ಮುದ್ದೇಬಿಹಾಳ : ‘ಮಾಧ್ಯಮಗಳು ಕನ್ನಡಿಯಂತೆ ಕಾರ್ಯನಿರ್ವಹಿಸಿ ಸಾಮಾಜಿಕ ಬದಲಾವಣೆ ತರಬೇಕು’ ಎಂದರು ಕೆಎಸ್‌ಡಿಎಲ್ ಅಧ್ಯಕ್ಷ, ಶಾಸಕ ಸಿ.ಎಸ್.ನಾಡಗೌಡ(ಅಪ್ಪಾಜಿ) ಹೇಳಿದರು.
ಪಟ್ಟಣದ ಎಪಿಎಂಸಿಯಲ್ಲಿರುವ ದಿ ಕರ್ನಾಟಕ ಕೋ ಆಪ್ ಬ್ಯಾಂಕ್ ಸಭಾಂಗಣದಲ್ಲಿ ತಾಲ್ಲೂಕು ಕಾರ್ಯನಿರತ ಪತ್ರಕರ್ತರ ಸಂಘ ಹಾಗೂ ವಿವಿಧ ಸಂಘಟನೆಗಳ ನೇತೃತ್ವದಲ್ಲಿ ಬುಧವಾರ ಹಮ್ಮಿಕೊಂಡಿದ್ದ ಪ್ರತಿಭಾ ಪುರಸ್ಕಾರ, ಸಾಧಕರಿಗೆ ಸನ್ಮಾನ, ಸೌಲಭ್ಯ ವಿತರಣೆ, ತಾಲ್ಲೂಕು ವಾರ್ಷಿಕ ಪ್ರಶಸ್ತಿ ಪ್ರದಾನ ಸಮಾರಂಭ ಉದ್ಘಾಟಿಸಿ ಮಾತನಾಡಿದರು.
ಯುವ ಉದ್ಯಮಿ ಭರತಗೌಡ ಪಾಟೀಲ ನಡಹಳ್ಳಿ ಮಾತನಾಡಿದರು.
ಅಸ್ಕಿ ಫೌಂಡೇಶನ್ ಅಧ್ಯಕ್ಷ ಸಿ.ಬಿ.ಅಸ್ಕಿ ಮಾತನಾಡಿ, ‘ಫೌಂಡೇಷನ್‌ದಿಂದ ಪತ್ರಕರ್ತರಿಗೆ ಜೀವವಿಮೆ ಸೌಲಭ್ಯ ನೀಡಲಾಗುವುದು’ ಎಂದರು. ಕುಂಟೋಜಿ ಸಂಸ್ಥಾನ ಹಿರೇಮಠದ ಚನ್ನವೀರ ಶಿವಾಚಾರ್ಯರು, ಉಪನ್ಯಾಸಕ ಪರಶುರಾಮ ಚೌಡಕೇರ, ಸಂಘದ ರಾಜ್ಯ ಕಾರ್ಯಕಾರಿಣಿ ಸಮಿತಿ ಸದಸ್ಯ ಡಿ.ಬಿ.ವಡವಡಗಿ ಮಾತನಾಡಿದರು.
ವೀರಶೈವ ಲಿಂಗಾಯತ ಸಮಾಜದ ಅಧ್ಯಕ್ಷ ಪ್ರಭುರಾಜ ಕಲಬುರ್ಗಿ, ದಿ ಕರ್ನಾಟಕ ಕೋ ಆಪ್ ಬ್ಯಾಂಕ್ ಅಧ್ಯಕ್ಷ ಸತೀಶ ಓಸ್ವಾಲ,ಅಹಿಲ್ಯಾದೇವಿ ಹೋಳ್ಕರ್ ಶಿಕ್ಷಣ ಸಂಸ್ಥೆ ಕಾರ್ಯದರ್ಶಿ ಎಂ.ಎನ್.ಮದರಿ, ಕಾನಿಪ ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮೋಹನ ಕುಲಕರ್ಣಿ, ಜಿಲ್ಲಾ ಘಟಕದ ಉಪಾಧ್ಯಕ್ಷ ಪ್ರಕಾಶ ಬೆಣ್ಣೂರ, ರಾಜ್ಯ ಕಾರ್ಯಕಾರಿಣಿ ನಾಮನಿರ್ದೇಶಿತ ಸದಸ್ಯ ಕೆ.ಕೆ.ಕುಲಕರ್ಣಿ,ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಗುರು ತಾರನಾಳ, ನಾಗೇಶ ಎನ್.ಪಿ., ಮತ್ತಿತರರು ಇದ್ದರು.
ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಡಿ ರಕ್ಕಸಗಿ ಗ್ರಾಮದ ಅಂಗವಿಕಲ ಪತ್ರಿಕಾ ವಿತರಕ ಬಸವರಾಜ ಕುಂಟೋಜಿಗೆ ಮಾಸಾಶನ ಸೌಲಭ್ಯದ ಆದೇಶ ಪತ್ರ ನೀಡಲಾಯಿತು.
ಪತ್ರಿಕಾ ವಿತರಿಸುವ ಹುಡುಗರಿಗೆ ಬಟ್ಟೆ, ನಗದು ನೆರವು ವಿತರಿಸಲಾಯಿತು. ಕಾರ್ಯಕ್ರಮದಲ್ಲಿ ವಿವಿಧ ಸಾಧಕರನ್ನು ಸನ್ಮಾನಿಸಲಾಯಿತು.
ಸ್ವಾತಂತ್ರ‍್ಯೋತ್ಸವ ಅಂಗವಾಗಿ ತಾಲ್ಲೂಕಿನ ಎಲ್ಲ ಕಾಲೇಜುಗಳಲ್ಲಿ ಸಂಘದ ವತಿಯಿಂದ ಏರ್ಪಡಿಸಿದ್ದ ಮಾಧ್ಯಮ ಕುರಿತ ಭಾಷಣ ಸ್ಪರ್ಧೆ ವಿಜೇತರಿಗೆ ಬಹುಮಾನ ವಿತರಿಸಲಾಯಿತು.
ಪತ್ರಕರ್ತರಾದ ಅಲ್ಲಾಭಕ್ಷ ನಿಡಗುಂದಿ, ಗುರುನಾಥ ಕತ್ತಿ, ಸಿದ್ದು ಚಲವಾದಿ, ಬಂದೇನವಾಜ ಕುಮಸಿ, ಕಾಶಿನಾಥ ಬಿರಾದಾರ (ನಾಲತವಾಡ), ರಾಜಶೇಖರ ಸಜ್ಜನ (ಢವಳಗಿ), ಬಸವರಾಜ ಹುಲಗಣ್ಣಿ, ಚೇತನ ಶಿವಶಿಂಪಿ, ಪುಂಡಲೀಕ ಮುರಾಳ, ಮಕ್ಬುಲ್ ಬನ್ನೆಟ್ಟಿ ಅವರಿಗೆ ವಾರ್ಷಿಕ ಪ್ರಶಸ್ತಿ ಹಾಗೂ ನೂರೇನಬಿ ನದಾಫಗೆ ವಿಶೇಷ ಪ್ರಶಸ್ತಿ ನೀಡಿ ಪುರಸ್ಕರಿಸಲಾಯಿತು.
ಸಂಗಮೇಶ ಶಿವಣಗಿ ತಂಡದವರು ಪ್ರಾರ್ಥಿಸಿದರು. ಎಚ್.ಆರ್.ಬಾಗವಾನ ಸ್ವಾಗತಿಸಿದರು. ಗೋಪಾಲ ಹೂಗಾರ ನಿರೂಪಿಸಿದರು. ಸಂಘದ ತಾಲ್ಲೂಕು ಘಟಕದ ಅಧ್ಯಕ್ಷ ಮುತ್ತು ವಡವಡಗಿ ವಂದಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.