು ಸರ್ಕಾರಿ ಶಾಲೆಗಳು ಮುಚ್ಚಲಿವೆ, ಅದರಲ್ಲೂ ಗ್ರಾಮೀಣ ಭಾಗದ ನಮ್ಮೂರ ಶಾಲೆಗಳು ಮುಚ್ಚಲಿವೆ ಎಂದು ಆತಂಕ ವ್ಯಕ್ತಪಡಿಸಿದರು.

ಕೆಪಿಎಸ್ ಮ್ಯಾಗ್ನೆಟ್ ಯೋಜನೆಯು ಶಿಕ್ಷಣ ವಿರೋಧಿಯಾಗಿದ್ದು, ಗ್ರಾಮೀಣ ಭಾಗದಲ್ಲಿ ಓದುತ್ತಿರುವ ರೈತ, ಕಾರ್ಮಿಕರ ಬಡವರ ಮಕ್ಕಳು ಶಿಕ್ಷಣದಿಂದ ವಂಚಿತರಾಗುತ್ತಾರೆ. ಇದನ್ನು ವಿರೋಧಿಸಬೇಕು ಹಾಗೂ ಹಳ್ಳಿಹಳ್ಳಿಗಳಲ್ಲಿ ಶಾಲೆಗಳನ್ನು ಮುಚ್ಚಲು ಬರುವ ಸರ್ಕಾರಕ್ಕೆ ಪ್ರತಿರೋಧ ಒಡ್ಡಬೇಕು ಎಂದು ಹೇಳಿದರು.

ಸಾಹಿತಿ ಹ.ಮ. ಪೂಜಾರಿ ಮಾತನಾಡಿ, ಗ್ರಾಮೀಣ ಭಾಗದ ಶಾಲೆಗಳನ್ನು ಮುಚ್ಚುವುದನ್ನು ನಾವು ಖಂಡಿಸುತ್ತೇವೆ. ಎಲ್ಲೆಲ್ಲಿ ಶಾಲೆಗಳನ್ನು ಮುಚ್ಚುತ್ತಾರೆಯೋ ಅಲ್ಲಲ್ಲಿ ಜನ ಹೋರಾಟ ಮಾಡಬೇಕು ಎಂದು ಹೇಳಿದರು.

ಸರ್ಕಾರ ಸರ್ಕಾರಿ ಶಾಲೆಗಳನ್ನು ಬಲಪಡಿಸುವ ಬದಲು ಸಂಪೂರ್ಣವಾಗಿ ಸರ್ಕಾರಿ ಶಾಲೆಗಳನ್ನು ಮುಚ್ಚಿಹಾಕಲು ಹೊರಟಿದೆ. ಇದು ಬಡ ವಿದ್ಯಾರ್ಥಿಗಳಿಗೆ ಸರ್ಕಾರ ಮಾಡುವ ದ್ರೋಹವಾಗಿದೆ ಎಂದು ಹೇಳಿದರು.

ಪತ್ರಕರ್ತ ಅನಿಲ್ ಹೊಸಮನಿ ಮಾತನಾಡಿ, ಕನ್ನಡ ಶಾಲೆಗಳು ಪ್ರತಿಯೊಂದು ಗ್ರಾಮದಲ್ಲಿ ಇರಬೇಕು. ಈಗಾಗಲೇ ರಾಜ್ಯದಲ್ಲಿ 62 ಸಾವಿರ ಶಿಕ್ಷಕರ ಹುದ್ದೆ ಖಾಲಿ ಇದೆ, 7 ಸಾವಿರಕ್ಕೂ ಹೆಚ್ಚು ಏಕೋಪಧ್ಯಾಯ ಶಾಲೆಗಳಿವೆ. 23 ಸಾವಿರಕ್ಕೂ ಹೆಚ್ಚು ಸರ್ಕಾರಿ ಶಾಲೆ ಕಟ್ಟಡಗಳು ದುರಸ್ತಿಯಾಗಬೇಕಾಗಿದೆ. ಸರ್ಕಾರಿ ಶಾಲೆಗಳಿಗೆ ಮೂಲ ಸೌಕರ್ಯಗಳನ್ನು ಒದಗಿಸದೇ ಸರ್ಕಾರಿ ಶಾಲೆಗಳು ಸೊರಗುವಂತೆ ಮಾಡಿ, ಸರ್ಕಾರ ಹಿಂಭಾಗಲಿನಿಂದ ಸರ್ಕಾರಿ ಶಾಲೆಗಳನ್ನು ಮುಚ್ಚುತ್ತಿದೆ ಎಂದು ಹೇಳಿದರು.

ರೈತ ಮುಖಂಡ ಅರವಿಂದ ಕುಲಕರ್ಣಿ ಮಾತನಾಡಿ, ಸರ್ಕಾರಿ ಶಾಲೆಗಳನ್ನು ಮುಚ್ಚಿ ಕೆ.ಪಿ.ಎಸ್. ಮ್ಯಾಗ್ನೆಟ್ ಶಾಲೆಗಳಿಗೆ ಬಸ್ ಬಿಡುತ್ತೇವೆ ಎಂದು ಹೇಳುತ್ತಿರುವುದು ಸರ್ಕಾರದ ಬೂಟಾಟಿಕೆ ಎಂದರು.

ಎಐಯುಟಿಯುಸಿ ಕಾರ್ಮಿಕ ಸಂಘಟನೆ ಜಿಲ್ಲಾ ಘಟಕದ ಅಧ್ಯಕ್ಷ ಮಲ್ಲಿಕಾರ್ಜುನ ಎಚ್.ಟಿ, ಎಐಎಂಎಸ್ಎಸ್ ಮಹಿಳಾ ಸಂಘಟನೆ ಜಿಲ್ಲಾ ಕಾರ್ಯದರ್ಶಿ ಶಿವಬಾಳಮ್ಮ ಕೊಂಡಗೂಳಿ, ಎಐಡಿವೈಒ ಯುವಜನ ಸಂಘಟನೆಯ ಜಿಲ್ಲಾ ಕಾರ್ಯದರ್ಶಿ ಸಿದ್ರಾಮಯ್ಯ ಹಿರೇಮಠ, ಎಐಡಿಎಸ್ಒ ರಾಜ್ಯ ಖಜಾಂಚಿ ಸುಭಾಷ ಬೆಟ್ಟದಕೊಪ್ಪ, ಪದಾಧಿಕಾರಿಗಳಾದ ಹಯ್ಯಾಳಪ್ಪ, ಪೂಜಾ, ಶಶಿಕಲಾ ಹಾಗೂ ಯುವಜನ ಸಂಘಟನೆಯ ಮುಖಂಡರಾದ ಸಿದ್ಧಲಿಂಗ ಬಾಗೇವಾಡಿ, ಕಾವೇರಿ ರಜಪೂತ ಇದ್ದರು.

ಕೆಪಿಎಸ್ ಮ್ಯಾಗ್ನೆಟ್ ಯೋಜನೆ ವಿರೋಧಿಸಿ ಏಪ್ರಿಲ್ 8ರಂದು ಬೆಂಗಳೂರಿನಲ್ಲಿ ನಡೆಯುವ ರಾಜ್ಯ ಮಟ್ಟದ ಹೋರಾಟವನ್ನು ಯಶಸ್ವಿಗೊಳಿಸಬೇಕು
ಮಹಾಂತೇಶ ಬೀಳೂರ ರಾಜ್ಯ ಕಾರ್ಯದರ್ಶಿ ಎಐಡಿಎಸ್ಒ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.