ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿಜಯಪುರ | ಮತ್ತೆ ಚಿರತೆ ಪತ್ಯಕ್ಷ; ಆತಂಕದಲ್ಲಿ ಜನ

Last Updated 6 ಜುಲೈ 2020, 8:35 IST
ಅಕ್ಷರ ಗಾತ್ರ

ವಿಜಯಪುರ: ಇತ್ತೀಚೆಗಷ್ಟೆ ಬಬಲೇಶ್ವರ ತಾಲ್ಲೂಕಿನ ಜೈನಾಪುರ ಗ್ರಾಮದಲ್ಲಿ ಆತಂಕ ಸೃಷ್ಟಿಸಿದ್ದ ಚಿರತೆಯನ್ನುಅರಣ್ಯ ಇಲಾಖೆ ಸಿಬ್ಬಂದಿ ಸೆರೆ ಹಿಡಿದು, ಕಾಡಿಗೆ ಬಿಡುವ ಮೂಲಕ ಆತಂಕ ನಿವಾರಣೆ ಮಾಡಿರುವ ಘಟನೆ ಜನಮಾನಸದಿಂದ ಮರೆಯಾಗುವ ಮುನ್ನವೇ ಇದೀಗ ಮತ್ತೆ ತಾಲ್ಲೂಕಿನ ಶಿರಬೂರ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷವಾಗಿದೆ.

ಗ್ರಾಮದ ರೈತ ರಾಮನಗೌಡ ಪಾಟೀಲ ಅವರ ತೋಟದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಜೆಸಿಬಿ ಡ್ರೈವರ್ ಉಮೇಶ ಅರವತ್ತು ತಡರಾತ್ರಿ ನದಿ ತೀರದಲ್ಲಿ ಚಿರತೆ ಓಡಾಟದ ದೃಶ್ಯ ಕ್ಯಾಮರಾದಲ್ಲಿ ಸೆರೆಹಿಡಿದಿರುವುದನ್ನು ಕಂಡು ಜನರು ಬೆಚ್ಚಿ ಬಿದ್ದಿದ್ದಾರೆ. ಸುತ್ತ-ಮುತ್ತಲಿನ ದೇವರ ಗೆಣ್ಣೂರು, ಬಬಲಾದಿ, ಗುಣದಾಳ ಸೇರಿದಂತೆ ಹಲವು ಗ್ರಾಮಗಳಲ್ಲಿ ಆತಂಕ ಶುರುವಾಗಿದೆ.

ಕೆಲ ದಿನಗಳ ಹಿಂದಷ್ಟೇ ದನ, ಜಾನುವಾರಗಳ ಬೇಟೆಯಾಡುತ್ತಿದ್ದ ಚಿರತೆ ಹಾವಳಿ ಇಟ್ಟಿತ್ತು. ಆಗ ಕೊನೆಗೂ ಅರಣ್ಯಾಧಿಕಾರಿಗಳು ಚಿರತೆ ಸೆರೆ ಹಿಡಿದು ಅದನ್ನು ಕಾಡಲ್ಲಿ ಬಿಟ್ಟಿದ್ದರು. ಅದರ ಬೆನ್ನಲ್ಲೆ ಮತ್ತೊಂದು ಚಿರತೆ ಪ್ರತ್ಯಕ್ಷವಾಗಿದೆ. ಈ ಚಿರತೆಯಿಂದ ಹಾನಿಗೊಳಗಾಗುವ ಮುನ್ನವೇ ಸೆರೆ ಹಿಡಿಯುವಂತೆ ಗ್ರಾಮದ ಮುಖಂಡರು ಆಗ್ರಹಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT