ಭಾನುವಾರ, 26 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಿಜೆಪಿ ಅಭ್ಯರ್ಥಿ ಜಿಗಜಿಣಗಿ ನಾಮಪತ್ರ ಸಲ್ಲಿಕೆ ಇಂದು

Published 15 ಏಪ್ರಿಲ್ 2024, 15:50 IST
Last Updated 15 ಏಪ್ರಿಲ್ 2024, 15:50 IST
ಅಕ್ಷರ ಗಾತ್ರ

ವಿಜಯಪುರ: ವಿಜಯಪುರ ಲೋಕಸಭಾ ಕ್ಷೇತ್ರದ ಬಿಜೆಪಿ‌–ಜೆಡಿಎಸ್ ಮೈತ್ರಿ ಅಭ್ಯರ್ಥಿ ರಮೇಶ ಜಿಗಜಿಣಗಿ ಏ.16 ಬೆಳಿಗ್ಗೆ 10ಕ್ಕೆ ನಗರದ ಬಿಜೆಪಿ ಚುನಾವಣಾ ಕಾರ್ಯಾಲಯದ ಬಳಿಯ ಮಧುಲಾ ಮಾರುತಿ ದೇವಸ್ಥಾನದಲ್ಲಿ ಪೂಜೆ ನೆರವೇರಿಸಿ, ಅಲ್ಲಿಂದ ಡಾ.ಬಿ.ಆರ್.ಅಂಬೇಡ್ಕರ್ ವೃತ್ತದ ವರೆಗೂ ಕಾರ್ಯಕರ್ತರೊಂದಿಗೆ‌‌ ಬೃಹತ್ ಶೋಭಾಯಾತ್ರೆ ಮೂಲಕ ತೆರಳಿ ಚುನಾವಣಾಧಿಕಾರಿಗೆ‌ ನಾಮಪತ್ರ ಸಲ್ಲಿಸಲಿದ್ದಾರೆ.

ನಂತರ ಮಧ್ಯಾಹ್ನ 12ಕ್ಕೆ ದರ್ಬಾರ್ ಮೈದಾನದಲ್ಲಿ ಬೃಹತ್ ಬಹಿರಂಗ ಸಮಾವೇಶ ಜರುಗಲಿದೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಆರ್.ಎಸ್.ಪಾಟೀಲ್‌ ಕುಚಬಾಳ ತಿಳಿಸಿದ್ದಾರೆ.

ಬಿಜೆಪಿ‌ ಅಭ್ಯರ್ಥಿ ರಮೇಶ ಜಿಗಜಿಣಗಿ ಅವರ ನಾಮಪತ್ರ ಸಲ್ಲಿಕೆ ವೇಳೆ‌ ವಿರೋಧ ಪಕ್ಷದ ಉಪನಾಯಕ ಅರವಿಂದ ಬೆಲ್ಲದ, ಶಾಸಕ ಬಸನಗೌಡ ಪಾಟೀಲ್ ಯತ್ನಾಳ, ಸಿ.ಟಿ.ರವಿ, ಕಲಬುರ್ಗಿ ಸಂಸದ ಉಮೇಶ ಜಾಧವ, ನಾರಾಯಣಸಾ ಭಾಂಡಗೆ, ಹಾಲಪ್ಪ ಆಚಾರ, ಜಗದೀಶ ಹಿರೇಮನಿ ಭಾಗಿಯಾಗಲಿದ್ದಾರೆ. ಜೊತೆಗೆ ಜಿಲ್ಲೆಯ ಬಿಜೆಪಿ ಹಾಗೂ ಜೆಡಿಎಸ್ ಪಕ್ಷದ ನಾಯಕರು, ಪ್ರಮುಖರು, ಕಾರ್ಯಕರ್ತರು ಶೋಭಾಯಾತ್ರೆ ಮತ್ತು ಸಮಾವೇಶದಲ್ಲಿ ಪಾಲ್ಗೊಂಡು ಬಿಜೆಪಿ‌ ಅಭ್ಯರ್ಥಿ ರಮೇಶ ಜಿಗಜಿಣಗಿ ಅವರಿಗೆ ಶಕ್ತಿ ತುಂಬಲಿದ್ದಾರೆ ಎಂದು ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT