ಸಿಂದಗಿ: ‘ಕ್ರೀಡೆಯಿಂದ ಶಾಲಾ ಮಕ್ಕಳಲ್ಲಿ ನಾಯಕತ್ವ ಗುಣ ಬೆಳೆಯುತ್ತದೆ. ವಿದ್ಯಾರ್ಥಿಗಳು ಸೋಲು– ಗೆಲುವನ್ನು ಸಮನಾಗಿ ಸ್ವೀಕರಿಸಬೇಕು’ ಎಂದು ಬೆಳಗಾವಿ ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ದೈಹಿಕ ಶಿಕ್ಷಣ ಪ್ರಾಧ್ಯಾಪಕರ ಸಂಘದ ಅಧ್ಯಕ್ಷ ಪ್ರೊ.ರವಿ ಗೋಲಾ ಹೇಳಿದರು.

ಇಲ್ಲಿಯ ಹೊರವಲಯದ ಜೇವರ್ಗಿ ರಾಷ್ಟ್ರೀಯ ಹೆದ್ದಾರಿಯಲ್ಲಿನ ಭೀಮಾ ಯುನಿವರ್ಸಲ್ ಸೆಂಟ್ರಲ್ ಸ್ಕೂಲ್ನಲ್ಲಿ ಶನಿವಾರ ಪ್ರಾರಂಭಗೊಂಡ ಕ್ರೀಡೋತ್ಸವವನ್ನು ಉದ್ಘಾಟಿಸಿ ಮಾತನಾಡಿದರು.

‘ಶಾಲಾ, ಕಾಲೇಜುಗಳಲ್ಲಿ ವಿದ್ಯಾರ್ಥಿಗಳ ಕ್ರೀಡಾಸಕ್ತಿಗೆ ಹೆಚ್ಚಿನ ಪ್ರೋತ್ಸಾಹ ಸಿಗಬೇಕು. ಭವಿಷ್ಯದಲ್ಲಿ ಅವರು ರಾಷ್ಟ್ರ, ಅಂತರರಾಷ್ಟ್ರೀಯ ಮತ್ತು ಓಲಂಪಿಕ್ ಕ್ರೀಡೆಯಲ್ಲಿ ಭಾಗವಹಿಸುವ ಸಾಧ್ಯತೆ ಇದೆ’ ಎಂದರು.

ಅಧ್ಯಕ್ಷತೆ ವಹಿಸಿದ್ದ ಪ್ರಾಚಾರ್ಯೆ ಶಾಹಿಮೋಲ್ ಶೇಖ್ ಮಾತನಾಡಿ, ‘ಕ್ರೀಡಾ ಚಟುವಟಿಕೆ ಮೂಲಕ ಮಕ್ಕಳಲ್ಲಿ ಸ್ನೇಹ ಸಂಬಂಧ ವೃದ್ಧಿಸುತ್ತದೆ. ಶಿಸ್ತು ಬೆಳೆಯುತ್ತದೆ’ ಎಂದರು.

ಶಾಲೆಯ ನಿರ್ದೇಶಕ ದತ್ತು ಮಾವೂರ, ದೈಹಿಕ ಶಿಕ್ಷಣ ನಿರ್ದೇಶಕ ಚನ್ನೂ ಪಡಶೆಟ್ಟಿ, ಸ್ಪೋರ್ಟ್ಸ್ ಕ್ಲಬ್ ಕಾರ್ಯದರ್ಶಿ ಶ್ರೀನಿವಾಸ ಹಾಜರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.