ವಿಜಯಪುರ: ‘ಪತ್ರಕರ್ತರು ಕೇವಲ ಸಮಸ್ಯೆಗಳನ್ನೇ ವರದಿ ಮಾಡಬಾರದು, ಅದಕ್ಕೆ ಪರಿಹಾರಗಳನ್ನು ಹುಡುಕುವುದೂ ಅವರ ಜವಾಬ್ದಾರಿಯಾಗಿದೆ’ ಎಂದು ಮೈಸೂರು ವಿವಿಯ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದ ಮುಖ್ಯಸ್ಥೆ ಪ್ರೊ.ಸಪ್ನಾ.ಎಸ್.ಎಂ ಹೇಳಿದರು.

ನಗರದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ ಪತ್ರಿಕೋದ್ಯಮ ವಿಭಾಗ, ಮೈಸೂರು ವಿವಿಯ ಪತ್ರಿಕೋದ್ಯಮ ವಿಭಾಗ, ಯುನಿಸೆಫ್ ಸಹಯೋಗದಲ್ಲಿ ಗುರುವಾರ ನಡೆದ ‘ಮಕ್ಕಳ ಹಕ್ಕುಗಳು, ರಕ್ಷಣೆ ಮತ್ತು ಆರೋಗ್ಯ’ ವಿಷಯದ ಕುರಿತ ಮಾಧ್ಯಮ ಕಾರ್ಯಗಾರದ ಸಮಾರೋಪ ಸಮಾರಂಭದಲ್ಲಿ ಅವರು ಮಾತನಾಡಿದರು.

‘ಅಭಿವೃದ್ಧಿ ಮತ್ತು ಸಕಾರಾತ್ಮಕ ವಿಷಯಗಳ ಬಗ್ಗೆ ಹೆಚ್ಚಿನ ಸುದ್ಧಿಗಳನ್ನು ಮಾಡಬೇಕು. ಸಮಾಜದಲ್ಲಿ ಬದಲಾವಣೆ ತರುವ ಅಭಿಯಾನಗಳ ಮೂಲಕ ವರದಿ ಮಾಡಬೇಕು. ವಿಶೇಷವಾಗಿ, ಪತ್ರಕರ್ತರು ಮಕ್ಕಳ ಧ್ವನಿಯಾಗಿ, ಅವರ ಸಮಸ್ಯೆಗಳನ್ನು, ಅಭಿರುಚಿಗಳನ್ನು, ಸಾಧನೆಗಳನ್ನು ಜನರ ಮುಂದೆ ತರುವುದರಲ್ಲಿ ಪ್ರಮುಖ ಪಾತ್ರ ವಹಿಸಬೇಕು’ ಎಂದರು.

ಮಹಿಳಾ ವಿವಿಯ ಪತ್ರಿಕೋದ್ಯಮ ವಿಭಾಗದ ಮುಖ್ಯಸ್ಥ ಪ್ರೊ.ಓಂಕಾರ ಕಾಕಡೆ ಮಾತನಾಡಿ, ‘ಇತ್ತೀಚಿಗೆ ಅಭಿವೃದ್ಧಿ ವರದಿಗಾರಿಕೆಗೆ ಗಮನ ಕೊಡುವ ಪ್ರಮಾಣವು ಕಡಿಮೆಯಾಗಿದೆ. ಅಭಿವೃದ್ಧಿ ಪತ್ರಿಕೋದ್ಯಮವೇ ನಿಜವಾದ ಪ್ರಗತಿ ಮತ್ತು ಯಶಸ್ಸು ತಂದುಕೊಡುವ ಮಾರ್ಗವಾಗಿದೆ. ಈ ಕ್ಷೇತ್ರದಲ್ಲಿ ಸಾಧನೆ ಮಾಡುವುದಕ್ಕೆ, ಪತ್ರಕರ್ತರು ನಿಸ್ಸಂದೇಹವಾಗಿ ಸಮಾಜದ ಒಳಿತಿಗಾಗಿ ಬದ್ಧರಾಗಿರಬೇಕು’ ಎಂದು ಹೇಳಿದರು.

ಪತ್ರಕರ್ತರು ಮಕ್ಕಳ ಹಕ್ಕುಗಳು, ಶಿಕ್ಷಣ, ಆರೋಗ್ಯ, ಹಾಗೂ ಅವುಗಳಿಗೆ ಸಂಬಂಧಿಸಿದ ಸಮಸ್ಯೆಗಳ ಬಗ್ಗೆ ಹೆಚ್ಚು ಆಳವಾದ, ಸಮಗ್ರ ವರದಿಗಳನ್ನು ಮಾಡಬೇಕು. ಇದರಿಂದಾಗಿ ಸಮಾಜದಲ್ಲಿ ಮಕ್ಕಳ ಅಭಿವೃದ್ದಿಗೆ ಮತ್ತು ಹಕ್ಕುಗಳ ರಕ್ಷಣೆಗೆ ಹೆಚ್ಚಿನ ಪ್ರೋತ್ಸಾಹ ನೀಡಬಹುದು ಎಂದರು.

ಯುನಿಸೆಫ್‍ನ ಪ್ರಸೂನ್ ಸೇನ್, ಪತ್ರಕರ್ತ ಡಿ.ಬಿ.ವಡವಡಗಿ, ಬಸವರಾಜ ಉಳ್ಳಾಗಡ್ಡಿ, ಜಗದೀಶ್, ಸಹಾಯಕ ಪ್ರಾಧ್ಯಾಪಕಿ ತಮೀನಾ ಕೋಲಾರ, ಸಂದೀಪ್ ನಾಯಕ್ ಸೇರಿದಂತೆ ಅನೇಕರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.