ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ವಿಜಯಪುರ | ಕಡ್ಡಾಯವಾಗಿ ಮತದಾನ ಮಾಡಿ: ಚುನಾವಣಾಧಿಕಾರಿ ಟಿ.ಭೂಬಾಲನ್

Published 7 ಏಪ್ರಿಲ್ 2024, 14:10 IST
Last Updated 7 ಏಪ್ರಿಲ್ 2024, 14:10 IST
ಅಕ್ಷರ ಗಾತ್ರ

ವಿಜಯಪುರ: ಜಿಲ್ಲೆಯಲ್ಲಿ ಮತದಾನದ ಪ್ರಮಾಣವನ್ನು ಹೆಚ್ಚಿಸುವುದು ನಮ್ಮೆಲ್ಲರ ಜವಾಬ್ದಾರಿಯಾಗಿದೆ. ಎಲ್ಲರೂ ಕಡ್ಡಾಯವಾಗಿ ಮತದಾನ ಮಾಡುವಂತೆ ಕ್ರಿಯಾತ್ಮಕ ಯೋಜನೆಗಳನ್ನು ಹಮ್ಮಿಕೊಳ್ಳಬೇಕು ಎಂದು ಜಿಲ್ಲಾ ಚುನಾವಣಾಧಿಕಾರಿ ಟಿ.ಭೂಬಾಲನ್ ಹೇಳಿದರು.

ಲೋಕಸಭಾ ಸಾರ್ವತ್ರಿಕ ಚುನಾವಣೆ ಹಿನ್ನೆಲೆಯಲ್ಲಿ ಭಾನುವಾರ ಜಿಲ್ಲಾಡಳಿತ, ಜಿಲ್ಲಾ ಸ್ವೀಪ್ ಸಮಿತಿ ಜಿಲ್ಲಾ ಪಂಚಾಯ್ತಿ ಹಾಗೂ ಮಹಾನಗರ ಪಾಲಿಕೆ ಆಶ್ರಯದಲ್ಲಿ ನಗರದ ದರಬಾರ ಸಮೂಹ ಶಿಕ್ಷಣ ಸಂಸ್ಥೆಯ ಆವರಣದಲ್ಲಿ ಮತದಾರರ ಪ್ರತಿಜ್ಞಾವಿಧಿ ಕೋಣೆಯ ಉದ್ಘಾಟಿಸಿ ಅವರು ಮಾತನಾಡಿದರು.

ಜಿಲ್ಲೆಯ ಪ್ರತಿ ಗ್ರಾಮಗಳಲ್ಲಿ ಮತದಾನವು ಶೇ 100ರಷ್ಟು ಆಗಬೇಕು. ಅದಕ್ಕಾಗಿ ಎಲ್ಲಾ ಅಧಿಕಾರಿಗಳು ಸಮನ್ವಯದಿಂದ ಕಾರ್ಯನಿರ್ವಹಿಸಬೇಕು. ಅನೇಕ ಜನರು ಬೇರೆ ರಾಜ್ಯ ಹಾಗೂ ಜಿಲ್ಲೆಗಳಿಗೆ ವಲಸೆ ಹೋಗಿರುತ್ತಾರೆ. ಅಂತಹವರನ್ನು ಕರೆ ಮಾಡುವ ಮೂಲಕ ಸಂಪರ್ಕಿಸಿ ಅವರಿಗೂ ಸಹ ಮತದಾನದ ಕುರಿತು ಮಾಹಿತಿ ನೀಡಿ ಮತದಾನದಲ್ಲಿ ಭಾಗಿಯಾಗಲು ಪ್ರೇರೇಪಣೆ ನೀಡುವುದು ನಮ್ಮೆಲ್ಲರ ಹೊಣೆಯಾಗಿದೆ ಎಂದರು.

ಜಿಲ್ಲೆಯ ಎಲ್ಲಾ ಜನತೆಗೆ ಮತದಾನ ಮಾಡಲು ಮತದಾನ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಮತದಾನದ ಪ್ರಮಾಣ ಹೆಚ್ಚಿಸಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.

ವಿಜಯಪುರ ಮಹಾನಗರ ಪಾಲಿಕೆಯ ಉಪ ಆಯುಕ್ತ ಮಹಾವೀರ ಬೋರಣ್ಣವರ  ಮತದಾರರ ಪ್ರತಿಜ್ಞಾ ವಿಧಿ ಬೋಧಿಸಿದರು.

ವಿಜಯಪುರ ಮಹಾನಗರ ಪಾಲಿಕೆ ಆಯುಕ್ತ ಅಶಾದ ಉರ್ ರೆಹಮಾನ್ ಶರೀಫ್, ಜಿಲ್ಲಾ ಸ್ವೀಪ್ ಸಮಿತಿ ನೋಡಲ್ ಅಧಿಕಾರಿ ಸಿ.ಆರ್.ಮುಂಡರಗಿ, ಉಪಕಾರ್ಯದರ್ಶಿ ಬಿ.ಎಸ್.ಮೂಗನೂರಮಠ, ವಿಜಯಪುರ ತಾಲ್ಲೂಕು  ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಕೆ.ಹೊಂಗಯ್ಯ, ತಹಶೀಲ್ದಾರ್‌ ಕವಿತಾ, ಜಿ.ಪಂ. ಯೋಜನಾ ಅಂದಾಜು ಮತ್ತು ಮೌಲ್ಯಮಾಪನಾಧಿಕಾರಿ ಎ. ಬಿ. ಅಲ್ಲಾಪೂರ, ರಾಜಶೇಖರ ದೈವಾಡಿ, ಜಿ.ಪಂ.ಸಿಬ್ಬಂದಿ ಎ.ಎಸ್.ಓ ರಾವ್ ಬಹದ್ದೂರ್ ಬಾಗವಾನ, ಸುರೇಶ ಕೊಂಡಗುಳಿ, ಸುವರ್ಣ ಭಜಂತ್ರಿ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT