ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿದ್ಯಾರ್ಥಿಗಳು ಉದ್ಯೋಗಸ್ಥರಾಗಲಿ: ತುಳಸಿಮಾಲ

ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದಲ್ಲಿ ಉದ್ಯೋಗ ಮೇಳ
Last Updated 25 ನವೆಂಬರ್ 2022, 13:56 IST
ಅಕ್ಷರ ಗಾತ್ರ

ವಿಜಯಪುರ: ಮಹಿಳಾ ವಿಶ್ವವಿದ್ಯಾಲಯದಲ್ಲಿ ಕಲಿಕೆಯಷ್ಟೆ ಅಲ್ಲದೇ ವಿದ್ಯಾರ್ಥಿಗಳು ಉದ್ಯೋಗಸ್ಥರಾಗಬೇಕು, ಸ್ವಾವಲಂಬಿಗಳಾಗಬೇಕು, ಸಶಕ್ತರಾಗಬೇಕೆಂಬ ಆಶಯದೊಂದಿಗೆ ಉದ್ಯೋಗ ಮೇಳವನ್ನು ಹಮ್ಮಿಕೊಳ್ಳಲಾಗಿದೆ. ಇದು ನಮ್ಮ ವಿವಿಯ ವಿದ್ಯಾರ್ಥಿನಿಯರಿಗೆ ಸದವಕಾಶ ಒದಗಿಸಿಕೊಟ್ಟಿದೆ ಎಂದುಕುಲಪತಿ ಪ್ರೊ. ಬಿ.ಕೆ. ತುಳಸಿಮಾಲ ಹೇಳಿದರು.

ನಗರದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಉದ್ಯೋಗ ಮೇಳ ಉದ್ಘಾಟಿಸಿ ಅವರು ಮಾತನಾಡಿದರು.

ಪ್ರಸ್ತುತ ಕಾಲಕ್ಕೆ ತಕ್ಕಂತೆ ಉದ್ಯೋಗದಾತರಿಗೆ ಅವಶ್ಯವಿರುವ ವಿವಿಧ ಕೌಶಲ ಹೊಂದಿದ ಮಾನವ ಸಂಪನ್ಮೂಲಗಳ ಅವಶ್ಯಕತೆಯಿದೆ. ಆದರೆ, ಕೌಶಲ ಕೊರತೆಯಿಂದ ಉದ್ಯೋಗದಾತರಿಗೆ ಹಾಗೂ ಉದ್ಯೋಗಾಕಾಂಕ್ಷಿಗಳಿಗೆ ನಡುವೆ ಅಂತರ ಸೃಷ್ಟಿಯಾಗಿದ್ದು, ಇದನ್ನು ಕೌಶಲ ಅಭಿವೃದ್ಧಿ ಇಲಾಖೆ ಹಾಗೂ ವಿಶ್ವವಿದ್ಯಾಲಯಗಳು ಹೆಚ್ಚು ಮುತುವರ್ಜಿ ವಹಿಸಿ ಕಾರ್ಯಕ್ರಮಗಳನ್ನು ರೂಪಿಸುವುದು ಅತಿ ಅವಶ್ಯಕವಾಗಿದೆ ಎಂದರು.

ಜಿಲ್ಲಾ ಯೋಜನಾ ನಿರ್ದೇಶಕ ರಾಜಶೇಖರ ಡಂಬಳ ಮಾತನಾಡಿ, ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ವಿವಿಧ ಯೋಜನೆಗಳನ್ನು, ಜಿಲ್ಲಾ ಕೌಶಲ ಅಭಿವೃದ್ಧಿ ಇಲಾಖೆಯು ನಿರುದ್ಯೋಗ ಯುವಕ ಯುವತಿಯರಿಗೆ ಕೌಶಲಗಳನ್ನು ನೀಡಿ ಉದ್ಯಮಶೀಲರನ್ನಾಗಿ ಮಾಡುವುದು ಹಾಗೂ ಅವರ ಜೀವನ ಮಟ್ಟವನ್ನು ಸುಧಾರಿಸುವ ನಿಟ್ಟಿನಲ್ಲಿ ಹಲವಾರು ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ. ಅದರ ಸದುಪಯೋಗವನ್ನು ಪಡೆದುಕೊಳ್ಳಬೇಕು ಎಂದು ಸಲಹೆ ಮಾಡಿದರು.

ಈ ಉದ್ಯೋಗ ಮೇಳದಲ್ಲಿ 140 ಅಭ್ಯರ್ಥಿಗಳು ಆಯ್ಕೆಯಾಗಿದ್ದು, 378 ಅಭ್ಯರ್ಥಿಗಳು ಎರಡನೇ ಸುತ್ತಿನ ಸಂದರ್ಶನಕ್ಕೆ ಆಯ್ಕೆಯಾಗಿದ್ದಾರೆ.25 ಕಂಪನಿಗಳು, ಸಂಸ್ಥೆಗಳು ಭಾಗವಹಿಸಿದ್ದವು. 2000 ಕ್ಕಿಂತ ಹೆಚ್ಚು ಅಭ್ಯರ್ಥಿಗಳು ನೋಂದಣಿ ಮಾಡಿಕೊಂಡಿದ್ದರು. ಈ ಪೈಕಿ ಸುಮಾರು 800ಕ್ಕೂ ಹೆಚ್ಚು ಅಭ್ಯರ್ಥಿಗಳು ಈ ಉದ್ಯೋಗ ಮೇಳದಲ್ಲಿ ಭಾಗವಹಿಸಿದ್ದರು ಎಂದು ವಿವಿಯ ಪ್ಲೇಸ್‍ಮೆಂಟ್ ಅಧಿಕಾರಿ ಡಾ.ಬಾಬು ಲಮಾಣಿ ತಿಳಿಸಿದ್ದಾರೆ.

ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿ ಗುರುಪಾದಯ್ಯ ಹಿರೇಮಠ, ಜಿಲ್ಲಾ ಕೌಶಲ ಇಲಾಖೆ, ಸಹಾಯಕ ನಿರ್ದೇಶಕ ದೇವಿಂದ್ರ ಧನಪಾಲ, ವಿವಿಯ ಪ್ಲೇಸ್ಮೆಂಟ್ ಅಧಿಕಾರಿ ಡಾ.ಬಾಬು ಲಮಾಣಿ, ಡಾ. ಸುರೇಖಾ ರಾಠೋಡ, ಸುನಂದಾ ಬಾಲಪ್ಪನವರ, ಸಂತೋಷ ಕಾಮನಕೇರಿ, ಶಶಿಕಾಂತ ಕಟ್ಟಿ, ಸೋಮಶೇಕರ ಆಲಮೇಲ, ರಾಹುಲ ರೆಡ್ಡಿ, ಮುಸ್ತಾಕ್ ಗುಂಡಬಾವಡಿ, ಮಹೆಬುಬ ಬಾಗೇವಾಡಿ ಹಾಗೂ ವಿವಿಯ ಸಿಬ್ಬಂದಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT