ಸಿಂದಗಿ: ‘ಪ್ರಭುತ್ವವನ್ನು ವಿರೋಧಿಸಿ ದಿಟ್ಟ ನಿಲುವು ಪ್ರಕಟಿಸಿದ ಕುವೆಂಪು ಅವರ ವೈಚಾರಿಕತೆ, ಸಮಸಮಾಜ ನಿರ್ಮಾಣದ ಆಲೋಚನಾ ಕ್ರಮ. ವಿಶ್ವಮಾನವ ಆಶಯ ಎಂದಿಗೂ ಪ್ರಸ್ತುತ’ ಎಂದು ಕರ್ನಾಟಕ ಸರ್ಕಾರದ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಕುವೆಂಪು ಭಾಷಾ ಭಾರತಿ ಪ್ರಾಧಿಕಾರದ ಅಧ್ಯಕ್ಷ ಚನ್ನಪ್ಪ ಕಟ್ಟಿ ಹೇಳಿದರು.

ಪಟ್ಟಣದ ಜಿ.ಪಿ.ಪೋರವಾಲ ಕಲಾ, ವಾಣಿಜ್ಯ ಹಾಗೂ ವಿ.ವಿ.ಸಾಲಿಮಠ ವಿಜ್ಞಾನ ಮಹಾವಿದ್ಯಾಲಯದ ಸಭಾ ಭವನದಲ್ಲಿ ಸೋಮವಾರ ಕುವೆಂಪು ಭಾಷಾ ಭಾರತಿ ಪ್ರಾಧಿಕಾರದ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ‘ಕುವೆಂಪು ಓದು: ಕಮ್ಮಟ’ದ ಉದ್ಘಾಟನಾ ಸಮಾರಂಭದಲ್ಲಿ ಅವರು ಮಾತನಾಡಿದರು.

‘ಓದುಗನಿಲ್ಲದೆ ಸಾಹಿತ್ಯ ಅನಾಥ. ಅಕ್ಷರ ರೂಪದಲ್ಲಿ ಉಳಿಯದೇ ಜ್ಞಾನದ ರೂಪದಲ್ಲಿ ಓದಿಸುತ್ತದೆ’ ಎಂದರು.

ಕುವೆಂಪು ಭಾಷಾ ಭಾರತಿ ಪ್ರಾಧಿಕಾರದ ಸದಸ್ಯ ಸಂಚಾಲಕ ಎಸ್.ಗಂಗಾಧರಯ್ಯ ಮಾತನಾಡಿ, ‘ಕುವೆಂಪು ಬೀದಿಗಿಳಿದು ಹೋರಾಟ ಮಾಡಲಿಲ್ಲ. ಅವರ ಆಲೋಚನಾಧಾರೆಗಳ ಮೂಲಕ ವೈಚಾರಿಕ ನೆಲೆಗಟ್ಟಿನಲ್ಲಿ ಜಡ್ಡು ಕಿತ್ತು ಹಾಕುವ ಕಾರ್ಯ ಮಾಡಿದ್ದಾರೆ. ಕುವೆಂಪು ಅವರ ಮಲೆಗಳಲ್ಲಿ ಮದುಮಗಳು ಕೃತಿಯನ್ನು ಸಮರ್ಥವಾಗಿ ಇಂಗ್ಲಿಷಿನಲ್ಲಿ ಅನುವಾದಗೊಂಡಿದ್ದರೆ ಎಂದೋ ಬೂಕರ್, ನೊಬೆಲ್ ಪ್ರಶಸ್ತಿ ಪಡೆಯಬಹುದಾಗಿತ್ತು’ ಎಂದರು.

‘ರೈತನನ್ನು ಯೋಗಿಗೆ ಹೋಲಿಸಿದ ಏಕಮೇವ ಕವಿ ಕುವೆಂಪು. ಅವರು ರಚಿಸಿದ ನಾಡಗೀತೆ ಮಾನವೀಯತೆ ಪರವಾದುದು. ಸರ್ವ ಜನಾಂಗದ ಶಾಂತಿಯ ತೋಟ ಎಂಬುದು ಅವರ ಆಲೋಚನೆಯಾಗಿತ್ತು’ ಎಂದರು.

ಸಮಾರಂಭದ ಸಾನ್ನಿಧ್ಯ ವಹಿಸಿದ್ದ ಸಾರಂಗಮಠ– ಗಚ್ಚಿನಮಠದ ಉತ್ತರಾಧಿಕಾರಿ ವಿಶ್ವಪ್ರಭುದೇವ ಶಿವಾಚಾರ್ಯ ಸ್ವಾಮೀಜಿ, ‘ಕುವೆಂಪು ಅವರ ವ್ಯಕ್ತಿತ್ವ, ಸಾಹಿತ್ಯ, ಬದುಕು– ಬರಹ ಕುರಿತು ವಿದ್ಯಾರ್ಥಿಗಳು ಅಧ್ಯಯನ ಮಾಡಬೇಕು’ ಎಂದರು.

ಪದ್ಮರಾಜ ವಿದ್ಯಾವರ್ಧಕ ಸಂಸ್ಥೆಯ ಅಧ್ಯಕ್ಷ ಪ್ರಭು ಸಾರಂಗದೇವ ಶಿವಾಚಾರ್ಯ ಸ್ವಾಮೀಜಿ ಸಾನ್ನಿಧ್ಯ ವಹಿಸಿ, ‘ಕುವೆಂಪು ಮಾನವೀಯ ಮೌಲ್ಯಗಳನ್ನು ಸಾಹಿತ್ಯದ ರಚನೆಯಲ್ಲಿ ಬೆರೆಸಿ ಮಾನವೀಯತೆಯ ಸಾಕಾರ ಮೂರ್ತಿಯಾದರು. ಕುವೆಂಪು ಭಾಷಾ ಭಾರತಿ ಪ್ರಾಧಿಕಾರದ ಕಾರ್ಯವ್ಯಾಪ್ತಿ ದಕ್ಷಿಣ ಕನ್ನಡದಿಂದ ಉತ್ತರಕರ್ನಾಟಕಕ್ಕೆ ಬಂದಿರುವುದು ಸ್ವಾಗತಾರ್ಹ’ ಎಂದರು.

ಬೆಂಗಳೂರಿನ ವಿಮರ್ಶಕ ಸುಭಾಸ ರಾಜಮಾನೆ ಎರಡು ದಿನಗಳ ಕಮ್ಮಟದ ವಿವರ ತಿಳಿಸಿ ಕುವೆಂಪು ಓದು ವೈಚಾರಿಕ ಪ್ರಜ್ಞೆ ಬೆಳೆಸುವುದಾಗಿದೆ. ಓದುವ ಖುಷಿ ಶಾಶ್ವತ ಆನಂದ ತರಿಸುತ್ತದೆ ಎಂದು ಶಿಬಿರಾರ್ಥಿಗಳನ್ನು ಕುರಿತು ಮಾತನಾಡಿದರು.

ಕನ್ನಡ ವಿಭಾಗದ ಮುಖ್ಯಸ್ಥ ಎಸ್.ಐ.ಭಂಡಾರಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಸಂಸ್ಥೆಯ ಆಡಳಿತಾಧಿಕಾರಿ ಬಿ.ಜಿ.ಮಠ ಅತಿಥಿಯಾಗಿದ್ದರು. ಪ್ರಾಚಾರ್ಯ ಡಿ.ಎಂ.ಪಾಟೀಲ ಅಧ್ಯಕ್ಷತೆ ವಹಿಸಿದ್ದರು.

ವಿದ್ಯಾರ್ಥಿಗಳು ಪರೀಕ್ಷೆ ದೃಷ್ಠಿಯಿಂದ ಕೇವಲ ನೋಟ್ಸ್ ಓದುತ್ತಿದ್ದಾರೆ. ಓದು ಇಲ್ಲದ ಜೀವನ ವ್ಯರ್ಥ. ಮಕ್ಕಳು ಸಾಹಿತ್ಯ ಓದುವ ಹವ್ಯಾಸ ಬೆಳೆಸಿಕೊಳ್ಳಬೇಕು.
–ಪ್ರಭು ಸಾರಂಗದೇವ ಶಿವಾಚಾರ್ಯ ಸ್ವಾಮೀಜಿ, ಪದ್ಮರಾಜ ವಿದ್ಯಾವರ್ಧಕ ಸಂಸ್ಥೆ ಅಧ್ಯಕ್ಷ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.