ಗುರುವಾರ, 30 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಆಲಮಟ್ಟಿ | ಭೂಸ್ವಾಧೀನ ಪ್ರಕರಣ: ನೋಡಲ್ ಅಧಿಕಾರಿ ನೇಮಕ

Published 28 ಏಪ್ರಿಲ್ 2024, 15:43 IST
Last Updated 28 ಏಪ್ರಿಲ್ 2024, 15:43 IST
ಅಕ್ಷರ ಗಾತ್ರ

ಆಲಮಟ್ಟಿ: ಕೃಷ್ಣಾ ಮೇಲ್ದಂಡೆ ಯೋಜನೆಯ ಮೂರನೇ ಹಂತದ‌ ಕಾಮಗಾರಿ ಅನುಷ್ಠಾನದ ಭೂಸ್ವಾಧೀನ ಪ್ರಕರಣಗಳ ನೋಡಲ್ ಅಧಿಕಾರಿಯನ್ನಾಗಿ ಇಲ್ಲಿಯ ಕೆಬಿಜೆಎನ್‌ಎಲ್ ವ್ಯವಸ್ಥಾಪಕ ನಿರ್ದೇಶಕ ಕಚೇರಿಯ ಉಪ ಮುಖ್ಯ ಎಂಜಿನಿಯರ್ ಡಾ ಸುಧೀರ ಸಜ್ಜನ ಅವರನ್ನು ನೇಮಿಸಿದೆ.

ಯುಕೆಪಿ ಮೂರನೇ ಹಂತದ ಅನುಷ್ಠಾನಕ್ಕೆ ಸ್ವಾಧೀನ ಪಡಿಸಿಕೊಂಡ ಭೂಮಿಯ ವಿವಿಧ ಪ್ರಕರಣಗಳು ಜಿಲ್ಲಾ ಮಟ್ಟದ ನ್ಯಾಯಾಲಯಗಳಲ್ಲಿ ಬಾಕಿ ಉಳಿದಿದ್ದು ಇವುಗಳ ತ್ವರಿತ ವಿಲೇವಾರಿ ಹಾಗೂ ಜಿಲ್ಲಾ ಮಟ್ಟದ ವಿವಿಧ ನ್ಯಾಯಾಲಯಗಳಲ್ಲಿರುವ ಭೂಸ್ವಾಧೀನ ಪ್ರಕರಣಗಳ ಸಮರ್ಪಕ ನಿರ್ವಹಣೆ ಮಾಡುವ ಸಲುವಾಗಿ ನೋಡಲ್ ಅಧಿಕಾರಿಯನ್ನಾಗಿ ನೇಮಿಸಿ ಕೆಬಿಜೆಎನ್‌ಎಲ್ ವ್ಯವಸ್ಥಾಪಕ ನಿರ್ದೇಶಕ ಕೆ.ಪಿ. ಮೋಹನ್ ರಾಜ್ ಆದೇಶಿಸಿದ್ದಾರೆ.

ನ್ಯಾಯಾಲದಲ್ಲಿರುವ ಭೂ ಸ್ವಾಧೀನ ಪ್ರಕರಣಗಳಲ್ಲಿ ಕೃಷ್ಣಾ ಭಾಗ್ಯ ಜಲನಿಗಮವನ್ನು ಪ್ರತಿವಾದಿನ್ನಾಗಿಸುವುದು ಒಳಗೊಂಡಂತೆ ನ್ಯಾಯಾಲಯದಲ್ಲಿರುವ ಪ್ರಕರಣಗಳ ಸ್ಥಿತಿಗತಿಯ ವರದಿಯನ್ನು ಕೃಷ್ಣಾ ಭಾಗ್ಯ ಜಲನಿಗಮದ ವ್ಯವಸ್ಥಾಪಕ ನಿರ್ದೇಶಕರಿಗೆ ಪ್ರಕರಣಗಳ ಪ್ರಗತಿಯ ವರದಿ ನೀಡುವ ಹೊಣೆಗಾರಿಕೆಯನ್ನು ನೋಡಲ್ ಅಧಿಕಾರಿ ಸುಧೀರ ಸಜ್ಜನ ಅವರಿಗೆ ವಹಿಸಿಕೊಡಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT