‘ತೆಲಂಗಾಣಕ್ಕೆ ನೀರು ಬಿಡಲು ಅನುಮತಿ: ಡಿ.ಕೆ. ಶಿವಕುಮಾರ್
‘ನಾರಾಯಣಪುರ ಅಣೆಕಟ್ಟಿನಿಂದ ತೆಲಂಗಾಣಕ್ಕೆ 1 ಟಿಎಂಸಿ ಅಡಿ ನೀರು ಬಿಡಲಾಗಿದೆ. ಈ ವಿಚಾರದಲ್ಲಿ ಮುಚ್ಚುಮರೆ ಇಲ್ಲ’ ಎಂದು ಡಿ.ಕೆ. ಶಿವಕುಮಾರ್ ತಿಳಿಸಿದರು. ‘ಮಹಾರಾಷ್ಟ್ರ, ತೆಲಂಗಾಣ ಸೇರಿದಂತೆ ನೆರೆ ರಾಜ್ಯಗಳ ಜತೆ ಪರಸ್ಪರ ಸಹಕಾರದ ಮಾದರಿಯನ್ನು ಅನುಸರಿಸಿಕೊಂಡು ಬರಲಾಗಿದೆ. ಆ ರಾಜ್ಯದವರು ಕೂಡ ಕೆಲವು ಸಂದರ್ಭದಲ್ಲಿ ನಮಗೆ ಸಹಾಯ ಮಾಡಿದ್ದಾರೆ. ತೆಲಂಗಾಣ ಸಚಿವರು ತಾವೇ ಬಂದು ನೀರು ಬಿಡುವಂತೆ ಮನವಿ ಮಾಡಿದ್ದರು. ನೀರು ಹರಿಸಲು ಅಧಿಕಾರಿಗಳಿಗೆ ನಾನು ಅನುಮತಿ ನೀಡಿದ್ದೇನೆ’ ಎಂದರು.