ಕುಳಗೇರಿ ಕ್ರಾಸ್: ಶಾಸಕ ಭೀಮಸೇನ ಚಿಮ್ಮನಕಟ್ಟಿ ಅವರಿಗೆ ಸಚಿವ ಸ್ಥಾನ ನೀಡುವಂತೆ ಕುಳಗೇರಿ ಭಾಗದ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರು ಒತ್ತಾಯಿಸಿದರು.

ಗ್ರಾಮದ ಪ್ರವಾಸಿ ಮಂದಿರದಲ್ಲಿ ಬುಧವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಕೆಪಿಎಸ್ ನಿರ್ದೇಶಕ ಶಿವಾನಂದ ಚೋಳನ್ನವರ ಮಾತನಾಡಿ, ‘ಚಿಮ್ಮನಕಟ್ಟಿ ಅವರ ಕುಟುಂಬವು 1984ರಿಂದ ಇಂದಿನವರೆಗೆ ಕಾಂಗ್ರೆಸ್ ಪಕ್ಷದ ಕಟ್ಟಾಳಾಗಿ ದುಡಿದಿದೆ. ಸಂಪುಟದ ಎರಡನೇ ಪಟ್ಟಿಯಲ್ಲಾದರೂ ಸಚಿವ ಸ್ಥಾನ ನೀಡಿದರೆ ಸಮುದಾಯದ ಹಾಗೂ ಉತ್ತರ ಕರ್ನಾಟಕದ ಯುವ ಶಾಸಕರಿಗೆ ಪ್ರಾತಿನಿಧ್ಯ ನೀಡಿದಂತಾಗುತ್ತದೆ’ ಎಂದು ಅಭಿಪ್ರಾಯಪಟ್ಟರು.

ವಿಜಯಪುರ –ಬಾಗಲಕೋಟೆ ಹಾಲು ಒಕ್ಕೂಟದ ಮಾಜಿ ಅಧ್ಯಕ್ಷ ಈರನಗೌಡ ಕರಿಗೌಡ್ರ, ಮುಖಂಡ ಶ್ರೀಕಾಂತಗೌಡ ಗೌಡರ ಮಾತನಾಡಿದರು. ವಿಜಯಪುರ –ಬಾಗಲಕೋಟೆ ಹಾಲು ಒಕ್ಕೂಟದ ನಿರ್ದೆಶಕ ಸಿದ್ದು ಕೋಲಾರ, ಹನುಮಂತ ನರಗುಂದ, ವೆಂಕಣ್ಣ ಹೊರಕೇರಿ, ಪುಂಡಲೀಕ ಪಾಟೀಲ, ಶಿವುಪುತ್ರಪ್ಪ ತಿಮ್ಮನಗೌಡ್ರ, ಅಬ್ದುಲ್ ನಾದಫ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260604-19-415538686

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.